Belagavi News:
ನೈರುತ್ಯ ಮುಂಗಾರು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಭೂಕುಸಿತ, ಪ್ರವಾಹ ಹಾಗೂ ಮರಗಳು ಉರುಳುವಂತಹ ಪ್ರಕೃತಿ ವಿಕೋಪಗಳ ಸಂಭವ ಹೆಚ್ಚಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 24 ಗಂಟೆಗಳ ತುರ್ತು ಸಹಾಯವಾಣಿಯನ್ನು ಆರಂಭಿಸಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಸಾರ್ವಜನಿಕರು ಸಹಾಯವಾಣಿಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ನದಿ ತೀರ, ಹಳ್ಳಕೊಳ್ಳಗಳು ಹಾಗೂ ತಗ್ಗು ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಿದ್ದಾರೆ. ಪ್ರವಾಸಿಗರು ಜಲಪಾತಗಳು, ಗುಡ್ಡುಗಾಡು ಪ್ರದೇಶಗಳು ಹಾಗೂ ಅಪಾಯಕಾರಿಯಾದ ಸ್ಥಳಗಳಿಗೆ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ತಪ್ಪಿಸುವಂತೆ ಸಲಹೆ ನೀಡಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಕೆಲವೇಡೆ ಅತಿ ಭಾರಿ ಮಳೆಯೊಂದಿಗೆ ಗಾಳಿಯ ವೇಗವು ಹೆಚ್ಚಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಶಾಲಾ ಮತ್ತು ಕಾಲೇಜು ರಜೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿವೆ.
ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ . ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ: ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್, ಚಿಕ್ಕಮಗಳೂರು ಸೇರಿ ಹಲಬೇಡಿ ಭಾರಿ ಮಳೆ ಮುನ್ಸೂಚನೆ:
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಚಿಕ್ಕಮಗಳೂರು, ಶಿವಮೊಗ್ಗ , ಉತ್ತರ ಕನ್ನಡ, ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಅತ್ಯಂತ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ನದಿತೀರ ಮತ್ತು ತಗ್ಗು ಪ್ರದೇಶಗಳಿಗೆ ಪ್ರವೇಶ ನಿರ್ಬಂಧ: ಭಾರಿ ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ನದಿ ತೀರ, ಜಲಾಶಯಗಳು ಹಾಗೂ ತಗ್ಗು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಧಿಕಾರಿ ಕಚೇರಿಗಳಲ್ಲಿ ವಿಶೇಷ ಹೆಲ್ಪ್ಲೈನ್ ಕೇಂದ್ರವನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಅಗತ್ಯವಿದ್ದಲ್ಲಿ ಸಹಾಯಕ್ಕಾಗಿ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೆಂಜ್ ಅಲರ್ಟ್ ಇರುವ ಜಿಲ್ಲೆಗಳು :
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟನ್ನು ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಬಾರಿ ಮಳೆಯಾಗುವ ಸಾಧ್ಯತೆ ಇದೆ.
ಇತರ ಜಿಲ್ಲೆಗಳಲ್ಲೂ ಮಳೆ ಚುರುಕು ಗೊಂಡಿದೆ:
ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ:
ಜಿಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ನದಿ ತೀರ, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಕೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇನ್ನೂ ಹೆಚ್ಚಿನ ಮಳೆ ಆಗುವ ಸಾಧ್ಯತೆಯನ್ನು ಸೂಚಿಸಿರುವ ಹಿನ್ನೆಲೆಯಲ್ಲಿ ಆಡಳಿತ ಸಂಪೂರ್ಣ ಸಜ್ಜಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಎಲ್ಲಾ ಅಧಿಕಾರಿ ಕೇಂದ್ರ ಸ್ಥಾನದಲ್ಲಿ ಇರಲು ಆದೇಶ:
ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಎಲ್ಲಾ ಸೇವಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಇರಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರವಾಹ, ಭೂಕುಸಿತ ಅಥವಾ ರಸ್ತೆ ಸಂಪರ್ಕ ಕಡಿತದಂತಹ ಸಮಸ್ಯೆಗಳು ಎದುರಾದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
24 ಗಂಟೆ ಕಾರ್ಯನಿರ್ವಹಿಸುವ ಹೆಲ್ಪ್ ಲೈನ್ ಆರಂಭ :
ಸಾರ್ವಜನಿಕರ ನೆರವಿಗಾಗಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವಹಿಷ್ಠಾಧಿಕಾರಿ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿಶೇಷ ಹೆಲ್ಪ್ ಲೈನ್ ಕೇಂದ್ರಗಳನ್ನು ಆರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳ ಮೂಲಕ ಸಹಾಯವನ್ನು ಪಡೆಯಬಹುದೆಂದು ಅಧಿಕಾರಿಗಳು ಈ ಮೊಬೈಲ್ ಸಂಖ್ಯೆಗಳನ್ನು ಹೆಲ್ಪ್ಲೈನ್ ಸಂಖ್ಯೆಗಳಾಗಿ ನೀಡಿದ್ದಾರೆ
1. 08262-238950
2. 9480805100
ಪ್ರವಾಸಿಗರಿಗೆ ವಿಶೇಷ ಎಚ್ಚರಿಕೆ :
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವವರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಜಲಪಾತಗಳು, ನದಿ ತೀರಗಳು ಮತ್ತು ಗುಡ್ಡ ಪ್ರದೇಶಗಳಲ್ಲಿ ಅನಗತ್ಯವಾಗಿ ಓಡಾಟ ಮಾಡದಂತೆ ಸೂಚಿಸಲಾಗಿದೆ.
Also Read:
ಇಂಟರ್ನೆಟ್ ಯುಗದಲ್ಲಿ ಡೇಟಾ ಸೇವೆ ಇಲ್ಲದ ಜಗತ್ತಿನ ಏಕೈಕ ದೇಶ ಯಾವುದು ?