<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಂಗಳೂರಿನ ವಿವಿಧಡೆ ಭಾರಿ ಗಾಳಿ ಮಳೆ : ರಸ್ತೆಗಳು ಜಲಾವೃತ ಟ್ರಾಫಿಕ್ ಜಾಮ್

ಬೆಂಗಳೂರಿನ ವಿವಿಧಡೆ ಭಾರಿ ಗಾಳಿ ಮಳೆ : ರಸ್ತೆಗಳು ಜಲಾವೃತ ಟ್ರಾಫಿಕ್ ಜಾಮ್
Summary: Sudden gusts of wind and rain in various parts of the city have disrupted traffic. In addition, traffic jams have occurred, causing hardship to motorists.

Belagavi news:

ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿಗೆ ಇದೀಗ ವರುಣನ ತಂಪು ಸ್ಪರ್ಶವಾಗಿದೆ. ಬೆಂಗಳೂರಿನ ಕೆಲವೆಡೆ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದ್ದು, ಹವಾಮಾನ ತಂಪಾದರು ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಏಕಾಏಕಿ ಸುರಿದ ಮಳೆಯಿಂದ ವಾಹಸ ವಾರರು ರಸ್ತೆಗಳಲ್ಲಿ ಪರದಾಡುವಂತಾಯಿತು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಳು ಹಾಗೂ ಅಂಗಡಿಗಳ ಮುಂದೆ ಆಶ್ರಯ ಪಡೆದ ದೃಶ್ಯಗಳು ಕಂಡುಬಂದಿವೆ.

ಮಳೆಯ ಪರಿಣಾಮವಾಗಿ ನಗರದ ಹಲವೆಡೆಯ ರಸ್ತೆಗಳಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳ ರಸ್ತೆಗಳು ಕೆರೆಯಂತಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಅನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆ ಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜನರು ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ.

ಬಿಸಿಲ ಬೇಗೆಯಿಂದ ಬೆಂದಿದ್ದ ರಾಜಧಾನಿ ಬೆಂಗಳೂರಿಗೆ ಇಂದು ವರುಣನ ಆಗಮನದಿಂದ ತಂಪು ಸ್ಪರ್ಶವಾಗಿದೆ. ನಗರದ ವಿವಿಧಡೆ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದ್ದು, ಹವಾಮಾನ ತಂಪಾದರು ಕೆಲವೇ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಳೆಯ ಪರಿಣಾಮವಾಗಿ ಕೆಲ ಪ್ರದೇಶಗಳಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸವಾರರು ಪರದಾಡುವಂತಾಯಿತು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಮಳೆಯಿಂದಾಗಿ ರಸ್ತೆ ಬದಿಗಳಲ್ಲಿ ಆಶ್ರಯ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ನಗರದ ವಸಂತನಗರ, ಸಿಟಿ ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆಪಿ ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ,ಚಂದ್ರಾ ಲೇಔಟ್, ಸುಬ್ರಹ್ಮಣ್ಯ ನಗರ, ನಾಗರಬಾವಿ, ಮೂಡಲ ಪಾಳ್ಯ, ಗಿರಿನಗರ, ಬಸವನಗುಡಿ, ಮಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ.

ಮಳೆಯ ಕಾರಣ ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ನಿಧಾನಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರಿನ ಸಂಗ್ರಹವಾಗಿದ್ದು, ಜನರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ರಾಜಧಾನಿಯಲ್ಲಿ ಸುರಿದ ಮಳೆಯ ಹಿನ್ನೆಲೆ ಮುನ್ನೆಚ್ಚರಿ ಕಾರ್ಯಕ್ರಮವಾಗಿ ಕೆ ಆರ್ ಸರ್ಕಲ್, ಅಂಡರ್ ಪಾಸ್ ಅನ್ನು ಬಂದ್ ಮಾಡಲಾಗಿದೆ. ಮಳೆ ನೀರು ಸಂಗ್ರಹವಾಗುವ ಸಾಧ್ಯತೆ ಇರುವ ಕಾರಣದಿಂದ ಅಧಿಕಾರಿಗಳು ಬ್ಯಾರಿಕೇಡ ಹಾಕಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ಇದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರದ ಒತ್ತಡ ಹೆಚ್ಚಾಗಿದೆ.

ಇದೇ ವೇಳೆ, ಹವಾಮಾನ ಇಲಾಖೆ ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಅಬ್ಬರಿಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಇಲಾಖೆ ಸೂಚಿಸಿದೆ. ಕಡಲ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಿಶೇಷ ಜಾಗರೂಕತೆ ವಹಿಸುವಂತೆ ಸಲಹೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Also Read:

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್ ಕೇರ್: ಮೇ 20ರಂದು ಸಾರಿಗೆ ನೌಕರರ ಮುಷ್ಕರದ ಘೋಷಣೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online