<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಗೆ ಅದ್ದೂರಿ ಸ್ವಾಗತ: ಜಿಬಿ ಚುನಾವಣೆಗೆ ಮಹತ್ವದ ಸಭೆ

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಗೆ ಅದ್ದೂರಿ ಸ್ವಾಗತ: ಜಿಬಿ ಚುನಾವಣೆಗೆ ಮಹತ್ವದ ಸಭೆ
Summary: BK Hariprasad arrived at the office for the first time as KPCC president and received a grand welcome from the workers. On this occasion, an important meeting was held regarding the GBA elections.

belagavi news:

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಕೆ ಹರಿಪ್ರಸಾದ್ ಅವರು ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

ಕಚೇರಿ ಆವರಣದಲ್ಲಿ ಹುಮಾಲೆ, ಘೋಷಣೆಗಳು ಹಾಗೂ ಪಕ್ಷದ ಧ್ವಜಗಳೊಂದಿಗೆ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ನೂತನ ಅಧ್ಯಕ್ಷರ ಆಗಮನವನ್ನು ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಬಿಎ ಚುನಾವಣಾ ತಯಾರಿ ಕುರಿತು ಮಹತ್ವದ ಸಭೆ ನಡೆಸಲಾಯಿತು. ಮುಂಬರುವ ಚುನಾವಣೆಗಳನ್ನು ಎದುರಿಸುವ ತಂತ್ರ ಸಂಘಟನೆ ಬಲಪಡಿಸುವಿಕೆ ಹಾಗೂ ಸ್ಥಳೀಯ ಮಟ್ಟದ ಸಮನ್ವಯ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು, ವಿವಿಧ ಭಾಗಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಬಿ.ಕೆ ಹರಿಪ್ರಸಾದ್ ಅವರು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಚುನಾವಣೆಯಲ್ಲಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದ್ದರು.

ಕೆಪಿಸಿಸಿ ಅಧ್ಯಕ್ಷರಾಗಿ ಅವರ ಮೊದಲ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಘಟನಾ ಚಟುವಟಿಕೆಗಳು ಮತ್ತಷ್ಟು ಚುರುಕು ಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಗೆ ಭರ್ಜರಿ ಸ್ವಾಗತ : ಕ್ವೀನ್ಸ್ ರಸ್ತೆಯ ಕಚೇರಿಯಲ್ಲಿ ಸಂಭ್ರಮದ ವಾತಾವರಣ :

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಕೆ ಹರಿಪ್ರಸಾದ್ ಅವರು ಬುಧವಾರ ಮೊದಲ ಬಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಮೊದಲ ಬಾರಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅದ್ದೂರಿ ಮತ್ತು ಕಡಗರದ ಸ್ವಾಗತ ಕೋರಿದರು. ಕಚೇರಿ ಆವರಣದಲ್ಲಿ ಹೋಗುಚ್ಛಗಳು, ಘೋಷಣೆಗಳು ಹಾಗೂ ಪಕ್ಷದ ಧ್ವಜಗಳೊಂದಿಗೆ ಉತ್ಸಾಹಬರಿತ ವಾತಾವರಣ ನಿರ್ಮಾಣವಾಗಿತ್ತು.

ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಹಿರಿಯ ಎಂಎಲ್‌ಸಿ ಗಳು ಹೂಗುಚ್ಛ ನೀಡಿ ಬಿಕೆ ಹರಿಪ್ರಸಾದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಪಕ್ಷದ ಹಿರಿಯ ನಾಯಕರು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಕೆಪಿಸಿಸಿ ಕಚೇರಿಗೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಅವರು ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಮುಂದಿನ ಚುನಾವಣೆ ತಯಾರಿ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿದರು.

ಕೆಪಿಸಿಸಿ ನೂತನ ಅಧ್ಯಕ್ಷರ ಮೊದಲ ಭೇಟಿ ಪಕ್ಷದ ವಲಯದಲ್ಲಿ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಘಟನಾ ಚಟುವಟಿಕೆಗಳು ಇನ್ನಷ್ಟು ಚುರುಕು ಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

Also Read:

ಅಫ್ಘಾನಿಸ್ತಾನ ಗಡಿ ಪ್ರದೇಶದಲ್ಲಿ ಪಾಕ್ ವೈಮಾನಿಕ ದಾಳಿ: 11ಮಕ್ಕಳು ಸೇರಿ 13 ಮಂದಿ ಸಾವು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online