belagavi news :
ಮುಂಗಾರು ಮಾರುತಗಳ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಇಂದಿನ ಹವಾಮಾನ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ, ಈ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆಯಿದ್ದು, ರಾತ್ರಿಯ ವೇಳೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದ್ದರೂ ತರಗತಿಗಳನ್ನು ನಡೆಸಲು ಮುಂದಾದ ಕೆಲವು ಖಾಸಗಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಧರ್ಶನ್ ಎಚ್ಚರಿಕೆ ನೀಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ತಂಪಾದ ವಾತಾವರಣ - ಉಡುಪಿ - ದಕ್ಷಿಣ ಕನ್ನಡ ಸೇರಿ ಕರಾವಳಿಗೆ ರೆಡ್ ಅಲರ್ಟ್ :
ಮುಂಗಾರು ಮಾರುತಗಳ ಪರಿಣಾಮ ರಾಜ್ಯಾದ್ಯಂತ ಮೋಡಕವಿದ ವಾತಾವರಣ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ತಂಪಾದ ಗಾಳಿ, ಮೋಡ ಕವಿದ ವಾತಾವರಣ ಹಾಗೂ ಸಾಧಾರಣದಿಂದ ಹಗುರ ಮಳೆ ಆಗುವ ಸಾಧ್ಯತೆ ಇದೆ.
ಇತ್ತ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಗುಡ್ಡ ಕುಸಿತ ಹಾಗೂ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ನಿರಂತರ ಮೋಡ ಕವಿದ ವಾತಾವರಣ ಮತ್ತು ಸಂಪಾದ ಗಾಳಿಯಿಂದ ರಾಜ್ಯದ ಹಲವು ನಗರಗಳಲ್ಲಿ ಗರಿಷ್ಠ ತಾಪಮಾನ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾತ್ರಿ ವೇಳೆಗೆ ಚಳಿಯ ವಾತಾವರಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಪ್ರಯಾಣವನ್ನು ತಪ್ಪಿಸಿ, ಸ್ಥಳಿಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ - ರಜೆ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ, ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ :
ಅರಾವಳಿ ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳ ಕಾಲ ಭಾರೀದಿಂದ ಅತಿ ಭಾರಿ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಇದೇ ವೇಳೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿ ಅರಬ್ಬೀ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಗುಡುಗು, ಸಿಡಿಲು ಹಾಗು ಬಿರುಗಾಳಿಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ನದೀತೀರಾ ಮತ್ತು ಕಡಲ ತೀರದ ನಿವಾಸಿಗಳು ಮುನ್ನೆಚ್ಚರಿಕೆ ಮಾಹಿತಿ ಸುರಕ್ಷಿತ ಸ್ಥಳಗಳಲ್ಲಿ ಉಳಿಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಜೊತೆಗೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಹವಾಮಾನ ಇಲಾಖೆ ಹಾಗು ಸ್ಟಡಿ ಆಡಳಿತ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.