belagavi news :
ನೈರುತ್ಯ ಮುಂಗಾರು ಕರ್ನಾಟಕ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಾರಿ ಮಳೆ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ.
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತ್ಯಂತ ಹೆಚ್ಚು ಮಳೆ ಯಾಗುವ ನಿರೀಕ್ಷೆಯಿದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್’ ಘೋಷಿಸಿದೆ. ಒಳನಾಡಿನ ಹಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ನೀಡಲಾಗಿದ್ದು, ಕೆಳಗಡೆ ತೀವ್ರ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ರಸ್ತೆ ಜಲಾವೃತ, ನದಿ ಮಟ್ಟ ಏರಿಗೆ ಹಾಗೂ ಕಡಿಮೆ ಪ್ರದೇಶಗಳಲ್ಲಿ ಪ್ರವಾಹ ದಂತಹ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಅಗತ್ಯವಿಲ್ಲದೆ ಪ್ರಯಾಣವನ್ನು ತಪ್ಪಿಸುವುದು ಹಾಗೂ ಸ್ಥಳೀಯ ಆಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು ಮುಖ್ಯವಾಗಿದೆ.
ಮುಂಗಾರು ಇನ್ನಷ್ಟು ಚುರುಕಾಗುವ ಲಕ್ಷಣಗಳು ಕಂಡು ಬರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ಮೂರು ದಿನಗಳ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಕೆಲವು ಸ್ಥಳಗಳಲ್ಲಿ 204.5 ಮೀ.ಮೀ ಗಿಂತ ಹೆಚ್ಚು ವಿಪರೀತ ಮಳೆಯಾಗುವ ನಿರೀಕ್ಷೆಯಿದು, ಜನರು ಅತ್ಯಂತ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಈ ಬಾರಿಯ ಮಳೆ ಪರಿಣಾಮ ವಾಗಿ ತೆಗೆದು ಪ್ರದೇಶಗಳು ಜಲಾವೃತ ವಾಗುವ ಸಾಧ್ಯತೆ ಇರುವುದರಿಂದ ಆ ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಹಾಗೂ ನದಿ ತೀರ ಪ್ರದೇಶಗಳಿಂದ ದೂರ ಇರಲು ಸಲಹೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ತುಮಕೂರು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಹಗುರದಿಂದ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 12ರವರೆಗೆ ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಜೊತೆಗೆ ಕೆಲವೆಡೆ ತೀವ್ರ ಮಳೆಯೂ ಸಂಭವಿಸಬಹುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಆಕಾಶ ಮೋಡಕವಿದ ಸ್ಥಿತಿಯಲ್ಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಹೆಚ್ಚಾಗಿದೆ.
ಮಳೆಯ ಸಮಯದಲ್ಲಿ ಕೆಳಗಡೆ ನೀರು ನಿಲ್ಲುವುದು, ಟ್ರಾಫಿಕ್ ಜಾಮ್ ಹಾಗೂ ತಾತ್ಕಾಲಿಕ ಅಸೌಕರ್ಯಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೂ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಅಗತ್ಯವಿಲ್ಲದೆ ಹೊರಗೆ ಹೋಗುವುದನ್ನು ತಪ್ಪಿಸಿ, ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕನ್ನಡ: ಬೆಳಗಾವಿ, ಧಾರವಾಡ, ಗದಗ್, ಹಾವೇರಿ, ಕೊಪ್ಪಳ ಸೇರಿದಂತೆ ಜಿಲ್ಲೆಗಳಲ್ಲಿ ಜೂನ್ 10ವರೆಗೆ ಬಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯ ಕರಾವಳಿ ನೈರುತ್ಯ ಮುಂಗಾರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಬೆಂಗಳೂರಿನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದೆ.
ಒಟ್ಟು 30 ಸದಸ್ಯರಿರುವ ಈ ತಂಡ ಸದ್ಯ ಪುತ್ತೂರಿನಲ್ಲಿ ತಾತ್ಕಾಲಿಕವಾಗಿ ಮೊಕ್ಕಾಂ ಹೂಡಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಪ್ರವಾಹ, ಕಟ್ಟಡ ಕುಸಿತ, ರಾಸಾಯನಿಕ ಸೋರಿಕೆ ಹಾಗೂ ವಿ ಕಿರಣ ಸಂಬಂಧಿತ ವಿಪತ್ತು ಗಳಂತಹ ವಿವಿಧ ಸನ್ನಿವೇಶಗಳಿಗೆ ತ್ವರಿತವಾಗಿ ಪ್ರತಿಕ್ರಿಸಲು ತಂಡ ಸಜ್ಜಾಗಿದೆ.
ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಬಾರಿ ಮಳೆ ಮತ್ತು ಅದರಿಂದ ಉಂಟಾಗುವ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಈ ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also Read:
ಶಿವಂ ಅಸೋಸಿಯೇಟ್ಸ್ ಕೇಸ್ ಬಳಿಕವೂ ಹೂಡಿಕೆ ಮುಂದುವರಿದಿದೆ: ಸಿಐಡಿ ಡಿಐಜಿ ಗುಳೇದ್ ಹೇಳಿದ್ದೇನು ?