<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಗೃಹಲಕ್ಷ್ಮಿ ಯೋಜನೆ ಅಪ್ಡೇಟ್ : ಸೌಲಭ್ಯ ಪಡೆಯುವವರಿಗೆ ಹೊಸ ಶರತ್ತುಗಳು

ಗೃಹಲಕ್ಷ್ಮಿ ಯೋಜನೆ ಅಪ್ಡೇಟ್ : ಸೌಲಭ್ಯ ಪಡೆಯುವವರಿಗೆ ಹೊಸ ಶರತ್ತುಗಳು
Summary: The government is considering some revisions in the Grihalakshmi Yojana. Discussions are underway on new criteria and eligibility rules for availing the benefits, and there are possibilities of major changes related to women beneficiaries. Here is the complete information on the new rules, eligibility and latest updates of the Mahalaxmi Yojana.

Belagavi News:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಫಲಾನುಭವಿಗಳ ಪರಿಷ್ಕರಣಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಮರು ಅರ್ಜಿಯ ಆಹ್ವಾನಿಸಲಾಗಿದ್ದು, ಹೊಸ ಅರ್ಹತಾ ಮಾನದಂಡಗಳು ಸ್ಪಷ್ಟಗೊಂಡಿವೆ.

ಹೊಸ ನಿಯಮಗಳ ಪ್ರಕಾರ, ಕುಟುಂಬದ ಯಜಮಾನಿ ಮಹಿಳೆಯ ಹೆಸರನ್ನು ಅಂತ್ಯೋದಯ ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿಗಾಗಿ ನಮೂದಿಸಿರುವುದು ಕಡ್ಡಾಯವಾಗಿದೆ. ಇದೇ ಮುಖ್ಯ ಅರ್ಹತಾ ಮಾನದಂಡವಾಗಿದ್ದು, ಇದರ ಆಧಾರದ ಮೇಲೆ ಫಲಾನುಭವಿಗಳನ್ನು ಮರು ಪರಿಶೀಲಸಲಾಗುತ್ತದೆ.

ಇದಲ್ಲದೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಹಾಗೂ ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಈ ದಾಖಲೆಗಳ ಆಧಾರದ ಮೇಲೆ ಅರ್ಜಿಗಳ ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಗೃಹಲಕ್ಷ್ಮಿ ಯೋಜನೆ ಅಡಿ ಅರ್ಹ ಮಹಿಳೆಯರಿಗೆ ನೇರವಾಗಿ ಹಣ ಸಹಾಯ ನೀಡಲಾಗುತ್ತಿದ್ದು, ನಕಲಿ ಫಲಾನುಭವಿಗಳನ್ನು ತಡೆದು ನಿಜವಾದ ಅರ್ಹರಿಗೆ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಪರಿಷ್ಕರಣೆ ಬಳಿಕ ಯೋಜನೆಯ ಪಾರದರ್ಶಕತೆ ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು - ಸಂಪೂರ್ಣ ವಿವರ ಇಲ್ಲಿದೆ:

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಅಗತ್ಯ ದಾಖಲೆಗಳ ವಿವರಗಳನ್ನು ಸರ್ಕಾರ ಸ್ಪಷ್ಟಪಡಿಸಿದೆ. ಯೋಜನೆಯ ಫಲಾನುಭವಿಗಳ ಪರಿಶೀಲನೆ ಮತ್ತು ಮರು ಅರ್ಜಿ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ಮಹತ್ವ ಪಡೆದಿದೆ.

ಅರ್ಜಿ ಸಲ್ಲಿಸುವ ಕುಟುಂಬದ ಯಜಮಾನಿ ಮಹಿಳೆಯರು ಕಡ್ಡಾಯವಾಗಿ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು:

1. ಕುಟುಂಬದ ಯಜಮಾನಿನ ಆಧಾರ್ ಕಾರ್ಡ್ ಪ್ರತಿ

2. ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್ ಬುಕ್

3. ಯಜಮಾನ್ನಿಯ ಹೆಸರಿನಲ್ಲಿರುವ ರೇಷನ್ ಕಾರ್ಡ್

ಈ ದಾಖಲೆಗಳ ಆಧಾರದ ಮೇಲೆ ಅರ್ಜಿಗಳ ಪರಿಶೀಲನೆ ನಡೆಸಲಾಗುತ್ತಿದ್ದು, ನಕಲಿ ಫಲಾನುಭವಿಗಳನ್ನು ತಡೆದು ಪಾರದರ್ಶಕವಾಗಿ ಯೋಜನೆ ಜಾರಿಗೆಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಗೃಹಲಕ್ಷ್ಮಿ ಯೋಜನೆ ಅಡಿ ಮಹಿಳಾ ಯಜಮಾನಿಯರಿಗೆ ನೇರ ಹಣ ಸಹಾಯ ನೀಡಲಾಗುತ್ತಿದ್ದು, ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು ಅತ್ಯಗತ್ಯವಾಗಿದೆ.

ಗೃಹಲಕ್ಷ್ಮಿ ಯೋಜನೆ - ಯಾರಿಗೆಲ್ಲ ಸೌಲಭ್ಯ ಸಿಗಲ್ಲ? ಸರ್ಕಾರ ವಿಧಿಸಿದ ನಿರ್ಬಂಧಗಳಿವು:

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಸಹಾಯ ನೀಡಲಾಗುತ್ತಿದ್ದು, ಯೋಜನೆಯ ಲಾಭ ಪಡೆಯಲು ಕೆಲವು ನಿರ್ಬಂಧಗಳನ್ನು ಸಹ ವಿಧಿಸಲಾಗಿದೆ. ಅರ್ಹತೆ ಪರಿಶೀಲನೆ ವೇಳೆ ಈ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲಾಗುತ್ತದೆ.

ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿಧಾರರಾಗಿದ್ದರೆ ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ. ಇಂತಹ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಿಲ್ಲ.

ಇದೇ ರೀತಿ, ಯಜಮಾನಿ ಅಥವಾ ಅವರ ಪತಿ ಜಿಎಸ್‌ಟಿ ಪಾವತಿದಾರರಾಗಿದ್ದರು ಸಹ ಈ ಯೋಜನೆಯ ಲಾಭ ಪಡೆಯಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. ಆದಾಯ ತೆರಿಗೆ ಹಾಗೂ ಜಿ ಎಸ್ ಟಿ ಪಾವತಿದಾರರನ್ನು ಯೋಜನೆಯ ವ್ಯಾಪ್ತಿಯಿಂದ ಹೊರಗಿಡುವ ಮೂಲಕ ನಿಜವಾದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

ಗೃಹಲಕ್ಷ್ಮಿ ಯೋಜನೆ ಅಡಿ ಅರ್ಹ ಮಹಿಳಾ ಯಜಮಾನಿಯರಿಗೆ ನೇರವಾಗಿ ಹಣ ಸಹಾಯ ನೀಡಲಾಗುತ್ತಿದ್ದು, ಈ ನಿರ್ಬಂಧಗಳ ಮೂಲಕ ಯೋಜನೆಯ ಪಾರದರ್ಶಕತೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ.

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ವಿವಾದ - ವಿಪಕ್ಷಗಳಿಂದ ತೀವ್ರ ಟೀಕೆ, ಸರ್ಕಾರದ ವಿರುದ್ಧ ಆಕ್ರೋಶ:

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮರು ಪರಿಶೀಲನೆ ಹಾಗೂ ಪರಿಷ್ಕರಣೆ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕ್ರಮದ ವಿರುದ್ಧ ವಿಪಕ್ಷಗಳು ಸರ್ಕಾರವನ್ನು ಗಂಭೀರವಾಗಿ ಟೀಕಿಸಿದ್ದು, ಯೋಜನೆ ಜಾರಿಗೆ ಸಂಬಂಧಿಸಿದ ಹಲವು ಪ್ರಶ್ನೆಗಳನ್ನು ಎತ್ತಿವೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುತ್ತಾ, ಮರು ಅರ್ಜಿ ಸ್ವೀಕಾರ ಒಳ್ಳೆಯ ಉದ್ದೇಶದಿಂದ ಇರಬಹುದು ಎಂದು ಹೇಳಿದ್ದಾರೆ. ಆದರೆ ಇದರ ಹೆಸರಿನಲ್ಲಿ ನಿಜವಾದ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಅವರು ಎಚ್ಚರಿಸಿದ್ದಾರೆ. ಸರ್ಕಾರವು ಎರಡು ಗ್ಯಾರಂಟಿ ಯೋಜನೆಗಳಲ್ಲಿ ಲೋಪಗಳಿವೆ ಎಂದು ಸ್ವತಃ ಒಪ್ಪಿಕೊಂಡಿದ್ದು, ಹಿಂದೆ ಸರಿಯಾದ ಯೋಜನೆ ಇಲ್ಲದೆ ಘೋಷಣೆ ಮಾಡಿದ್ದರಿಂದ ಈಗ ಸಮಸ್ಯೆಗಳು ಎದುರಾಗಿದೆ ಎಂದು ಅವರು ಟೀಕಿಸಿದ್ದಾರೆ. ಜೊತೆಗೆ, ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿಲ್ಲ ಹಾಗೂ 5,000 ಕೋಟಿ ಲೆಕ್ಕದ ಕುರಿತು ಜಾಣ ಮೌನ ತಾಳಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನೊಂದೆಡೆ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು "ಚುನಾವಣಾ ಲಕ್ಷ್ಮಿ" ಆಗಿ ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯೋಜನೆಯನ್ನು ಕೆಲವು ತಿಂಗಳು ತಡೆಹಿಡಿದು, ಚುನಾವಣೆ ಸಂದರ್ಭದಲ್ಲಿ ಮತ್ತೆ ಸಕ್ರಿಯಗೊಳಿಸಲಾಗುತ್ತಿದೆ ಎಂಬುದು ಅವರ ವಾದವಾಗಿದೆ.

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ರಾಜಕೀಯ ಭಾಗವಾದ ಮುಂದುವರೆದಿದೆ.

Also Read :

ಮಂತ್ರಾಲಯ ಮಠದಲ್ಲಿ ಹೆಚ್ಚಿದ ಭಕ್ತರ ಸಂಖ್ಯೆ: ಕೊಠಡಿ ಸಿಗದೇ ಪರದಾಡುತ್ತಿರುವ ಭಕ್ತರು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online