<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಹಾಸನ ಮಳೆ ಎಫೆಕ್ಟ್ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ತಕ್ಷಣ ತೆರವು ಕಾರ್ಯಾಚರಣೆ

ಹಾಸನ ಮಳೆ ಎಫೆಕ್ಟ್ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ತಕ್ಷಣ ತೆರವು ಕಾರ್ಯಾಚರಣೆ
Summary: A landslide occurred in the Shiradi Ghat area due to heavy rains in Hassan district. Although mud and stones fell on the road, vehicular traffic continued as usual due to the quick evacuation operation.

Belagavi News:

ಹಾಸನ ಜಿಲ್ಲಾಧ್ಯಕ್ಷ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಅದರ ಪರಿಣಾಮ ಶಿರಾಡಿ ಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಿದೆ. ನಿರಂತರ ಮಳೆಯಿಂದ ಗುಡ್ಡದ ಮಣ್ಣು ಹಾಗೂ ಬಂಡೆಗಳು ರಸ್ತೆಯ ಬದಿಗೆ ಜಾರಿ ಬಿದ್ದಿದ್ದು, ಹೆದ್ದಾರಿ ನಿರ್ವಹಣಾ ಸಿಬ್ಬಂದಿ ತಕ್ಷಣವೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಭೂಕುಸಿತ ಸಂಭವಿಸಿದರೂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟಾಗಿಲ್ಲ. ರಸ್ತೆಯ ಮೇಲಿದ್ದ ಮಣ್ಣು ಮತ್ತು ಕಲ್ಲುಗಳನ್ನು ತ್ವರಿತವಾಗಿ ತೆರವುಗೊಳಿಸಿರುವುದರಿಂದ ವಾಹನಗಳು ಎಂದಿನಂತೆ ಸುಗಮವಾಗಿ ಸಂಚರಿಸುತ್ತಿವೆ.

ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತದ ಸಾಧ್ಯತೆ ಹೆಚ್ಚಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ನಿರಂತರ ನಿಗ ವಹಿಸುತ್ತಿದ್ದಾರೆ. ಅಗತ್ಯವಿರುವ ಸ್ಥಳಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಪಾಯದ ಪ್ರದೇಶಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.

ಹವಾಮಾನ ಇಲಾಖೆ ಮುಂದಿನ ಕೆಲದಿನಗಳ ವರೆಗೆ ಹಾಸನ ಜಿಲ್ಲೆಯ ಹಲವಡೆ ಉತ್ತಮ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಶಿರಾಡಿ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಳೆಗಾಲದಲ್ಲಿ ಗುಡ್ಡ ಕುಸಿತ ಮತ್ತು ಕಲ್ಲುಗಳು ರಸ್ತೆಗೆ ಜಾರುವ ಸಾಧ್ಯತೆ ಇರುವುದರಿಂದ ವಾಹನ ಚಾಲಕರು ನಿಧಾನಗತಿಯಲ್ಲಿ ಸಂಚರಿಸುವುದು, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಹಾಗೂ ರಫ್ತೆ ಪರಿಸ್ಥಿತಿಯ ಮಾಹಿತಿಯನ್ನು ಪರಿಶೀಲಿಸಿ ಪ್ರಯಾಣಿಸುವುದು ಸೂಕ್ತ ಎಂದು ಸೂಚಿಸಲಾಗಿದೆ.

ಹಾಸನದಲ್ಲಿ ಮಳೆಯ ಅಬ್ಬರ - ಶಿರಾಡಿ ಘಾಟ್ ನ ಕಪ್ಪಳ್ಳಿ ಬಳಿ ಭೂಕುಸಿತ, NH- 75 ರಲ್ಲಿ ಎಚ್ಚರಿಕೆ :

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 (NH-75) ರ ಶಿರಾಡಿ ಘಾಟ್ ವ್ಯಾಪ್ತಿಯ ಕುಪ್ಪಳ್ಳಿ ಬಳಿ ಭೂಕುಸಿತ ಸಂಭವಿಸಿದೆ. ನಿರಂತರ ಮಳೆಯಿಂದ ಗುಡ್ಡದ ಮಣ್ಣು ಮತ್ತು ಕಲ್ಲುಗಳು ರಸ್ತೆಯ ಬದಿಗೆ ಜಾರಿ ಬಿದ್ದಿದ್ದು, ಹೆದ್ದಾರಿ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಭೂಕುಸಿತದ ಮಾಹಿತಿ ತಿಳಿಯುತ್ತಿದ್ದಂತೆಯೇ ರತ್ನ ನಿರ್ವಹಣಾ ಸಿಬ್ಬಂದಿ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದು, ವಾಹನ ಸಂಚಾರ ಸುಗಮವಾಗಿರುವಂತೆ ಕ್ರಮ ಕೈಗೊಳ್ಳಲಾಗಿದೆ. ಸದ್ಯ ಹೆದ್ದಾರಿಯಲ್ಲಿ ಸಂಚಾರ ಮುಂದುವರೆದಿದ್ದರೂ, ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಲಾಗಿದೆ.

ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಪ್ರದೇಶದಲ್ಲಿ ಬೊಕು ಸಿದ್ಧ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಜಿಲ್ಲಾಡಳಿತ ನಿರಂತರ ನಿಗ ವಹಿಸಿದೆ. ಮುಂದಿನ ದಿನಗಳಲ್ಲೂ ಉತ್ತಮ ಮಳೆಯ ಮುನ್ಸೂಚನೆ ಇರುವ ಕಾರಣ ಘಾಟ್ ಮಾರ್ಗದಲ್ಲಿ ಸಂಚರಿಸುವವರು ರಸ್ತೆ ಪರಿಸ್ಥಿತಿಯ ಮಾಹಿತಿ ಪಡೆದು ಪ್ರಯಾಣಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಳೆಗಾಲದ ಗುಡ್ಡ ಕುಸಿತ, ಜಾರುವ ರಸ್ತೆ ಹಾಗೂ ಕಡಿಮೆ ಗೋಚರತೆ ಅಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ, ವಾಹನ ಚಾಲಕರು ವೇಗ ನಿಯಂತ್ರಿಸಿಕೊಂಡು ಸುರಕ್ಷಿತವಾಗಿ ಸಂಚರಿಸುವಂತೆ ಸಲಹೆ ನೀಡಲಾಗಿದೆ.

ಶಿರಾಡಿ ಘಾಟ್ ನಲ್ಲಿ ಭೂಕುಸಿತ - ಜೆಸಿಬಿ ಮೂಲಕ ರೈತ ಮಣ್ಣು ತೆರವು, ವಾಹನ ಸಂಚಾರ ಸುಗಮ :

ಮುಂಗಾರು ಮಳೆಯ ನಡುವೆಯೂ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 (NH-75) ರ ಶಿರಾಡಿ ಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ತ್ವರಿತವಾಗಿ ಮಣ್ಣು ತೆರವುಗೊಳಿಸುವುದರಿಂದ ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗಿಲ್ಲ.

ಸಕಲೇಶಪುರದಿಂದ ಮಂಗಳೂರು ಕಡೆಗೆ ಸಾಗುವ ಮಾರ್ಗದ ಕಪ್ಪಳ್ಳಿ ಸಮೀಪ ಗುಡ್ಡದ ಮಣ್ಣು ರಸ್ತೆಗೆ ಜಾರಿ ಬಿದ್ದಿತ್ತು. ಮಾಹಿತಿ ದೊರೆಯುತ್ತಿದ್ದಂತೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿ ಜೆಸಿಬಿ ಯಂತ್ರಗಳನ್ನು ಬಳಸಿ ಮಣ್ಣು ಮತ್ತು ಕಲ್ಲುಗಳನ್ನು ತಕ್ಷಣ ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಿದರು.

ಈ ಬಾರಿ ಮಳೆಗಾಲಕ್ಕೂ ಮುನ್ನವೇ ಶಿರಾಡಿ ಘಾಟ್ ನಲ್ಲಿ ಬೂಕು ಸಿದ್ಧ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳನ್ನು ಜಿಲ್ಲಾಡಳಿತ ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಪರಿಣಾಮ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದರು ಕೂಡ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸುತ್ತಿರುವುದರಿಂದ ಸಂಚಾರದಲ್ಲಿ ವ್ಯಥೆಯ ಉಂಟಾಗುತ್ತಿಲ್ಲ.

ಮುಂದಿನ ದಿನಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಘಾಟ್ ಪ್ರದೇಶದಲ್ಲಿ ಜಾರುವ ರಸ್ತೆ, ಕಡಿಮೆ ಗೋಚರತೆ ಹಾಗೂ ಭೂಕುಸಿತದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವೇದ ನಿಯಂತ್ರಿಸಿಕೊಂಡು ವಾಹನ ಚಲಾಯಿಸುವುದು ಸೂಕ್ತ ಎಂದು ಸೂಚಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online