Belagavi News :
ಮುಖ್ಯಾಂಶಗಳು;
• ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಕೇಂದ್ರ ಕಠಿಣ ನಿರ್ಧಾರ ತೆಗೆದುಕೊಂಡಿದೆ
• ಆರೋಪಿಗಳಿಗೆ 10 ವರ್ಷ ಶಿಕ್ಷೆ, ₹ 10 ಕೋಟಿ ರೂ ದಂಡ
• ನೀಟ್ ವಿಚಾರದಲ್ಲಿ ಕೇಂದ್ರ ಸರ್ಕಾರ ಬಹಳ ಗಂಭೀರವಾಗಿದೆ.
ಪರೀಕ್ಷಾ ಆಕ್ರಮ ತಡೆಗೆ ಕಠಿಣ ಕಾನೂನು: 10 ವರ್ಷ ಜೈಲು, ₹10 ಕೋಟಿ ದಂಡ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಧಾರವಾಡ: ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರೀಕ್ಷಾ ಆಕ್ರಮಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, " ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಅನ್ ಫೇರ್ ಆಕ್ಟ್ 2024" ಜಾರಿಗೆ ತಂದಿದೆ ಎಂದು ತಿಳಿಸಿದ್ದಾರೆ.
ಈ ಕಾಯ್ದೆಯಡಿ ಪರೀಕ್ಷಾ ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು ಐದು ವರ್ಷಗಳಿಂದ 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಜೊತೆಗೆ ತಪ್ಪಿತಸ್ಥರಿಗೆ ₹10 ಕೋಟಿ ದಂಡ ವಿಧಿಸುವ ಅವಕಾಶವಿದೆ ಎಂದು ಸಚಿವರು ಹೇಳಿದ್ದಾರೆ.
ಹಿಂದಿ ಪರೀಕ್ಷಾ ಅಕ್ರಮಗಳ ಸಂದರ್ಭದಲ್ಲಿ ಇಂತಹ ಕಠಿಣ ಕ್ರಮಗಳು ಕೈಗೊಳ್ಳಲಾಗುತ್ತಿರಲಿಲ್ಲ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಬಂಧನ ಕ್ರಮ ಕೈಗೊಳ್ಳಲಾಗಿದ್ದು, ಜಾಮೀನುರಹಿತ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.
NEET ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗಾಗಿ ಮರು NEET ಪರೀಕ್ಷೆ ನಡೆಸಲಾಗಿದ್ದು, ಕೇಂದ್ರ ಸರ್ಕಾರ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.