<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ! ಕರಾವಳಿ - ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ! ಕರಾವಳಿ - ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್
Summary: Karnataka weather forecast: The Meteorological Department has declared a yellow alert in the coastal and northern interior districts due to the possibility of heavy rain. Thunderstorms are expected in many parts.

Belagavi News:

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಮನದಲ್ಲಿಟ್ಟುಕೊಂಡು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಉತ್ತರ ಒಳ ನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಅದೇ ರೀತಿ ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ವರುಣನ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಮೀನುಗಾರರು ಹಾಗೂ ಸಮುದ್ರ ತೀರದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮುಂಗಾರು ಚುರುಕು ಕೊಂಡಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೇಡೆ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದೆ. ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿದೆ.

Sponsored

ಇನ್ನೊಂದೆಡೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣಾದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ. ನಗರ ಪ್ರದೇಶಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ತುಂತುರು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಹವಮಾನ ತಜ್ಞರ ಪ್ರಕಾರ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾತಾವರಣ ಚಟುವಟಿಕೆಗಳು ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಮುಂಗಾರು ಮಳೆ ಇನ್ನಷ್ಟು ಬಲ ಪಡೆಯುವ ಲಕ್ಷಣಗಳು ಕಂಡು ಬರುತ್ತವೆ. ಇದರಿಂದ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವಡೆ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆ ಜನರು ಅಗತ್ಯವಿಲ್ಲದ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸುವುದು, ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಗಮನಿಸುವುದು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಸೂಕ್ತ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಉತ್ತರ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ:

Sponsored

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರಗಳನ್ನಾಡು ಮತ್ತು ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು - ಮಿಂಚಿನ ಅಬ್ಬರ :

ಉತ್ತರವಳ ನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಮಿಂಚು ಸಹಿತ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಪಾಯಕಾರಿ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Sponsored

ಕರಾವಳಿ ಜಿಲ್ಲೆಗಳಲ್ಲಿ ಮುಂದುವರೆದ ಮಳೆ :

ಕರಾವಳಿ ಭಾಗದಲ್ಲೂ ಮಳೆಯ ಅಬ್ಬರ ಮುಂದುವರೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.ಈ ಹಿನ್ನಲೆಯಲ್ಲಿ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿ ಮತ್ತು ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಸಮುದ್ರಕ್ಕೆ ತೆರಳುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ? ಇಲ್ಲಿದೆ ನೋಡಿ ಅಪ್ಡೇಟ್ :

Sponsored

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮೋಡ ಕವಿತಾ ವಾತಾವರಣದೊಂದಿಗೆ ತುಂತುರು ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರಬಹುದು.

ಭಾರಿ ಮಳೆ, ಗುಡುಗು ಮತ್ತು ಬಿರುಗಾಳಿ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸುವಂತೆ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಮತ್ತು ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮುಂಗಾರು ಚುರುಕು ಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ - ಉತ್ತರ ಒಳನಾಡು, ಕರಾವಳಿಯಲ್ಲಿ ಬಿರುಗಾಳಿ ಎಚ್ಚರಿಕೆ :

Sponsored

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದರೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿರುವುದು ಕಂಡುಬಂದಿದೆ. ಭಾರತಿ ಹವಾಮಾನ ಇಲಾಖೆ ವರದಿ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ - ಜೊತೆಗೆ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಎಚ್ಚರಿಕೆ:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಮುಂಗಾರು ಸ್ವಲ್ಪ ನಿಧಾನ ಗೊಂಡಿರುವುದರಿಂದ ಈ ಭಾಗಗಳಲ್ಲಿ ತಾಪಮಾನದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬರುವ ಸಾಧ್ಯತೆ ಕಡಿಮೆ ಇದ್ದರೂ, ಮೋಡ ಕವಿದ ವಾತಾವರಣ ಮುಂದುವರೆಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Sponsored

ಇದಕ್ಕೆ ವಿರುದ್ಧವಾಗಿ ಉತ್ತರಗಳನ್ನಾಡು ಮತ್ತು ಕರಾವಳಿ ಭಾಗಗಳಲ್ಲಿ ಹವಾಮಾನ ಅಸ್ಥಿರತೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಮಿಂಚು ಹಾಗೂ ಸಿಡಿಲಿನ ಸಂಬವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ವಿಶೇಷವಾಗಿ ರೈತರು ಹೊಲ - ಗದ್ದೆಗಳಲ್ಲಿ ಕೆಲಸ ಮಾಡುವಾಗ ಸುರಕ್ಷತೆ ಕಾಪಾಡಿಕೊಳ್ಳುವಂತೆ ಹಾಗೂ ತೆರೆದ ಪ್ರದೇಶಗಳಲ್ಲಿ ಆಶ್ರಯ ಪಡೆಯದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಲಹೆ :

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹಾಗೂ ಗಾಳಿಯ ಚಟುವಟಿಕೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸಿ, ಸ್ಥಳೀಯ ಆಡಳಿತ ಮತ್ತು IMD ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

Sponsored

ರಾಜ್ಯದಲ್ಲಿ ಹವಾಮಾನ ವೈವಿಧ್ಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಭಾಗಗಳಲ್ಲಿ ಮಳೆಯ ಭಿನ್ನವಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬದಲಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Also Read:

'ಮೇಕೆದಾಟು ಕರ್ನಾಟಕದ ಹಕ್ಕು' - ತಮಿಳುನಾಡು ಆಕ್ಷೇಪಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online