<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬಸ್ ಪಾಸ್ ಹಣ ರಿಫಂಡ್ ಗೆ ಸರ್ಕಾರದ ಆದೇಶ : ವಿದ್ಯಾರ್ಥಿಗಳು ಏನು ಮಾಡಬೇಕು?

ಬಸ್ ಪಾಸ್ ಹಣ ರಿಫಂಡ್ ಗೆ ಸರ್ಕಾರದ ಆದೇಶ : ವಿದ್ಯಾರ್ಥಿಗಳು ಏನು ಮಾಡಬೇಕು?
Summary: Good news for students! The government has ordered bus pass fee refund, and eligible students can get the money back through the prescribed process. Here is complete information on the application process and required documents.

Belagavi News:

ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವದ ಸಿಹಿ ಸುದ್ದಿ ನೀಡಿದೆ. 2026 - 27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ಬಸ್ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಇದರ ಬೆನ್ನಲ್ಲೇ, ಉಚಿತ ಬಸ್ ಯೋಜನೆ ಜಾರಿಗೆ ಮುನ್ನ ಹಣ ಪಾವತಿಸಿ ವಿದ್ಯಾರ್ಥಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮರುಪಾವತಿಸಲು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ದೊರೆಯಲಿದೆ.

ಹಣ ಮರುಪಾವತಿ ಪಡೆಯುವುದು ಹೇಗೆ? :

ಈಗಾಗಲೇ ಬಸ್ ಪಾಸ್ ಗಾಗಿ ಹಣ ಪಾವತಿಸಿರುವ ವಿದ್ಯಾರ್ಥಿಗಳು 29-06-2026ರಿಂದ ಸೇವಾ ಸಿಂಧು ಹೋಟೆಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಅರ್ಜಿ ಸಲ್ಲಿಸಿದ ಬಳಿಕ ಪರಿಶೀಲನೆ ನಡೆಸಿ, ಅಜ್ಜಿ ಅಂಗೀಕಾರವಾದ ಏಳು ದಿನಗಳೊಳಗೆ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಯಾವ ನಿಗಮಗಳ ವಿದ್ಯಾರ್ಥಿಗಳಿಗೆ ಅನ್ವಯ ?:

ಈ ಹಣ ಮರುಪಾವತಿ ಸೌಲಭ್ಯವು KSRTC, BMTC, NWKRTC, ಹಾಗೂ KKRTC ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ:

ಹಣ ಮರುಪಾವತಿ ಪಡೆಯಲು ವಿದ್ಯಾರ್ಥಿಗಳು ಸೇವಾ ತಿಂದು ಹೋಟೆಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಬಸ್ ಪಾಸ್ ವಿವರ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಸರಿಯಾಗಿ ನಮೂದಿಸುವುದು ಕಡ್ಡಾಯವಾಗಿದೆ.

ರಾಜ್ಯ ಸರ್ಕಾರದ ನಿರ್ಧಾರದಿಂದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ದೊಡ್ಡ ನೆರವು ಸಿಗಲಿದ್ದು, ಉಚಿತ ಬಸ್ ಪಾಸ್ ಯೋಜನೆಯ ಲಾಭ ಮತ್ತಷ್ಟು ವಿಸ್ತರಿಸಿದೆ.

ವಿದ್ಯಾರ್ಥಿ ಬಸ್ ಪಾಸ್ ಹಣ ಮರುಪಾವತಿ - ಮೇ 29 ರಿಂದ ಅರ್ಜಿ ಆರಂಭ, ಏಳು ದಿನಗಳಲ್ಲಿ ಖಾತೆಗೆ ಹಣ ಜಮಾ :

ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ಸಾರಿಗೆ ನಿಗಮಗಳು ಮತ್ತೊಂದು ಸಿಹಿ ಸುದ್ದಿ ನೀಡಿವೆ. 2026 27 ನೇ ಸಾಲಿನ ಶೈಕ್ಷಣಿಕ ಸಾಲಿನ ಉಚಿತ ಬಸ್ ಪಾಸ್ ಯೋಜನೆ ಜಾರಿ ಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಹಣವನ್ನು ಮರುಪಾವತಿಸಲು KSRTC, BMTC, NWKRTC, ಹಾಗೂ KKRTC ನಿಗಮಗಳು ಆದೇಶ ಹೊರಡಿಸಿವೆ.

ರಾಜ್ಯದಲ್ಲಿ ವಾಸವಿದ್ದು ಗಡಿ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಡಿ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ವಿತರಿಸಲಾಗಿದೆ. ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದಿರುವ ಅರ್ಹ ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಹಿಂದಿರುಗಿಸಲಾಗುತ್ತದೆ.

ಮೇ 29 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು :

ವಿದ್ಯಾರ್ಥಿ ಬಸ್ ಪಾಸ್ ಹಣಮರು ಪಾವತಿಗಾಗಿ 29-06-2026 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು. OTP ಮೂಲಕ ನೊಂದಣಿ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹಣ ವಾಪಸ್ ಪಡೆಯುವುದು ಹೇಗೆ ? :

ಈಗಾಗಲೇ ಬಸ್ ಶುಲ್ಕ ಪಾವತಿಸುತ್ತಿರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿಯ ಪರಿಶೀಲನೆ ಪೂರ್ಣಗೊಂಡ ಬಳಿಕ NEFT ಅಥವಾ RTGS ಮೂಲಕ ವಿದ್ಯಾರ್ಥಿಗಳು ನೀಡಿರುವ ಬ್ಯಾಂಕ್ ಖಾತೆಗೆ ಏಳು ದಿನಗಳೊಳಗೆ ಹಣ ಜಮಾ ಮಾಡಲಾಗುತ್ತದೆ ಎಂದು ಸಾರಿಗೆ ನಿಗಮ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ :

ಉಚಿತ ಬಾತ್ ಪಾಸ್ ಯೋಜನೆಯ ಲಾಭವನ್ನು ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಪಡೆಯಲಿದ್ದು, ಈಗಾಗಲೇ ಪಾವತಿಸಿದ ಹಣವನ್ನು ಮರಳಿ ಪಡೆಯುವ ಅವಕಾಶವು ಸಿಕ್ಕಿದೆ. ಹೀಗಾಗಿ ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಸೇವಾ ತಿಂದು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಸೂಚಿಸಲಾಗಿದೆ.

ಡಿಕೆಶಿ ಪಿಎಂ ಆದ ದಿನವೇ ಘೋಷಿಸಿದ್ದ ಉಚಿತ ಬಸ್ ಪಾಸ್ ಯೋಜನೆ ಜಾರಿ - ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಘೋಷಿಸಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡುವ ಮಹತ್ವದ ಯೋಜನೆ ಇದೀಗ ಜಾರಿಗೆ ಬಂದಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ.

ರಾಜ್ಯದ ಎಲ್ಲ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ 4 ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟು ₹286.08ಕೋಟಿ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಪ್ರತಿ ಬಸ್ ಪಾಸ್ ಸಂರಕ್ಷಣಾ ಶುಲ್ಕ ₹ 100 ಹಾಗೂ ಅಪಘಾತ ಪರಿಹಾರ ನಿಧಿಗೆ ₹ 50 ಮೊತ್ತವನ್ನು ಸರ್ಕಾರವೇ ಭರಿಸಲಿದೆ.

2026-27 ನೇ ಶೈಕ್ಷಣಿಕ ಸಾಲಿನಲ್ಲಿ ಉಚಿತ ವ್ಯವಸ್ಥೆ ಜಾರಿಗೆ ಬರುವ ಮೊದಲು, ನಾಲ್ಕು ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಿತರಿಸಿದ್ದವು. ಮೇ 30 ರಿಂದ ಜೂನ್ 9 ರವರೆಗೆ ಒಟ್ಟು 19,792 ವಿದ್ಯಾರ್ಥಿ ಪಾಸ್ ಗಳನ್ನು ವಿತರಿಸಲಾಗಿದ್ದು, ಈಗ ಆ ಪಾಸ್ ಗಳಿಗೆ ಪಾವತಿಸಿದ ಹಣವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಲು ಸರ್ಕಾರ ಅನುಮೋದನೆ ನೀಡಿದೆ.

ಈ ಮೂಲಕ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಹಣ ವಾಪಸ್ ಸಿಗಲಿದೆ. ಉಚಿತ ಬಸ್ ಪಾಸ್ ಯೋಜನೆಯಿಂದ ರಾಜ್ಯದ ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದ್ದು, ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ಕಡಿಮೆಯಾಗಲಿದೆ.

Also Read:

ಜಲಾಶಯಗಳಲ್ಲಿ ನೀರಿನ ಕೊರತೆ : ಕಬಿನಿ ಡೆಡ್ ಸ್ಟೋರೇಜ್, ಬೆಂಗಳೂರಿಗೆ ಎಚ್ಚರಿಕೆಯ ಗಂಟೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online