<?= $pageTitle ?>
Logo
ಮುಖಪುಟ ಓದುವುದು ಕೇಳು
Entertainment

ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : 'ಜನ ನಾಯಗನ್' ಜುಲೈ 23ರಂದು ತೆರೆಗೆ

ವಿಜಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : 'ಜನ ನಾಯಗನ್' ಜುಲೈ 23ರಂದು ತೆರೆಗೆ
Summary: Dalapati Vijay fans have received great news, his much-awaited and last film 'Jana Nayagan' will be released on July 23. Fans are eagerly waiting for the release of this film, which is a milestone in Vijay's career. The film is expected to receive a great response.

belagavi news :

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಜನ ನಾಯಗನ್' ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ವಿಜಯ್ ಅವರ ಸಿನಿ ಪಯಣದ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ಈ ಸಿನಿಮಾಗೆ ಅಭಿಮಾನಿಗಳಲ್ಲಿ ಬಾರಿ ನಿರೀಕ್ಷೆ ಮೂಡಿದೆ.

'ಜನ ನಾಯಗನ್' ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಬಿಡುಗಡೆ ದಿನಾಂಕಕ್ಕಾಗಿ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದೀಗ ಭರ್ಜರಿ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಎದುರಾಗಿದ್ದ ಕಾನೂನು ವಿಚಾರಗಳು ಮತ್ತು ಸೆನ್ಸಾರ್ ಸಂಬಂಧಿತ ಸಮಸ್ಯೆಗಳು ಬಗೆಹರಿದ ಬಳಿಕ, 'ಜನ ನಾಯಗನ್' ಬಿಡುಗಡೆಗೆ ವೇದಿಕೆ ಸಿದ್ಧವಾಗಿದೆ.

ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಿರುವ ಈ ಸಿನಿಮಾ ವಿಜಯ್ ಅವರ ವೃತ್ತಿ ಜೀವನದ ವಿಶೇಷ ಚಿತ್ರವಾಗಿದ್ದು, ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆಯುವ ನಿರೀಕ್ಷೆಯೊಂದಿಗೆ ಚಿತ್ರತಂಡ ಬಿಡುಗಡೆಗೆ ಸಜ್ಜಾಗಿದೆ.

'ಜನ್ ನಾಯಗನ್' ಬಿಡುಗಡೆ ದಿನಾಂಕ ಘೋಷಣೆ : ವಿಜಯ್ ಅಭಿಮಾನಿಗಳ ಕಾಯುವಿಕೆ ತೆರೆ

ದಳಪತಿ ವಿಜಯ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಜನ ನಾಯಗನ್' ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದ್ದು, ಅಭಿಮಾನಿಗಳ ತಿಂಗಳುಗಳ ಕಾಯುವಿಕೆಗೆ ತೆರೆ ಬಿದ್ದಿದೆ. ನಟ ವಿಜಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಚಿತ್ರದ ರಿಲೀಸ್ ದಿನಾಂಕವನ್ನು ಪ್ರಕಟಿಸಿದ್ದಾರೆ.

ಇತ್ತೀಚಿಗೆ ಸೆನ್ಸಾರ್ ಮಂಡಳಿಯಿಂದ 'ಎ' ಪ್ರಮಾಣ ಪತ್ರ ಪಡೆದಿರುವ 'ಜನ ನಾಯಗನ್' ಸಿನಿಮಾ ಜುಲೈ 23 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ವಿಜಯ್ ಅವರ ಸಿನಿ ಪಯಣದ ಪ್ರಮುಖ ಚಿತ್ರವಾಗಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳಲ್ಲಿ ಬಾರಿ ನಿರೀಕ್ಷೆ ಮೂಡಿದೆ.

ಕೆವಿಎನ್ ಪ್ರೊಡಕ್ಷನ್ ಪೋಸ್ಟರ್ ಗೆ ಭರ್ಜರಿ ಪ್ರತಿಕ್ರಿಯೆ

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದ್ದು, ಬಿಡುಗಡೆ ದಿನಾಂಕ ಘೋಷಣೆ ವೇಳೆ ವಿಶೇಷ ಪೋಸ್ಟ್ ಹಂಚಿಕೊಂಡಿದೆ

"ಬೆಂಕಿಯಿಂದ ಪರೀಕ್ಷಿಸಲ್ಪಟ್ಟಿದೆ. ಸಮಯದಿಂದ ರೂಪಿಸಲ್ಪಟ್ಟಿದೆ. ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಹೋರಾಟ ಎಷ್ಟು ಕಠಿಣವಾಗಿರುತ್ತದೆಯೋ, ಜಯ ಅಷ್ಟೇ ಭರ್ಜರಿಯಾಗಿರುತ್ತದೆ" ಎಂಬ ಅರ್ಥದ ಸಂದೇಶದೊಂದಿಗೆ ಸಂಸ್ಥೆ ಪೋಸ್ಟ್ ಮಾಡಿದ್ದು, ವಿಜಯ್ ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.

'ಜನ ನಾಯಗನ್' ಸಿನಿಮಾ ವಿಜಯ್ ಅವರ ಕೊನೆಯ ಚಿತ್ರ ಎಂಬ ಕಾರಣಕ್ಕೆ ಈಗಾಗಲೇ ಬಾರಿ ಕುತೂಹಲ ಸೃಷ್ಟಿಸಿದ್ದು, ಜುಲೈ 23ರ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಏಳು ತಿಂಗಳ ಸುಧೀರ್ಘ ಹೋರಾಟದ ಬಳಿಕ 'ಜನ ನಾಯಗನ್' ಬಿಡುಗಡೆಗೆ ಸಜ್ಜು

ದಳಪತಿ ವಿಜಯ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಜನ ನಾಯಗನ್' ಹಲವು ಅಡೆತಡೆಗಳನ್ನು ದಾಟಿ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ನಡೆಸಿದ ತಿಂಗಳುಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ.

ವಾಸ್ತವವಾಗಿ 'ಜನ ನಾಯಗನ್'ಸಿನಿಮಾ ಈ ವರ್ಷದ ಆರಂಭದಲ್ಲೇ,ಅಂದರೆ ಜನವರಿ 9 ರಂದು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ತೆರಿಗೆ ಬರಬೇಕಿತ್ತು. ಆದರೆ ಸೆನ್ಸಾರ್ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆದ ಕಾನೂನು ಪ್ರಕ್ರಿಯೆಗಳ ಕಾರಣದಿಂದ ಚಿತ್ರದ ಬಿಡುಗಡೆ ಮುಂದೂಡಲಾಗಿತ್ತು.

ಇದರ ಜೊತೆಗೆ ಚಿತ್ರದ ಕೆಲವು ಪ್ರಮುಖ ದೃಶ್ಯಗಳು ಆನ್ಲೈನ್ ನಲ್ಲಿ ಸೋರಿಕೆಯಾಗಿದ್ದು, ಚಿತ್ರತಂಡಕ್ಕೆ ಮತ್ತೊಂದು ಸವಾಲಾಗಿ ಪರಿಣಮಿಸಿತ್ತು. ಈ ಎಲ್ಲಾ ಸಮಸ್ಯೆಗಳ ನಡುವೆಯೂ ಚಿತ್ರತಂಡ ನಿರಂತರ ಪ್ರಯತ್ನ ನಡೆಸಿ, ಇದೀಗ ಎಲ್ಲಾ ಅಡೆತಡೆಗಳನ್ನು ಮೀರಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವಲ್ಲಿ ಯಶಸ್ವಿಯಾಗಿದೆ.

ವಿಜಯ್ ಅವರ ಸಿನಿ ಪಯಣದ ವಿಶೇಷ ಚಿತ್ರವೆಂದು ಪರಿಗಣಿಸಲಾಗುತ್ತಿರುವ 'ಜನ ನಾಯಗನ್' ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಬಾರಿ ಸಂಭ್ರಮ ಮನೆ ಮಾಡಿದೆ. ಸಿನಿಮಾ ಭರ್ಜರಿ ಯಶಸ್ಸು ಕಾಣಲಿ ಎಂಬ ನಿರೀಕ್ಷೆಯೊಂದಿಗೆ ವಿಜಯ್ ಅಭಿಮಾನಿಗಳು ಜುಲೈ 23ರತ್ತ ಕಾತರದಿಂದ ನೋಡುತ್ತಿದ್ದಾರೆ.

ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಯ ಬರೆದಿರುವ ವಿಜಯ್ ಅವರ ಕೊನೆಯ ಸಿನಿಮಾ 'ಜನ ನಾಯಗನ್' ಗುರುತಿಸಿಕೊಂಡಿರುವುದರಿಂದ, ಚಿತ್ರದ ಮೇಲಿನ ಕ್ರೇಜ್ ದುಪ್ಪಟ್ಟಾಗಿದೆ. ಈಗಾಗಲೇ ಚಿತ್ರದ ಹಲವು ದೃಶ್ಯಗಳು ಆನ್ಲೈನ್ ನಲ್ಲಿ ಸೋರಿಕೆ ಆಗಿರುವುದು ಚಿತ್ರತಂಡಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬುವುದು ಕಾದು ನೋಡಬೇಕಿದೆ.

ಖ್ಯಾತ ನಿರ್ದೇಶಕ ಎಚ್.ವಿನೋದ್ ನಿರ್ದೇಶನದ ಈ ಬಿಗ್ ಬಜೆಟ್ ರಾಜಕೀಯ ಆಕ್ಷನ್ ಡ್ರಾಮಾದಲ್ಲಿ ವಿಜಯ್ ಅವರಿಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ.ಚಿತ್ರದಲ್ಲಿ ಬಾಬಿ ಡಿಯೋಲ್,ಮಮಿತಾ ಬೈಜು,ಪ್ರಕಾಶ್ ರಾಜ್,ಗೌತಮ್ ವಾಸುದೇವ್ ಮೆನನ್,ಪ್ರಿಯಾಮಣಿ ಮತ್ತು ನರೇನ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ.

' ಜನ ನಾಯಗನ್'ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದ್ರರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಭರ್ಜರಿ ತಾರಾಗಣ, ದೊಡ್ಡ ಬಜೆಟ್ ಹಾಗೂ ವಿಜಯ ಅವರ ಕೊನೆಯ ಸಿನಿಮಾ ಎಂಬ ವಿಶೇಷತೆಯಿಂದ ಈ ಚಿತ್ರವು ಬಿಡುಗಡೆಗು ಮುನ್ನವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online