Belagavi News:
ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಮತ್ತು ಒಳನಾಡಿನ ಅನೇಕ ಪ್ರದೇಶಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಕೆಲವಡಿ ಗಾಳಿ ಬೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಅನಗತ್ಯವಾಗಿ ಹೊರಗಡೆ ಸಂಚಾರ ತಪ್ಪಿಸಲು ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿತ ವಾತಾವರಣ ಮುಂದುವರಿಯಲಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Karnataka Weather Alert - ಕರಾವಳಿಯಲ್ಲಿ ಗಾಳಿ - ಮಳೆ ಹೆಚ್ಚಳ - ಉತ್ತರ ಕನ್ನಡದಲ್ಲಿ ಬಿರುಗಾಳಿ ಎಚ್ಚರಿಕೆ :
ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯ ಚಟುವಟಿಕೆ ಜೋರಾಗಿದ್ದು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಹೆಚ್ಚಿನ ಎಚ್ಚರಿಕೆಯನ್ನು ವಹಿಸಲು ಸೂಚಿಸಲಾಗಿದೆ.
ಇದಕ್ಕೂ ಜೊತೆಗೆ, ಉತ್ತರಗಳ ನಾಡಿನ ಎಂಟು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಹಲವಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿತ ವಾತಾವರಣ ಮುಂದುವರೆಯಲಿದ್ದು, ಜನರು ಸುರಕ್ಷಿತ ಕ್ರಮಗಳನ್ನು ಅನುಸರಿಸಲು ಹವಾಮಾನ ಇಲಾಖೆ ಮನವಿ ಮಾಡಿದೆ.
ಮಳೆಯ ಜೊತೆಗೆ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯಿಂದ ಕರಾವಳಿ ಪ್ರದೇಶದ ಜನರು ಅನಗತ್ಯ ಸಂಚಾರ ತಪ್ಪಿಸಲು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸೂಚಿಸಲಾಗಿದೆ.
ಬೆಂಗಳೂರು ಸೇರಿ ರಾಜ್ಯದ ಹೊಲಬೇಡಿ ಮಳೆ ಬಿರುಗಾಳಿ ಎಚ್ಚರಿಕೆ, ಉತ್ತರ ಕರ್ನಾಟಕದಲ್ಲಿ ಗಾಳಿ ವೇಗ ಹೆಚ್ಚಳ :
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆಯಲಿದ್ದು, ಕರಾವಳಿ, ಉತ್ತರವಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಗಾಳಿಯು ವೇಗ ಗಂಟೆಗೆ ಐವತ್ತು ಕಿಲೋಮೀಟರ್ ವರೆಗೆ ತಲುಪುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಉತ್ತರಗಳ ನಾಡಿನಲ್ಲಿ ಬಿರುಗಾಳಿ ಆತಂಕ : ಉತ್ತರ ನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಜೊತೆಗೆ, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕಲಬುರಗಿ , ಬೀದರ್ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಈ ಜಿಲ್ಲೆಗಳ ಜನರು ಹೆಚ್ಚಿನ ಎಚ್ಚರಿಕೆವಹಿಸುವಂತೆ ಸೂಚಿಸಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳುವ ಅಥವಾ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ :
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ವಿಸ್ತರಣೆ ಹೆಚ್ಚಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಳಗಡೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಇದಲ್ಲದೆ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚನೆ :
ಮಳೆ ಮತ್ತು ಬಿರುಗಾಳಿ ಹಿನ್ನೆಲೆ ಸಾರ್ವಜನಿಕರು ಅನಗತ್ಯ ಸಂಚಾರ ತಪ್ಪಿಸಲು, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಅವಮಾನ ಇಲಾಖೆ ಸಲಹೆ ನೀಡಿದೆ. ರೈತರು ಹಾಗೂ ಮೀನುಗಾರರು ಕೂಡ ಹವಾಮಾನ ಮಾಹಿತಿ ಗಮನಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿತ ವಾತಾವರಣ ಮತ್ತು ಮಳೆಯ ಚಟುವಟಿಕೆ ಮುಂದುವರೆಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
Also Read:
7ನೇ ಸ್ಥಾನ ಯಾರಿಗೆ? ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ನಡುವೆ ಜಿದ್ದಾಜಿದ್ದಿ