Belagavi News :
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿರುವ ನಡುವೆ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದರೆ, ಇನ್ನು ಕೆಲವು ಪ್ರದೇಶಗಳು ಬರೆದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಜಿಲ್ಲಾವಾರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಉಪಸ್ಥಿತಿಯ ಅವಲೋಕನಕ್ಕಾಗಿ ಡಿ.ಕೆ ಶಿವಕುಮಾರ್ ಕೂಡ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಹೆಚ್ ಡಿ ಕುಮಾರಸ್ವಾಮಿ ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಿಲ್ಲಾ ಪ್ರವಾಸ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡುವ ಉದ್ದೇಶದಿಂದಲೇ ಈ ಪ್ರವಾಸಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದು, ಸರ್ಕಾರದ ನಡೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.
ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಎಸ್ಐಆರ್ ವಿಚಾರ ಮತ್ತು ರಾಜಕೀಯ ವಾಗ್ವಾದದ ಕೇಂದ್ರ ಬಿಂದುವಾಗಿದೆ.
ಎಸ್ ಐ ಆರ್ ದುರುಪಯೋಗಕ್ಕೆ ಸಿಎಂ ಪ್ರವಾಸ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪ - ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ :
ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸಗಳ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರ ವಿಭಾಗವಾರು ಸಭೆಗಳು ಮತ್ತು ಜಿಲ್ಲಾ ಬೇಟಿಗಳು ಅಭಿವೃದ್ಧಿ ಕಾರ್ಯಗಳಿಗಾಗಿ ಅಲ್ಲ, ಬದಲಾಗಿ ಎಸ್ಐಆರ್ ದುರುಪಯೋಗಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡುವ ಉದ್ದೇಶದಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ತಮ್ಮ ಸಹಮತವಿದೆ ಎಂದು ಹೇಳಿದ್ದಾರೆ.
" ನಿಜವಾದ ಮತದಾರರನ್ನು ಉಳಿಸಿಕೊಳ್ಳಲು ಎಸ್ಐಆರ್ ನಡಿಸಲಾಗುತ್ತಿದೆ. ಚುನಾವಣಾ ಆಯೋಗ ಗೊಂದಲಗಳನ್ನು ಸರಿಪಡಿಸಬೇಕು ಎಂಬುದು ನಮ್ಮ ಒತ್ತಾಯ " ಎಂದು ಅವರು ತಿಳಿಸಿದ್ದಾರೆ.
ಮುಂದುವರೆದು ಮಾತನಾಡಿದವರು, ಡಿಕೆ ಶಿವಕುಮಾರ್ ಅವರ ಪ್ರಸ್ತುತ ಜಿಲ್ಲಾ ಪ್ರವಾಸಗಳು ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ಅಥವಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಅಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳಿಗೆ ಎಸ್ಐಆರ್ ವಿಚಾರದಲ್ಲಿ ಅಗತ್ಯ ಸೂಚನೆ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶದಿಂದಲೇ ಈ ಪ್ರವಾಸಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರ ಜನರ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ.
"ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ, ಸರ್ಕಾರ ಏನು ಕ್ರಮ ಕೈಗೊಂಡಿದೆ ? ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ " ಎಂದು ಅವರು ಕಿಡಿಕಾರಿದ್ದಾರೆ.
ಪ್ರವಾಹ, ಬರ ನಿರ್ವಹಣೆ ಬಗ್ಗೆ ಸರ್ಕಾರದ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ - ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರಾ? :
ರಾಜ್ಯದಲ್ಲಿ ಪ್ರವಾಹ ಹಾಗೂ ಬರ ಪರಿಸ್ಥಿತಿ ಎದುರಿಸುತ್ತಿರುವ ನಡುವೆಯೂ ಸರ್ಕಾರ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಹಲವು ಗ್ರಾಮಗಳು ಸಂಕಷ್ಟದಲ್ಲಿವೆ. ಆದರೆ ಅಧಿಕಾರಿಗಳು ನಿಜವಾಗಿಯೂ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಸಾಲ ಮನ್ನಾ ವಿಚಾರ ಪ್ರಸ್ತಾಪಿಸಿದ ಕುಮಾರಸ್ವಾಮಿ, ಈವರೆಗೂ ಸರ್ಕಾರದಿಂದ ಯಾವುದೇ ಸ್ಪಷ್ಟ ಕ್ರಮವಾಗಿಲ್ಲ ಎಂದು ಟೀಕಿಸಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲು ಬೇರೆ ವಿಚಾರಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಅವರ ಬೆಳಗಾವಿ ಜಿಲ್ಲಾ ಪ್ರವಾಸದ ಕುರಿತು ಪ್ರತಿಕ್ರಯಿಸಿದವರು, ರಾತ್ರಿ ವೇಳೆ ಶಾಸಕರೊಂದಿಗೆ ಡಿನ್ನರ್ ಕಾರ್ಯಕ್ರಮ ನಡೆಸಲಾಗಿದೆ ಎಂದು ಉಲ್ಲೇಖಿಸಿ ಸರ್ಕಾರದ ನಡೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಹಿಂದಿನ ಮುಖ್ಯಮಂತ್ರಿ ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷದ ಹಾದಿ ಹಿಡಿದಿದ್ದರು. ಈಗಿನ ಮುಖ್ಯಮಂತ್ರಿ ಕಾವೇರಿ, ಗೋದಾವರಿ -ಕೃಷ್ಣಾ ನದಿ ಜೋಡಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ಪಕ್ಷದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಫೋಟೋ ತೆಗೆಸಿಕೊಳ್ಳುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಟೀಕಿಸಿದ್ದಾರೆ.
ಇದೇ ವೇಳೆ ತುಂಗಭದ್ರಾ ಜಲಾಶಯದಲ್ಲಿ ಹುಳು ತುಂಬಿರುವ ಸಮಸ್ಯೆ ಕುರಿತು ಸರ್ಕಾರ ಚರ್ಚೆ ನಡೆಸಿದೆಯೇ ಎಂದು ಪ್ರಶ್ನಿಸಿದ ಅವರು, ನೀರಾವರಿ ಹಾಗೂ ರೈತರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.