Belagavi News:
ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಅವ್ಯವಸ್ಥೆ, 'ನಮ್ಮ ಕ್ಲಿನಿಕ್' ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಹಾಗೂ ಸಾವಿರಾರು ಹುದ್ದೆಗಳು ಖಾಲಿ ಇರುವ ವಿಚಾರವನ್ನು ಮುಂದಿಟ್ಟುಕೊಂಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ನಡೆಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್, "ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಇಂದು ಐಸಿಯು ತಲುಪಿದೆ" ಎಂದು ಟೀಕಿಸಿದ್ದಾರೆ. ಗ್ಯಾರೆಂಟಿ ಯೋಜನೆಗಳಿಗೆ ಆದ್ಯತೆ ನೀಡಿದ ಪರಿಣಾಮ ಆರೋಗ್ಯ ಇಲಾಖೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದ ಅವರು, "ನಮ್ಮ ಕ್ಲಿನಿಕ್" ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬೇಡಿಕೆಗಳನ್ನು ಕರ್ನಾಟಕ ಕೂಡಲೇ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಆರೋಗ್ಯ ಕ್ಷೇತ್ರದ ದುಸ್ಥಿತಿ, ಬಂದಿ ಕೊರತೆ ಮತ್ತು ವೇತನ ವಿಳಂಬದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜಕೀಯವನ್ನು ಮತ್ತಷ್ಟು ಹೆಚ್ಚಿಸಿದೆ.
ಆರೋಗ್ಯ ಇಲಾಖೆ ಸಂಪೂರ್ಣ ಐಸಿಯುನಲ್ಲಿದೆ - ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ :
ರಾಜ್ಯದ ಆಯೋಗ ಇಲಾಖೆಯು ದುಸ್ಥಿತಿಯನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ನಡೆಸಿದ್ದಾರೆ. ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರ ಬದಲಾದರು ಆರೋಗ್ಯ ಇಲಾಖೆಯ ಪರಿಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ, ಅಸಮರ್ಥ ಆಡಳಿತ ಮತ್ತು ಜನವಿರೋಧಿ ನೀತಿಗಳಿಂದ ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ. ಜೀವ ಉಳಿಸಬೇಕಾದ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇರುವುದರಿಂದ ಆರೋಗ್ಯ ಸೇವೆಗಳು ಕುಸಿದಿವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಕೇವಲ ಹೆಸರಿಗಷ್ಟೇ ಉಳಿದಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಮಸ್ಯೆಗಳ ಆಗರಗಳಾಗಿವೆ ಎಂದು ಆರೋಪಿಸಿದ ಅಶೋಕ್, ರಾತ್ರಿ ವೇಳೆ ತೂತು ಚಿಕಿತ್ಸೆ ಬರುವ ರೋಗಿಗಳನ್ನು ನೋಡಿಕೊಳ್ಳಲು ವೈದ್ಯರು ಹಾಗೂ ಸಿಬ್ಬಂದಿಯೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಕನಿಷ್ಠ ಪ್ಯಾರಾಸಿಟಮಾಲ್ ಮಾತ್ರೆಗಳು ಲಭ್ಯವಿಲ್ಲದೆ, ಬಡ ರೋಗಿಗಳಿಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರ ತಕ್ಷಣ ಪರಿಹರಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
' ನಮ್ಮ ಕ್ಲಿನಿಕ್ ' ಸಿಬ್ಬಂದಿಗೆ ಮೂರು ತಿಂಗಳಿಂದ ಸಂಬಳವಿಲ್ಲ - ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ ವಾಗ್ದಾಳಿ :
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆಯ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಕಥೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಡವರು ಹಾಗೂ ದಿನಗೂಲಿ ಕಾರ್ಮಿಕರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರಂಭವಾದ ನಮ್ಮ ಕ್ಲಿನಿಕ್ ಯೋಜನೆಯೇ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಟೀಕಿಸಿದ್ದಾರೆ. ಹಗಲಿರುಳು ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ ಗಳು ಹಾಗೂ ಸಿಬ್ಬಂದಿಗೆ ಮೂರು ತಿಂಗಳಿಂದ ಸಂಬಳ ನೀಡದಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.
"ದುಡಿಯುವ ಕೈಗಳಿಗೆ ಸಂಬಳ ಕೊಡಲೂ ಸಾಧ್ಯವಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಾದರೂ ಇದೆಯೇ ?" ಎಂದು ಪ್ರಶ್ನಿಸಿರುವ ಅಶೋಕ್, ಗ್ಯಾರೆಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಸಂಕಷ್ಟಕ್ಕೆ ತಳಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆರೋಗ್ಯ ಕ್ಷೇತ್ರದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, 'ನಮ್ಮ ಕ್ಲಿನಿಕ್ ' ಸಿಬ್ಬಂದಿಯ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯನ್ನು ಬಲಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯ 35,196 ಖಾಲಿ ಹುದ್ದೆ ಭರ್ತಿದೆ ಆಗ್ರಹ - ಬಿಜೆಪಿ ಉಗ್ರ ಹೋರಾಟದ ಎಚ್ಚರಿಕೆ:
ರಾಜ್ಯ ಆರೋಗ್ಯ ಇಲಾಖೆಯಲ್ಲಿನ 35,196 ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ 'ನಮ್ಮ ಕ್ಲಿನಿಕ್ ' ಸಿಬ್ಬಂದಿಯ ಮೂರು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತಮ್ಮ ಅಧಿಕೃತ ಎಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರೋಗ್ಯ ಇಲಾಖೆಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಬಡವರ ಆರೋಗ್ಯದೊಂದಿಗೆ ಸರ್ಕಾರ ಚೆಲ್ಲಾಟವಾಗುತ್ತಿದೆ ಎಂದು ಟೀಕಿಸಿದ ಅವರು, ಸಾರ್ವಜನಿಕ ಆರೋಗ್ಯ ಸೇವೆ ಸುಧಾರಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
"ಮುಖ್ಯಮಂತ್ರಿಗಳೇ, ಆರೋಗ್ಯ ಇಲಾಖೆಯಲ್ಲಿನ 35,196 ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ. 'ನಮ್ಮ ಕ್ಲಿನಿಕ್' ವೈದ್ಯರು, ನರ್ಸ್ ಗಳು ಹಾಗೂ ಸಿಬ್ಬಂದಿಗೆ ಬಾಕಿ ಇರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಿ. ಇಲ್ಲದಿದ್ದರೆ ಬಡವರ ಆರೋಗ್ಯದ ಜೊತೆ ಆಟವಾಡುತ್ತಿರುವ ಈ ಜನ ವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ" ಎಂದು ಆರು ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಈ ಹೇಳಿಕೆಯೊಂದಿಗೆ ಆರೋಗ್ಯ ಇಲಾಖೆ, ಸಿಬ್ಬಂದಿ ಕೊರತೆ ಹಾಗೂ ' ನಮ್ಮ ಕ್ಲಿನಿಕ್' ಯೋಜನೆಯ ವೇತನ ವಿಳಂಬದ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Also Read:
ಹಳೆಯ ದಾಖಲೆಗಳಿಗೆ ಗುಡ್ ಬೈ : 2026 ಫಿಫಾ ವಿಶ್ವಕಪ್ ನಲ್ಲಿ ಹೊಸ ಮೈಲಿಗಲ್ಲು!