Belagavi News:
ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ: ಮೂರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ
ಬೆಳಗಾವಿಯಲ್ಲಿ ಮೂರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಪೀರನವಾಡಿ ಪಟ್ಟಣದಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಪೀರನವಾಡಿಯ ಪಾಟೀಲ್ ಗಲ್ಲಿ ನಿವಾಸಿಗಳಾದ " ಪ್ರೇಮಾ ನಾಗೇಶ್ ತಳವಾರ (28)" ಹಾಗೂ ಅವರ ಮೂರು ವರ್ಷದ ಪುತ್ರ ಭುವನ್ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರೇಮಾ ಅವರ ತವರು ಮನೆಯವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಂಡನ ಮನೆಯವರು ಮಾಡಿದ್ದ ಸಾಲವನ್ನು ತೀರಿಸುವಂತೆ ಮಾನಸಿಕ ಒತ್ತಡ ಹಾಗೂ ಕಿರುಕುಳ ನೀಡುತ್ತಿದ್ದರು. ಅತ್ತೆ, ಗಂಡ, ಮೈದುನ ಹಾಗೂ ಕುಟುಂಬದ ಇತರ ಸದಸ್ಯರು ಸೇರಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಕಾರಣದಿಂದ ಮನನೊಂದು ಪ್ರೇಮಾ ತಮ್ಮ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಗೆ ನಿಖರ ಕಾರಣವೇನು ಹಾಗೂ ಕುಟುಂಬದವರು ಮಾಡಿರುವ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.
ಪ್ರೇಮಾ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಅತ್ತೆ ಸುಶೀಲಾ ತಳವಾರ , ಗಂಡ ನಾಗೇಶ್ ತಳವಾರ , ಮೈದುನ ಪರಶುರಾಮ ತಳವಾರ, ನೆಗ್ಯಾನಿ, ಸಂಗೀತ ತಳವಾರ, ಮರೇವ್ವಾ ತಳವಾರ ಹಾಗೂ ಶಾರದಾ ಕಲಕಾಂವಕರ್ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪ್ರೇಮಾ ಅವರ ಕುಟುಂಬಸ್ಥರು ತೀವ್ರ ದುಃಖ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನು ಹಾಗೂ ಮೃತೆಯ ಕುಟುಂಬಸ್ಥರು ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿದೇಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವರದಿ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.