BELAGAVI NEWS:
ಮಾಲೂರು ಜೂನ್ 9: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ತೊರ್ನಹಳ್ಳಿ ಸಮೀಪದ ಸುಮಾರು 16 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಾಡಿ ಶಾಸಕ ಕೆ.ಎಸ್ ಮಂಜುನಾಥ್ ಗೌಡ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಧಿಡೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ವೇಳೆ ತಹಶೀಲ್ದಾರ್ ರೂಪ ಅವರನ್ನು ದಾಖಲೆಗಳ ಸಮೇತ ಪ್ರಶ್ನಿಸಿದ ಮಾಜಿ ಶಾಸಕರು, ತೊರ್ನಹಳ್ಳಿ ಬಳಿಯಿರುವ ಈ 16 ಎಕರೆ ಭೂಮಿ 1961ರ ಸರಕಾರಿ ದಾಖಲೆಗಳ ಪ್ರಕಾರ ಸರ್ಕಾರದ ಜಮೀನಾಗಿಯೇ ದಾಖಲಾಗಿತ್ತು ಎಂದು ತಿಳಿಸಿದರು.
ಆದರೆ, 1963ರಲ್ಲಿ ಸರ್ಕಾರಿ ರಜಾ ದಿನದಂದೇ ಕೆಲ ಅಧಿಕಾರಿಗಳ ಸಹಕಾರದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಶೋಕ್ ಜೈನ್ ಎಂಬುವರ ಹೆಸರಿಗೆ ಕಾನೂನುಬಾಹಿರವಾಗಿ ಖಾತೆ ಬದಲಾವಣೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಪ್ರಕ್ರಿಯೆಯಲ್ಲಿ ಭೂ ದಾಖಲೆಗಳಲ್ಲಿ ಅಕ್ರಮ ತಿದ್ದುಪಡಿ ನಡೆಸಲಾಗಿದೆ ಎಂದು ಗಂಭೀರ ಆರಂಭವನ್ನು ಮಾಡಿದರು.
ಸದ್ಯ ಈ ಜಮೀನಿನ ಮಾರುಕಟ್ಟೆ ಮೌಲ್ಯ ಸುಮಾರು ₹80 ಕೋಟಿ ಎಂದು ಅಂದಾಜಿಸಲಾಗಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಆರೋಪಗಳು ಸ್ಥಳೀಯ ಆಡಳಿತದಲ್ಲಿ ಸಂಚಲನ ಮೂಡಿಸಿದ್ದು, ಸರ್ಕಾರಿ ಭೂಮಿ ಕಬಳಿಕೆ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.
ಕೋಲಾರ್ ಜಿಲ್ಲೆಯ ಮಾಲೂರು ತಾಲೂಕಿನ ತೊರ್ನಹಳ್ಳಿ ಬಳಿ ನಡೆದ ಸುಮಾರು ₹80 ಕೋಟಿ ಮೌಲ್ಯದ ಸರ್ಕಾರಿ ಭೂಮಿಕ ಬಳಕೆ ಆರೋಪ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಹಳೆಯ ಕಂದಾಯ ದಾಖಲೆಗಳನ್ನು ಒಂದೊಂದಾಗಿ ಹೊರೆ ತೆಗೆದು ಅಧಿಕಾರಿಗಳ ಅಕ್ರಮವನ್ನು ಸಾಬೀತುಪಡಿಸಲು ಆರಂಭಿಸಿದ ವೇಳೆ ತಹಶೀಲ್ದಾರ್ ರೂಪ ಅವರ ಉತ್ತರ ನೀಡದೆ ಕಚೇರಿಯಿಂದ ಹೊರ ನಡೆದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಇಷ್ಟು ದೊಡ್ಡ ಭೂ ಹಗರಣಕ್ಕೆ ಕಾರಣವಾದ ಅಂದಿನ ಹಾಗೂ ಇಂದಿನ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳ ಯುಗ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ಮಾತನಾಡಿ, ಕಬಳಿಕೆ ಯಾಗಿರುವ 16 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಕೂಡಲೇ ತನ್ನ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. "ಅದಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಉಗ್ರ ಹೋರಾಟ ನಡೆಸಲಾಗುವುದು" ಎಂದು ಅವರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.
ಈ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿ ಕಬಳಿಕೆ ಹಾಗೂ ದಾಖಲೆ ಅಕ್ರಮದ ಆರೋಪಗಳು ಮತ್ತಷ್ಟು ತೀವ್ರ ಚರ್ಚೆಗೆ ಕಾರಣವಾಗಿವೆ.
Also Read:
ವಿಚಿತ್ರ ಪ್ರೇಮ ಕಥೆ: ಅತ್ತೆಯನ್ನೇ ಮದುವೆಯಾದ ಅಳಿಯ