<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ : ಗೋಕರ್ಣ ಮಹಾಬಲೇಶ್ವರ ದೇಗುಲ ಜಲಾವೃತ, ಸಂಚಾರ ವ್ಯತ್ಯಯ

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ : ಗೋಕರ್ಣ ಮಹಾಬಲೇಶ್ವರ ದೇಗುಲ ಜಲಾವೃತ, ಸಂಚಾರ ವ್ಯತ್ಯಯ
Summary: Heavy rain in Uttara Kannada has caused concern as water entered the sanctum sanctorum of Gokarna Mahabaleshwar temple. Roads in many parts of the district are flooded, causing traffic disruptions.

Belagavi News:

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರುಮಳೆಯ ಕೊರತೆಯಿಂದ ಬರಗಾಲದ ಭೀತಿ ಎದುರಾಗುತ್ತಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 36 ಗಂಟೆಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಯ ಪರಿಣಾಮವಾಗಿ ನದಿ - ಹಳ್ಳಗಳು ತುಂಬಿ ಹರಿಯುತ್ತಿದ್ದು, ಹಲವಡೆ ಜಲಾವೃತ ಪರಿಸ್ಥಿತಿ ಉಂಟಾಗಿದೆ.

ಈ ನಡುವೆ ಪುರಾಣ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲೂ ಮಳೆಯ ನೀರು ನುಗ್ಗಿರುವ ಘಟನೆ ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನೀರು ಪ್ರವೇಶಿಸಿದ್ದು, ಪವಿತ್ರ ಆತ್ಮಲಿಂಗ ಜಲಾವೃತಗೊಂಡಿರುವುದಾಗಿ ತಿಳಿದುಕೊಂಡಿದೆ. ಈ ಘಟನೆ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭಾರಿ ಮಳೆಯಿಂದ ಜಿಲ್ಲೆಯ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಹಲವಡೆ ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಂಗಿದ ಕಾರಣ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲ ಗ್ರಾಮಗಳಲ್ಲಿ ಸಂಪರ್ಕ ಮಾರ್ಗಗಳು ಅಸ್ತವ್ಯಸ್ತವಾಗಿವೆ.

Sponsored

ಅಧಿಕಾರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆವಹಿಸುವಂತೆ ಸೂಚಿಸಿದ್ದು, ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಗೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡದಲ್ಲಿ ಮುಂಗಾರು ಅಬ್ಬರ - ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆತ್ಮಲಿಂಗ ಜಲಾವೃತ, ಸ್ಪರ್ಶ ದರ್ಶನ ತಾತ್ಕಾಲಿಕ ನಿರ್ಬಂಧ :

ಕರ್ನಾಟಕದ ಮಳೆನಾಡಿನ ಹಲವಡೆ ಮಳೆಯ ಕೊರತೆಯಿಂದ ರೈತರು ಬರಗಾಲದ ಆತಂಕ ಎದುರಿಸುತ್ತಿದ್ದರೆ, ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ 36 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಹಲವಡೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಈ ನಡುವೆ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲೂ ಮಳೆ ನೀರು ನುಗ್ಗಿರುವ ಘಟನೆ ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನೀರು ಪ್ರವೇಶಿಸಿದ್ದು, ಪವಿತ್ರ ಆತ್ಮಲಿಂಗ ಸಂಪೂರ್ಣವಾಗಿ ಜಲಾವೃತಗೊಂಡಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರಲ್ಲಿ ಆತಂಕ ಉಂಟಾಗಿದೆ.

Sponsored

ಭಾರಿ ಮಳೆಯ ಪರಿಣಾಮವಾಗಿ ದೇವಸ್ಥಾನ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ಮಧ್ಯಾಹ್ನ 12 ಗಂಟೆಯ ನಂತರ ನೀಡಲಾಗುತ್ತಿದ್ದ ಆತ್ಮಲಿಂಗ ಸ್ಪರ್ಶ ದರ್ಶನವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ ಎಂದು ತಿಳಿಸಿದೆ.

ಜಿಲ್ಲೆಯಾದ್ಯಂತ ಮುಂದುವರೆಯುವ ಮಳೆಯ ಕಾರಣ ಹಲವು ಪ್ರದೇಶಗಳಲ್ಲಿ ರಸ್ತೆ ಜಲಾವೃತವಾಗಿದ್ದು, ಸಂಚಾರಕ್ಕೂ ತೀವ್ರ ಅಡ್ಡಿಯಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಗ ವಹಿಸುತ್ತಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

ಗೋಕರ್ಣದಲ್ಲಿ ಮಳೆಯ ಬರ ಮುಂದುವರಿಕೆ - ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಕೆ ನುಗ್ಗಿದ ನೀರು, ಪಂಪ್ ಸೆಟ್ ಮೂಲಕ ಹೊರ ಹಾಕುವ ಕಾರ್ಯ :

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರಿ ಮಳೆಯ ಹಿನ್ನೆಲೆಯಲ್ಲಿ ಗೋಕರ್ಣದ ಜನ ಜೀವನ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ದೇವಸ್ಥಾನ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡಿದ್ದಾರೆ.

Sponsored

ದೇವಸ್ಥಾನದ ಒಳಗೆ ನೀರು ನುಗ್ಗಿದ ಪರಿಣಾಮ ಪ್ರತಿದಿನ ಮಧ್ಯಾಹ್ನ 12:30ಕ್ಕೆ ನಡೆಯುವ ಮಹಾಪೂಜೆಯನ್ನು ನೆರವೇರಿಸಲು ಅರ್ಚಕರು ತೀವ್ರ ಅಡಚಣೆಯನ್ನು ಎದುರಿಸಬೇಕಾಯಿತು. ತಕ್ಷಣ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಗರ್ಭಗುಡಿಯ ಹೊರ ಭಾಗದಲ್ಲಿ ತಡೆಗೋಡೆ ನಿರ್ಮಿಸಿ, ಪಂಪ್ ಸೆಟ್ ಗಳ ಮೂಲಕ ಒಳಗೆ ನುಗಿದ್ದ ನೀರನ್ನು ಹೊರ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದೇ ವೇಳೆ ಗೋಕರ್ಣ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಬೀದಿಗಳು ಮಳೆಯ ನೀರಿನಿಂದ ಕೆರೆಯಂತಾಗಿದ್ದು, ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರು ಮತ್ತು ವಾಹನ ಸ್ವಾರರು ಜಲಾವೃತ ರಸ್ತೆಗಳ ಕಾರಣದಿಂದ ತೀವ್ರ ತೊಂದರೆ ಅನುಭವಿಸಿದ್ದಾರೆ.

ಅಧಿಕಾರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡದಲ್ಲಿ ಮಳೆ ಆವಾಂತರ ಮುಂದುವರಿಕೆ ; ಹೆದ್ದಾರಿಗಳು ಬಂದ್, ಅಂಗಡಿ - ಮನೆಗಳಿಗೆ ಮುಳುಗಡೆಯ ಭೀತಿ :

Sponsored

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ 36 ಗಂಟೆಗಳಿಂದ ಮುಂದುವರೆದ ಭಾರಿ ಮಳೆ ಜನ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಗೋಕರ್ಣ ಮಾತ್ರವಲ್ಲದೆ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಹಲವು ಪ್ರದೇಶಗಳಲ್ಲಿ ಜಲಾವೃತ ಪರಿಸ್ಥಿತಿ ಉಂಟಾಗಿದೆ.

ಬಿರುಗಾಳಿ ಸಹಿತ ಸುರಿದ ಮಳೆಯ ಪರಿಣಾಮವಾಗಿ ಕುಮಟಾ - ಸಿದ್ದಾಪುರ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ಕುಮಟಾ ತಾಲೂಕಿನ ವಾಲಗಳಿ ಬಳಿ ರಸ್ತೆಯ ಮೇಲೆ ಹಳ್ಳದಂತೆ ನೀರು ಹರಿದ ಕಾರಣ ದ್ವಿಚಕ್ರ ವಾಹನ ಸವಾರರು ಮುಂದಕ್ಕೆ ಸಾಗಲಾಗದೆ ರಸ್ತೆ ಬದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಯಿತು. ಭಾರಿ ವಾಹನಗಳು ನೀರಿನಲ್ಲಿ ನಿಧಾನವಾಗಿ ಸಂಚರಿಸಬೇಕಾದ ಅನಿವಾರ್ಯತೆ ಎದುರಿಸಿವೆ.

ರಸ್ತೆ ಬದಿಯ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದ್ದು, ಕೆಲವೆಡೆ ಜನರು ತಮ್ಮ ಸಾಮಾನುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಆರಂಭಿಸಿದ್ದಾರೆ. ಅದೃಷ್ಟವಶಾತ್ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾದ ಕಾರಣ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆಲವಿದೆ ಹಲವು ದಿನಗಳಿಂದ ಮುಂದುವರೆದ ಮಳೆಯೂ ಜಿಲ್ಲೆಯಲ್ಲಿ ದೊಡ್ಡಮಟ್ಟದ ಅವಾಂತರವನ್ನು ಸೃಷ್ಟಿಸಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹಾನಿ ಸಾಧ್ಯತೆ ಇರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಜಿಲ್ಲಾಡಳಿತವು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Sponsored

Also Read:

ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ : ಮನೆ ಬದಲಾಯಿಸಿದವರಿಗೆ ಮಹತ್ವದ ಸೂಚನೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online