<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Corporate

ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರೈಲ್ವೆ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Summary: The recruitment process for 11,127 Assistant Loco Pilot posts has begun in Indian Railways under RRB ALP Recruitment 2026.

Belagavi news:

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಭರ್ಜರಿ ಅವಕಾಶ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸುಮಾರು 11,127 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಬರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೆಯಲ್ಲಿ ತಾಂತ್ರಿಕ ವೃತ್ತಿ ಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ.

ಅಧಿಕೃತ ಮಾಹಿತಿ ಪ್ರಕಾರ, ಮೇ 15ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಜೂನ್ 14ರವರೆಗೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು :

Sponsored

10ನೇ ತರಗತಿ ಉತ್ತೀರ್ಣರಾಗಿರುವವರ ಜೊತೆಗೆ ಐಟಿಐ, ಡಿಪ್ಲೋಮಾ ಅಥವಾ ಬಿಇ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತಾಂತ್ರಿಕ ಕ್ಷೇತ್ರದಲ್ಲಿ ಶಿಕ್ಷಣ ಪಡೆದ ಯುವಕರಿಗೆ ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಇದು ಸುವರ್ಣ ಅವಕಾಶವಾಗಿದೆ.

ಆಯ್ಕೆ ಪ್ರಕ್ರಿಯೆ ಬಗ್ಗೆ ನೋಡುವುದಾದರೆ:

RRB ALP ನೇಮಕಾತಿಗೆ ಒಟ್ಟು ಐದು ಹಂತಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ತಾಂತ್ರಿಕ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷಿಸಿದಂತೆ ವಿವಿಧ ಹಂತಗಳನ್ನು ಅಭ್ಯಾಸಗಳು ಎದುರಿಸಬೇಕಾಗುತ್ತದೆ.

ಭಾರತೀಯ ರೈಲ್ವೆ ದೇಶದ ಅತಿ ದೊಡ್ಡ ಉದ್ಯೋಗ ದಾತ ಸಂಸ್ಥೆಗಳಲ್ಲಿ ಒಂದಾಗಿದ್ದು, ALP ಹುದ್ದೆಗಳು ಉತ್ತಮ ವೇತನ ಮತ್ತು ಭದ್ರ ಭವಿಷ್ಯವನ್ನು ಒದಗಿಸುತ್ತವೆ. ಹೀಗಾಗಿ ಲಕ್ಷಾಂತರ ಅಭ್ಯರ್ಥಿಗಳು ಈ ನೇಮಕಾತಿಯತ್ತ ಕಣ್ಣಿಟ್ಟಿದ್ದಾರೆ.

Sponsored

RRB ALP Recruitment 2026ರ ಕುರಿತ ಅರ್ಹತೆ, ವಯೋಮಿತಿ, ವೇತನ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

ರೈಲ್ವೆಯಲ್ಲಿ ಹುದ್ದೆಗಳಿಗೆ ಅರ್ಜಿ ಆರಂಭವಾಗಿದೆ. ಪ್ರಮುಖ ದಿನಾಂಕಗಳು ಅರ್ಹತೆ ವಿವರ ಈ ಕೆಳಗಿನಂತಿದೆ:

ರೈಲ್ವೆ ನೇಮಕಾತಿ ಮಂಡಳಿ 11,127 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಬರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ 15 ರಿಂದ ಆರಂಭವಾಗಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಜಿಲ್ಲೆಗಳಿಗೆ ಜೂನ್ 14ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ, ತಮ್ಮ ಆದ್ಯತೆಯ ರೈಲ್ವೆ ವಲಯವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮಂಡಳಿ ತಿಳಿಸಿದೆ.

Sponsored

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ:

RRB ALP ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಸಂಪೂರ್ಣವಾಗಿ ಆನ್ಲೈನ್ ಮೂಲಕ ಮಾತ್ರ ಸಾಧ್ಯ. ಮೇ 15ರಿಂದ ಆರಂಭವಾದ ಅರ್ಜಿ ಪ್ರಕ್ರಿಯೆ ಜೂನ್ 14ರಂದು ಕೊನೆಗೊಳ್ಳಲಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ತಮ್ಮ ವಿವರಗಳನ್ನು ನಮೂದಿಸಿ ಅರ್ಜಿ ಸಲ್ಲಿಸಬೇಕು.

ಶೈಕ್ಷಣಿಕ ಅರ್ಹತೆ ಏನು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿತ ಟ್ರೆಂಡ್ ಗಳಲ್ಲಿ ಐಟಿಐ ಪ್ರಮಾಣ ಪತ್ರ ಅಥವಾ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/BE/B.Tech ಪದವಿ ಹೊಂದಿರಬೇಕು.

Sponsored

ವಯೋಮಿತಿ ಮಾನದಂಡಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷದೊಳಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ತಡಿಲಿಕೆ ಅನ್ವಯವಾಗಲಿದೆ.

RRB ALP RECRUITMENT 2026 ಭಾರತೀಯ ರೈಲ್ವೆಯಲ್ಲಿ ಸ್ಥಿರ ಹಾಗೂ ಗೌರವಯುತ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ದೊಡ್ಡ ಅವಕಾಶವಾಗಿದ್ದು, ಲಕ್ಷಾಂತರ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

ಆಯ್ಕೆ ಹಂತಗಳನ್ನು ನೋಡುವುದಾದರೆ:

Sponsored

ಒಟ್ಟು ಐದು ಆಯ್ಕೆ ಹಂತಗಳಿವೆ, ಮೊದಲನೇ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ಅದನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಹಂತವಾದ ಎರಡನೇ ಹಂತದಲ್ಲಿ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ನಂತರ ಆಪ್ಟಿಟ್ಯೂಡ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಅಂತಿಮವಾಗಿ ಕಟ್ಟುನಿಟ್ಟಾದ ವೈದ್ಯಕೀಯ ತಪಾಸನೆ ನಡೆಯಲಿದೆ.

ಪರೀಕ್ಷಾ ಮಾದರಿ ಮತ್ತು ನೆಗೆಟಿವ್ ಮಾರ್ಕಿಂಗ್ :

ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ 1/3 ಅಂಕಗಳ ಕಡಿತ ಇರುವ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಉತ್ತರಿಸುವಾಗ ಹೆಚ್ಚಿನ ಎಚ್ಚರಿಕೆವಹಿಸುವುದು ಅಗತ್ಯವಾಗಿದೆ. ಸಮಯ ನಿರ್ವಹಣೆ ಮತ್ತು ನಿಖರತೆ ಈ ಪರೀಕ್ಷೆಯಲ್ಲಿ ಯಶಸ್ಸಿಗೆ ಪ್ರಮುಖ ಅಂಶಗಳಾಗಿವೆ.

ಅಂತಿಮ ಆಯ್ಕೆಯನ್ನು ನೋಡುವುದಾದರೆ:

Sponsored

ಅಂತಿಮ ಮೆರಿಟ್ ಪಟ್ಟಿಯನ್ನು CBT -2 ಮತ್ತು ಆಪ್ಟಿಟ್ಯೂಡ್ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಿದ್ಧಪಡಿಸಲಾಗುತ್ತದೆ. ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳನ್ನು ಅಂತಿಮವಾಗಿ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ. RRB ALP Recruitment 2026 ಪ್ರಕ್ರಿಯೆ ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಉತ್ತಮ ತಯಾರಿಯೊಂದಿಗೆ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

Also Read:

ತುಂಗಭದ್ರಾ ಸೇತುವೆಯಲ್ಲಿ ಭೀಕರ ದುರಂತ: ಟ್ರ್ಯಾಕ್ಟರ್ ಪತನದಿಂದ 7 ಜನರ ಸಾವು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online