<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಚಾರ್ಮಾಡಿ ಘಾಟಿಯಲ್ಲಿ ಮಳೆ ಅಬ್ಬರ : ದಟ್ಟ ಮಂಜಿನಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ

ಚಾರ್ಮಾಡಿ ಘಾಟಿಯಲ್ಲಿ ಮಳೆ ಅಬ್ಬರ : ದಟ್ಟ ಮಂಜಿನಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ
Summary: Heavy rain, dense fog and torrential downpours continue in Charmadi Ghat. Motorists are struggling due to low visibility and slippery roads. Know today's Charmadi Ghat weather, road conditions and rain updates here.

Belagavi News:

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಘಾಟಿಯಲ್ಲಿ ಪ್ರಕೃತಿಯ ರೌದ್ರ ರೂಪ ಗೋಚರಿಸುತ್ತಿದೆ. ದಟ್ಟ ಮಂಜು ಆವರಿಸಿರುವುದರಿಂದ ರಸ್ತೆಗಳಲ್ಲಿ ಗೋಚರತೆ ತೀವ್ರವಾಗಿ ಕಡಿಮೆಯಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ.

ಘಾಟಿಯ ಎರಡು ಬದಿಗಳಲ್ಲಿ ಇರುವ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಮಳೆಯ ಅಬ್ಬರದಿಂದ ರಸ್ತೆಯ ಬದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಂಜಿನ ಕಾರಣ ಕೆಲವೆಡೆ ಕೆಲವೇ ಮೀಟರ್ ಗಳಷ್ಟು ಮಾತ್ರ ರಸ್ತೆ ಕಾಣುತ್ತಿದ್ದು, ವಾಹನಗಳ ವೇಗ ಕುಂಠಿತಗೊಂಡಿದೆ.

ಪ್ರವಾಸಿಗರು ಮಳೆಗಾಲದ ಸೊಬಗನ್ನು ಕಣ್ತುಂಬಿಕೊಳ್ಳಲು ಚಾರ್ಮಾಡಿ ಘಾಟಿಯತ್ತ ಆಗಮಿಸುತ್ತಿದ್ದರು, ಸುರಕ್ಷತೆಯ ದೃಷ್ಟಿಯಿಂದ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಹಾಗೂ ಅಗತ್ಯವಿದ್ದರೆ ನಿಧಾನವಾಗಿ ವಾಹನ ಚಲಾಯಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತ, ರಸ್ತೆ ಜಾರುವಿಕೆ ಕಡಿಮೆ ಗೋಚರತೆ ಬಗ್ಗೆ ವಾ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ. ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವವರು ತಮ್ಮ ವಾಹನಗಳ ಹೆಡ್ ಲೈಟ್ ಗಳನ್ನು ಬಳಸುವುದು, ಅಂತರ ಕಾಯ್ದುಕೊಳ್ಳುವುದು ಮತ್ತು ಹವಾಮಾನ ಮಾಹಿತಿಯನ್ನು ಪರಿಶೀಲಿಸಿ ಪ್ರಯಾಣಿಸುವುದು ಸೂಕ್ತ.

ಚಿಕ್ಕಮಗಳೂರಿನಲ್ಲಿ ಮುಂಗಾರು ಅಬ್ಬರ - ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ ; ದಟ್ಟ ಮಂಜಿನಿಂದ ವಾಹನ ಸವಾರರ ಪರದಾಟ :

ಜಿಲ್ಲೆಯಾದ್ಯಂತ ಮುಂಗಾರು ಮಳೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆ ದಾಖಲಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಘಾಟಿ ಪ್ರದೇಶ ಸಂಪೂರ್ಣ ಮಂಜಿನ ಹೊದಿಕೆಯಲ್ಲಿ ಮುಳುಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಾರ್ಮಾಡಿ ಘಾಟಿಯ ರಸ್ತೆಗಳ ಎರಡು ಬದಿಗಳಲ್ಲಿ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಮಳೆಗಾಲದ ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ. ಆದರೆ ದಟ್ಟ ಮಂಜಿನಿಂದ ರಸ್ತೆ ಗೋಚರತೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ವಾಹನ ಸಂಚಾರ ನಿಧಾನಗೊಂಡಿದೆ.

ಮಳೆ ನೀರು ರಸ್ತೆ ಬದಿಗಳಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ರಸ್ತೆ ಜಾರುವಂತಾಗಿದ್ದು, ಘಾಟಿಯಲ್ಲಿ ಸಂಚರಿಸುವ ವಾಹನ ಚಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಗತ್ಯವಿಲ್ಲದಿದ್ದರೆ ಘಾಟಿ ಮಾರ್ಗದಲ್ಲಿ ಪ್ರಯಾಣವನ್ನು ಮುಂದೂಡುವುದು ಉತ್ತಮ ಎಂದು ಸ್ಥಳೀಯರು ಸಲಹೆ ನೀಡಿದ್ದಾರೆ.

ಅವಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಉತ್ತಮ ಮಳೆ ಆಗುವ ಸಾಧ್ಯತೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಚಾರ್ಮಾಡಿ ಘಾಟಿ ಮೂಲಕ ಸಂಚರಿಸುವವರು ರಸ್ತೆ ಮತ್ತು ಹವಾಮಾನ ಪರಿಸ್ಥಿತಿಯ ಮಾಹಿತಿ ಪಡೆದು ಪ್ರಯಾಣಿಸುವುದು ಸೂಕ್ತ ಎಂದಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ರಣ ಮಳೆ, ದಟ್ಟ ಮಂಜಿನ ಕಾಟ - NH 173 ರಲ್ಲಿ ವಾಹನ ಸವಾರರ ಪರದಾಟ :

ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಒಂದು ಕಡೆ ಧಾರಾಕಾರ ಮಳೆ ಸುರಿಯುತ್ತಿದ್ದರೆ ಮತ್ತೊಂದು ಕಡೆ ದಟ್ಟ ಮಂಜು ಇಡೀ ಘಾಟಿಯನ್ನು ಆವರಿಸಿದೆ. ಮಳೆ ಮತ್ತು ಮಂಜಿನ ಜೋಡಿ ಪರಿಣಾಮದಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ "ರಾಷ್ಟ್ರೀಯ ಹೆದ್ದಾರಿ 173 (NH173)" ರಲ್ಲಿ ಗೋಚರತೆ ಬಹಳಷ್ಟು ಕಡಿಮೆಯಾಗಿದ್ದು, ಎದುರುಗಡೆಯಿಂದ ಬರುವ ವಾಹನಗಳು ಸಮೀಪಕ್ಕೆ ಬಂದ ಬಳಿಕವೇ ಕಾಣುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಿರಿದಾದ ಘಾಟಿ ರಸ್ತೆಯಲ್ಲಿ ಮಳೆ, ಮಂಜು ಮತ್ತು ತಿರುವುಗಳ ಕಾರಣ ವಾಹನ ಚಾಲಕರು ನಿಧಾನಗತಿಯಲ್ಲಿ ಸಂಚರಿಸುತ್ತಿದ್ದು, ಸುರಕ್ಷತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ.

ನಿರಂತರ ಮಳೆಯಿಂದ ಘಾಟಿಯ ಎರಡು ಬದಿಗಳಲ್ಲಿರುವ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಕಡಿಮೆ ಗೋಚರತೆ ಮತ್ತು ಜಾರುವ ರಸ್ತೆಯಿಂದ ವಾಹನ ಸವಾರರು ಸಾಕಷ್ಟು ಪರದಾಡುತ್ತಿದ್ದಾರೆ.

ನಿರಂತರ ಮಳೆಯಿಂದ ಘಾಟಿಯ ಎರಡು ಬದಿಗಳಲ್ಲಿರುವ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಕಡಿಮೆ ಗೋಚರಕ್ಕೆ ಮತ್ತು ಜಾರುವ ರಸ್ತೆಯಿಂದ ವಾಹನ ಸವಾರರು ಸಾಕಷ್ಟು ಪರದಾಡುತ್ತಿದ್ದಾರೆ.

ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಚಾರ್ಮಾಡಿ ಮೂಲಕ ಸಂಚರಿಸುವವರು ವಾಹನಗಳ ಹೆಡ್ ಲೈಟ್ ಗಳನ್ನು ಬಳಸುವುದು, ಸುರಕ್ಷಿತ ಕಾಯ್ದುಕೊಳ್ಳುವುದು ಹಾಗೂ ಅನಗತ್ಯ ವೇಗವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ಮಾತ್ರ ಈ ಮಾರ್ಗದಲ್ಲಿ ಪ್ರಯಾಣಿಸುವುದು ಒಳಿತು ಎಂದು ಸ್ಥಳೀಯರು ಹಾಗೂ ವಾಹನ ಚಾಲಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪದ್ಯ ಧಾರಾಕಾರ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿದ್ದು, ಇಡೀ ಘಾಟಿ ಹಸಿರು ಕಂಗೊಳಿಸುತ್ತಿದೆ ಮಳೆಯ ಅಬ್ಬರದಿಂದ ಘಾಟಿ ರಸ್ತೆಯ ಎರಡು ಬದಿಗಳಲ್ಲಿ ಹಲವೆಡೆ ನೈಸರ್ಗಿಕ ಜಲಪಾತಗಳು ಉಕ್ಕಿ ಹರಿಯುತ್ತಿದ್ದು, ಅವುಗಳ ಮನಮೋಹಕ ದೃಶ್ಯಗಳು ಪ್ರಯಾಣಿಕರು ಹಾಗೂ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಭಾರಿ ಮಳೆಯ ನಡುವೆ ಜಲಪಾತಗಳ ಸೌಂದರ್ಯವನ್ನು ಕಂಡುಕೊಳ್ಳಲು ಅನೇಕರು ಚಾರ್ಮಾಡಿ ಘಾಟಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ನಿರಂತರ ಮಳೆ, ದಟ್ಟ ಮಂಜು ಹಾಗೂ ಜಾರುವ ರಸ್ತೆಗಳಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online