BELAGAVI NEWS :
ಬೆಂಗಳೂರು: ರಾಜ್ಯ ಕಾಂಗ್ರೆಸ್ ಗೆ ಇಂದು ಮಹತ್ವದ ದಿನವಾಗಿದ್ದು, ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಬಲವೇ ಕಾಂಗ್ರೆಸ್ ನ ಶಕ್ತಿ ಎಂದು ಹೇಳಿದರು.
" ಸುಮಾರು ಆರೂವರೆ ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಡಿ.ಕೆ ಶಿವಕುಮಾರ್ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಬಳಿಕ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಇದೀಗ ಆ ಜವಾಬ್ದಾರಿಯನ್ನು ಬಿ.ಕೆ ಹರಿಪ್ರಸಾದ್ ವಹಿಸಿಕೊಂಡಿದ್ದಾರೆ" ಎಂದು ಖರ್ಗೆ ಹೇಳಿದರು.
ಹರಿಪ್ರಸಾದ್ ಪಕ್ಷಕ್ಕೆ ಹೊಸ ಬರಲ್ಲ ಎಂದು ಹೇಳಿದ ಖರ್ಗೆ, "ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಅವರು ಹಲವು ದಶಕಗಳ ಕಾಲ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಂಘಟನೆಗೆ ಅವರು ಕೊಡುಗೆ ಅಪಾರವಾಗಿದೆ. ಅವರ ಅನುಭವ ಮತ್ತು ನಾಯಕತ್ವದಿಂದ ರಾಜ್ಯ ಕಾಂಗ್ರೆಸ್ ಇನ್ನಷ್ಟು ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ರಾಜಕೀಯ ಸವಾಲುಗಳನ್ನು ಎದುರಿಸುವಂತೆ ಖರ್ಗೆ ಪರೋಕ್ಷವಾಗಿ ಸಲಹೆ ನೀಡಿದರು.
ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರ ಸಂಘಟನಾ ಅನುಭವವನ್ನು ಶ್ಲಾಘಿಸಿದರು.
" ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರ್ಪಡೆಯಾಗಿ, ತಳಮಟ್ಟದಿಂದ ಬೆಳೆದು ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಂದಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡಿದವರಿಗೆ ಕಾಂಗ್ರೆಸ್ ಜವಾಬ್ದಾರಿ ನೀಡುತ್ತದೆ ಎಂಬುದಕ್ಕೆ ಹರಿಪ್ರಸಾದ್ ಉತ್ತಮ ಉದಾಹರಣೆ ಎಂದು ಖರ್ಗೆ ಹೇಳಿದರು.
ಮುಂದುವರೆದು ಮಾತನಾಡಿದ ಅವರು, " ದೇಶದ ಮುಂದೆ ಅನೇಕ ದೊಡ್ಡ ಸವಾಲುಗಳಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಪಠ್ಯಪುಸ್ತಕಗಳ ಬೆಲೆ ಹೆಚ್ಚಳ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಈ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸುವ ಪ್ರಮುಖ ಹೊಣೆಗಾರಿಕೆ ಈಗ ಬಿ.ಕೆ ಹರಿಪ್ರಸಾದ್ ಅವರ ಮೇಲಿದೆ" ಎಂದು ಹೇಳಿದರು.
ಇದೇ ವೇಳೆ, ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಸಾಗುವಂತೆ ಹರಿಪ್ರಸಾದ್ ಅವರಿಗೆ ಸಲಹೆ ನೀಡಿದ ಖರ್ಗೆ," ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು. ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜನರ ಸಮಸ್ಯೆಗಳಿಗೆ ಧ್ವನಿ ಯಾಗಬೇಕು" ಎಂದು ಸೂಚಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಹರಿಪ್ರಸಾದ್ ಅವರ ಮುಂದೆ ಪಕ್ಷ ಸಂಘಟನೆ ಬಲಪಡಿಸುವುದು, ಜನಪರ ಹೋರಾಟಗಳಿಗೆ ಮುನ್ನಡೆ ನೀಡುವುದು ಹಾಗೂ ಮುಂದಿನ ಚುನಾವಣೆಗಳಿಗೆ ಕಾಂಗ್ರೆಸ್ ಅನ್ನು ಸಜ್ಜುಗೊಳಿಸುವ ಸವಾಲುಗಳಿವೆ ಎಂದು ಖರ್ಗೆ ಅಭಿಪ್ರಾಯಪಟ್ಟರು.
Also Read:
ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ: ಹಾರ್ಮುಜ್ ಮೂಲಕ ಸಾಗುವ ಹಡುಗುಗಳ ಮೇಲೆ ಸುಂಕ