<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಕರ್ನಾಟಕದಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ! 18ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅಲರ್ಟ್

ಕರ್ನಾಟಕದಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ! 18ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅಲರ್ಟ್
Summary: The heavy rains are likely to continue in Karnataka, with more than 18 districts of the state forecasting rain tomorrow.

belagavi news:

Karnataka Weather: ಮೇ 8ರಂದು ಕರ್ನಾಟಕದಲ್ಲಿ ಹವಾಮಾನ ವೈಪರಿತ್ಯ ಕಂಡುಬರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ 42 °C ತನಕ ತೀವ್ರ ಉಷ್ಣ ಹಳೆ ಮುಂದುವರೆಯುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಬಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಅಂದಾಜಿಸಲಾಗಿದೆ. ಇನ್ನೂ ರಾಯಚೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ನಿರೀಕ್ಷೆ ಇದೆ.

ಬೆಂಗಳೂರು, ಮೇ 7 ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಳಗಡೆ ತೀವ್ರ ಬಿಸಿಯ ವಾತಾವರಣ ಮುಂದೆ ವರದಿದ್ದರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರವಳ ನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬಿಧರ್ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತೀವ್ರ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು. ತಾಪಮಾನವು ಸುಮಾರು 42 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

Sponsored

ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಉತ್ತರವಳ ನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್ , ಹಾವೇರಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ. ದಕ್ಷಿಣ ಒಳನಾಡಿನ ಚಿಕ್ಕ ಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಚಾಮರಾಜನಗರ, ದಾವಣಗೆರೆ, ಹಾಸನ್, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಉಳಿದಂತೆ ಬೀದರ್, ಕಲ್ಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರಿ ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ್, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಳಹವೇ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೇಗಿರಲಿದೆ ಬೆಂಗಳೂರು ವಾತಾವರಣ?

ಬೆಂಗಳೂರು ನಗರದಲ್ಲಿ ನಾಳೆ ಸಾಮಾನ್ಯವಾಗಿ, ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ ೨೨ ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಹಗಲಿನ ವೇಳೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆ ಇದ್ದರು, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗ ಗಂಟೆಗೆ 6.4 ರಿಂದ 16 ಕಿ.ಮೀ ವರೆಗೆ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Sponsored

Also Read:

ಬೆಂಗಳೂರು ಶಾಕ್: ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಐಟಿ ದಾಳಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online