<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಂಗಳೂರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಗುಡ್ ನ್ಯೂಸ್? ಹೊಸ ಕಾನೂನು ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಚರ್ಚೆ

ಬೆಂಗಳೂರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಗುಡ್ ನ್ಯೂಸ್? ಹೊಸ ಕಾನೂನು ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಚರ್ಚೆ
Summary: There is a plan to formulate a new law regarding the management of apartments, problems of residents and the administrative system. Chief Minister DK Shivakumar will hold consultations with apartment residents in this regard.

belagavi news :

ಬೆಂಗಳೂರು: ಅಪಾರ್ಟ್ ಮೆಂಟ್ ಗಳ ನಿರ್ವಹಣೆ ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಹೊಸ ಹಾಗೂ ಸುಧಾರಿತ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಅಪಾರ್ಟ್ ಮೆಂಟ್ ಮಾಲೀಕರು ಹಲವು ವರ್ಷಗಳಿಂದ ಈ ಕುರಿತು ಬೇಡಿಕೆ ಇಟ್ಟಿದ್ದು, ಅವರ ಸಮಸ್ಯೆಗಳನ್ನು ಪರಿಗಣಿಸಿ ಹೊಸ ಕಾನೂನು ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಅಪಾರ್ಟ್ ಮೆಂಟ್ ಗಳ ಆಡಳಿತ, ನಿರ್ವಹಣೆ ಹಾಗೂ ಮಾಲೀಕರ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾನೂನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಹೊಸ ಅಪಾರ್ಟ್ ಮೆಂಟ್ ಕಾನೂನನ್ನು ವಿಧಾನ ಮಂಡಲದಲ್ಲಿ ಮಂಡಿಸುವ ಮೊದಲು ಎಲ್ಲಾ ಪಾಲುದಾರರ ಅಭಿಪ್ರಾಯಗಳನ್ನು ಪಡೆಯಲು ರಾಜ್ಯ ಸರ್ಕಾರ ಸಮಾಲೋಚನಾ ಸಭೆ ಆಯೋಜಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ರೂಪಿಸಲಾಗುತ್ತಿರುವ ಈ ಕಾನೂನಿನ ಕುರಿತು ಚರ್ಚಿಸಲು ಜುಲೈ 17ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಜವಾಹರ್ ಲಾಲ್ ನೆಹರೂ ತಾರಾಲಯದ ಸಭಾಭವನದಲ್ಲಿ ಸಭೆ ನಡೆಯಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭರೇಗೌಡ ತಿಳಿಸಿದ್ದಾರೆ.

ಅಪಾರ್ಟ್ ಮೆಂಟ್ ನಿವಾಸಿಗಳು, ಮಾಲೀಕರು ಹಾಗೂ ಸಂಬಂಧಿತ ಕ್ಷೇತ್ರದ ಪಾಲುದಾರರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online