<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಗೃಹಜ್ಯೋತಿ ಯೋಜನೆ ಮರುಪರಿಶೀಲನೆ : ಅನರ್ಹರಿಗೆ ಸಬ್ಸಿಡಿ ಕಡಿತದ ಎಚ್ಚರಿಕೆ

ಗೃಹಜ್ಯೋತಿ ಯೋಜನೆ ಮರುಪರಿಶೀಲನೆ : ಅನರ್ಹರಿಗೆ ಸಬ್ಸಿಡಿ ಕಡಿತದ ಎಚ್ಚರಿಕೆ
Summary: After Griha Lakshmi Scheme, the government is preparing to revise the Griha Jyothi Scheme. Ineligible beneficiaries are likely to be identified and have their subsidy cut or excluded from the scheme, and they are expected to face a shock from the new rules.

Belagavi News:

ಗೃಹಲಕ್ಷ್ಮಿ ಯೋಜನೆ, ಬೆನ್ನಲ್ಲೇ ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಗೂ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ. ಗ್ಯಾರೆಂಟಿ ಯೋಜನೆಗಳ ದುರ್ಬಳಕೆಯನ್ನು ತಡೆಯುವ ಉದ್ದೇಶದಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.

ವಾಣಿಜ್ಯ ಬಳಕೆ ಹಾಗೂ ಹೊರ ರಾಜ್ಯದ ಅನರ್ಹ ಫಲಾನುಭವಿಗಳಿಗೆ ಕಡಿವಾಳ ಹಾಕಲು ಇ - ಕೆವೈಸಿ (e-KYC) ಮೂಲಕ ಮರು ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಯೋಜನೆಯ ಲಾಭ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿನ ಅಕ್ರಮ ಬಳಕೆ ಹಾಗೂ ಅನರ್ಹ ಫಲಾನುಭವಿಗಳನ್ನು ತಡೆಯಲು ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಮುಂದಿನ ಎರಡು ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

Sponsored

ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದು, ಮತದಾರರ ಮಾನದಂಡದ ಆಧಾರದಲ್ಲಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆಗಳ ಸರಿಯಾದ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಹೊಸ ಮಾರ್ಗ ಸೂಚಿಗಳು ಪ್ರಕಟವಾಗುವ ನೀರಿಕ್ಷೆ ಇದೆ.

ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿ : ಅನರ್ಹ ಬಳಕೆದಾರರಿಗೆ ಕಡಿವಾಣ, ಇ-ಕೆವೈಸಿ ಮೂಲಕ ಮರುಪರಿಶೀಲನೆ:

ರಾಜ್ಯದಲ್ಲಿ ಜಾರಿಯಲ್ಲಿರುವ ಗೃಹಜ್ಯೋತಿ ಯೋಜನೆ ಅಡಿ ಸದ್ಯ ಸುಮಾರು 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿವೆ. ಪ್ರತಿ ತಿಂಗಳು ಈ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರವು ಸುಮಾರು 440 ಕೋಟಿ ರೂಪಾಯಿ ವೆಚ್ಚ ನೀಡುತ್ತಿದೆ.

Sponsored

ಆದರೆ ಕೆಲವರು ಗೃಹಬಳಕೆ ಹೆಸರಿನಲ್ಲಿ ವಾಣಿಜ್ಯ ಬಳಕೆಗು ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಾಪರ್ಟಿ, ಮಳಿಗೆಗಳು ಹಾಗೂ ವಾಣಿಜ್ಯ ಉದ್ದೇಶಗಳಿಗೆ ಫ್ರೀ ವಿದ್ಯುತ್ ಪಡೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.

ಇದಲ್ಲದೆ ಹೊರ ರಾಜ್ಯದ ಫಲಾನುಭವಿಗಳು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆಧಾರ್, ಇ- ಕೆವೈಸಿ ಇಂತಹ ಪ್ರಾಬಲ್ಯ ಮತ್ತು ಮೊಬೈಲ್ ನಂಬರ್ ಆಧಾರಿತ ಮರು ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಈ ಪ್ರಕ್ರಿಯೆಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸುವೆ.

ಈ ನಡುವೆ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, "ವೋಟ್ ಇರುವವರೆಗೆ ಮಾತ್ರ ಗ್ಯಾರಂಟಿ ಯೋಜನೆ ನೀಡಲಾಗುವುದು" ಎಂದು ತಿಳಿಸಿದ್ದಾರೆ. ಆರಂಭದಲ್ಲಿ ತ್ವರಿತವಾಗಿ ದಾಖಲೆಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೆಲವರ ಬ್ಯಾಂಕ್ ಖಾತೆಗಳಿಗೆ ತಪ್ಪು ಹಣ ಜಮಾ ಆಗಿರುವುದನ್ನು ಕೂಡ ಅವರು ಉಲ್ಲೇಖಿಸಿದ್ದಾರೆ.

ಸರ್ಕಾರದ ಪ್ರಕಾರ, ಗೃಹಲಕ್ಷ್ಮಿ ಯೋಜನೆ ಗೃಹಜ್ಯೋತಿ ಯೋಜನೆ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಕೇವಲ ಕರ್ನಾಟಕ ಅರ್ಹ ಫಲ ಅನುಭವಿಗಳಿಗೆ ಮಾತ್ರ ಸೀಮಿತಗೊಳಿಸುವ ನಿಟ್ಟಿನಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ. ಮುಂದಿನ ದಿನಗಳಲ್ಲಿ ಅಧಿಕೃತ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದೆ.

Sponsored

ಗ್ಯಾರೆಂಟಿ ಯೋಜನೆ ನಿಲ್ಲಿಸುವುದಿಲ್ಲ - ಅರ್ಹರಿಗೆ ಮಾತ್ರ ಲಾಭ - ಬಿಜೆಪಿ ಅಭಿಯಾನಕ್ಕೆ ಪ್ರಿಯಾಂಕ್ ಖರ್ಗೆ ಕೌಂಟರ್:

ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಬಿಜೆಪಿ ನೀಡಿರುವ ಆಕ್ಷೇಪಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ತಮ್ಮ ಕಾರ್ಯಕರ್ತರಿಗೆ ಗ್ಯಾರಂಟಿ ಯೋಜನೆ ಬೇಡ ಎಂಬ ಅಭಿಯಾನ ನಡೆಸಲ್ಲಿ ಎಂದು ಅವರು ಕೌಂಟರ್ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿರುವ ಅವರು, "ಅವರಿಗೆ ಗ್ಯಾರಂಟಿ ಬೇಡ ಅಂದ್ರೆ ಬೇಡ, ಬೇರೆಯವರು ಪಡೆಯುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಬೇಕು ಎಂಬ ಉದ್ದೇಶದಿಂದ ಪರಿಷ್ಕರಣಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅನರ್ಹರು ಯೋಜನೆ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

Sponsored

ಈ ಮೂಲಕ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದ್ದು, ಪ್ಯಾರದರ್ಶಕತೆ ಮತ್ತು ಅರ್ಹತೆ ಆಧಾರದ ಮೇಲೆ ಮಾತ್ರ ಲಾಭ ನೀಡಲಾಗುವುದು ಎಂದು ಸರ್ಕಾರ ಪುನರುಚ್ಚರಿಸಿದೆ.

Also Read:

ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಆರಂಭ: ವಿಮಾನಯಾನ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online