<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಧಾರಾಕಾರ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆಯಲ್ಲಿ ನೀರು ನುಗ್ಗಿ ವ್ಯಾಪಾರ ಸ್ಥಗಿತ

ಧಾರಾಕಾರ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆಯಲ್ಲಿ ನೀರು ನುಗ್ಗಿ ವ್ಯಾಪಾರ ಸ್ಥಗಿತ
Summary: The vegetable market in Jamkhandi, Bagalkot district, has been flooded due to heavy rains. As a result of water entering the market, traders have been facing difficulties and business activities have been disrupted.

Belagavi News:

ಬಾಗಲಕೋಟೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜಮಖಂಡಿ ನಗರದ ಪ್ರಮುಖ ತರಕಾರಿ ಮಾರುಕಟ್ಟೆ ಜಲಾವೃತಗೊಂಡಿದೆ. ನಿರಂತರ ಮಳೆಯಿಂದ ಮಾರುಕಟ್ಟೆಯೊಳಗೆ ನೀರು ನುಗ್ಗಿ ವ್ಯಾಪಾರ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರಿಗಳು ಹಾಗೂ ಖರೀದಾರರು ಸಂಕಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಯ ಹಲವು ಭಾಗಗಳಲ್ಲಿ ನೀರು ನಿಂತ ಪರಿಣಾಮ ತರಕಾರಿ ಮರಾಟಗಾರರು ತಮ್ಮ ವಸ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹರಸಾಹಸ ಪಟ್ಟಿದ್ದಾರೆ. ಮೈಯಿಂದಾಗಿ ಗ್ರಾಹಕರ ಸಂಖ್ಯೆಯು ಕಡಿಮೆಯಾಗಿದ್ದು, ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

ಜಮಖಂಡಿ ನಗರದಲ್ಲಿ ಕೆಲಸಗು ಪ್ರದೇಶಗಳಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೂ ತೊಂದರೆ ಉಂಟಾಗಿದೆ. ಮಳೆ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ನೀರು ಹೊರ ಹಾಕುವ ಕಾರ್ಯಕ್ಕೆ ಮುಂದಾಗಿದೆ.

Sponsored

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಭಾರಿ ಮಳೆಯ ಪರಿಣಾಮ ಜಮಖಂಡಿ ಪ್ರದೇಶದಲ್ಲಿ ಜನ ಜೀವನದ ಮೇಲೆ ಪರಿಣಾಮ ಬೀರಿದ್ದು, ರೈತರು ಹಾಗೂ ವ್ಯಾಪಾರಿಗಳಲ್ಲಿ ಆತಂಕ ಮನೆಮಾಡಿದೆ.

ಭಾರಿ ಮಳೆಗೆ ಜಮಖಂಡಿ ಗೋಟೆ ಸಂತೆ ಜಲಾವೃತ - ನೀರಿನಲ್ಲಿ ಮುಳುಗಿದ ತರಕಾರಿ ಮಾರುಕಟ್ಟೆ, ವ್ಯಾಪಾರಿಗಳು ಪರದಾಟ:

ಬಾಗಲಕೋಟೆ ಜಿಲ್ಲೆಯ ಜನತಾ ಮುಂಗಾರುಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಅದರಲ್ಲೂ ಗೋಟೆ ಗ್ರಾಮದ ಸಪ್ತಾಹಿಕ ಸಂತೆಯಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿದ್ದು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಿರಂತರ ಮಳೆಯಿಂದ ಮಾರುಕಟ್ಟೆ ಮೈದಾನದಲ್ಲಿ ಮಂಡಿಯ ಯುದ್ಧ ನೀರು ನಿಂತ ಪರಿಣಾಮ ತರಕಾರಿ ಬುಟ್ಟಿಗಳು, ಕ್ರೇಟ್ ಗಳು ಹಾಗೂ ಮಾರಾಟಕ್ಕೆ ಇಡಲಾಗಿದ್ದ ತರಕಾರಿಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಸುರಿದ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ಟೊಮೇಟೊ, ಹಸಿರು ಸೊಪ್ಪು ಸೇರಿದಂತೆ ವಿವಿಧ ತರಕಾರಿಗಳನ್ನು ನೀರಿನಿಂದ ರಕ್ಷಿಸಲು ಹರಸಾಹಸ ಪಟ್ಟರು.

Sponsored

ಮಾರುಕಟ್ಟೆಯಲ್ಲಿ ನೀರು ತುಂಬಿದ್ದರಿಂದ ವ್ಯಾಪಾರ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ಖರೀದಿದಾರರು ಹಾಗೂ ವ್ಯಾಪಾರಿಗಳಿಗೆ ತೀವ್ರ ತೊಂದರೆ ಉಂಟಾಯಿತು. ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿಗಳಿಗೆ ಹಾನಿಯಾಗುವ ಆತಂಕ ವ್ಯಕ್ತವಾಗಿದ್ದು, ವ್ಯಾಪಾರಿಗಳು ತಮ್ಮ ಸರಕುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮುಂದಾದರು.

ಮುಂಗಾರು ಮಳೆಯ ಅಬ್ಬರದಿಂದ ಜಮಖಂಡಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ಜಮಖಂಡಿ ಗೋಟೆ ಸಂತೆ ಜಲಾವೃತ - ಮಳೆಯಲ್ಲೇ ಮಹಿಳಾ ವ್ಯಾಪಾರಿಗಳ ಹೋರಾಟ :

ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿದ್ದು, ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರಂತರ ಮಳೆಯಿಂದ ಮಾರುಕಟ್ಟೆ ಮೈದಾನದಲ್ಲಿ ನೀರು ನಿಂತು ವ್ಯಾಪಾರ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿವೆ.

Sponsored

ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಮಳೆಯಲ್ಲೇ ನೆನೆಯುತ್ತಾ ತರಕಾರಿ ಬುಟ್ಟಿಗಳನ್ನು ಎತ್ತರದ ಸ್ಥಳಗಳಿಗೆ ಸಾಗಿಸುತ್ತಿರುವ ದೃಶ್ಯಗಳು ಕಂಡುಬಂದವು. ಹಳದಿ ಟರ್ಪಲ್ ಗಳನ್ನು ಬಳಸಿ ತರಕಾರಿಗಳನ್ನು ರಕ್ಷಿಸಲು ಯತ್ನಿಸಿದರೂ, ನೀರಿನ ಪ್ರಮಾಣ ಹೆಚ್ಚಿದ್ದರಿಂದ ಹೆಚ್ಚಿನ ತರಕಾರಿಗಳು ಹಾನಿಗೊಳಗಾದವು.

ಟೊಮೆಟೊ, ಹಸಿರು ಸೊಪ್ಪು ಸೇರಿದಂತೆ ವಿವಿಧ ತರಕಾರಿಗಳು ನೀರಿನಲ್ಲಿ ಕೊಳೆತು ಹೋಗುವ ಸ್ಥಿತಿಗೆ ತಲುಪಿದ್ದು, ಸಣ್ಣ ವ್ಯಾಪಾರಿಗಳು ಭಾರಿ ನಷ್ಟ ಅನುಭವಿಸುವಂತಾಗಿದೆ. ಹಲವರು ಕಣ್ಣೀರು ಹಾಕುವಂತ ಪರಿಸ್ಥಿತಿ ಎದುರಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಳೆ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಅಡಚಣೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿಯೂ ಹಾನಿ ಹೆಚ್ಚುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ನೀರು ಹೊರ ಹಾಕುವ ಹಾಗೂ ಮೂಲಸೌಕರ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.

Sponsored

ಜಮಖಂಡಿ - ವಿಜಯಪುರ ರಸ್ತೆಯಲ್ಲಿ ಬಿರುಗಾಳಿ ಮಳೆ ಅವಾಂತರ:

ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ತಿರುಗಾಳಿ ಸಹಿತ ಬಾರಿ ಮಳೆಯಿಂದಾಗಿ ಬೃಹತ್ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆ ಜಮಖಂಡಿ ಮತ್ತು ವಿಜಯಪುರ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಪರಿಣಾಮ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಮರಗಳು ರಸ್ತೆಗೆ ಅಡ್ಡ ಬಿದ್ದ ಕಾರಣ ಎರಡು ಬದಿಗಳಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ಪರದಾಟ ಅನುಭವಿಸಿದರು. ಬಸ್ ಗಳು ಲಾರಿ ಮತ್ತು ಇತರೆ ವಾಹನಗಳು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿ ಸಂಚಾರದಲ್ಲಿ ದೊಡ್ಡ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಾಗೂ ಸಂಬಂಧಿತ ಇಲಾಖೆ ಸಂಬಂಧಿಯ ಸಹಕಾರದಿಂದ ಮರಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗಿದ್ದು, ಬಳಿಕ ಜಮಖಂಡಿ ಹಾಗೂ ವಿಜಯಪುರ ರಸ್ತೆಯಲ್ಲಿ ವಾಹನ ಸಂಚಾರವನ್ನು ಯಥಾ ಸ್ಥಿತಿಗೆ ಮರಳಿಸಲಾಗಿದೆ.

Sponsored

ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿಯೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಲಾಗಿದೆ.

Also Read:

ಶಬರಿಮಲೆ ಯಾತ್ರೆಗೆ ಸಜ್ಜಾದ ಕುಮಾರಸ್ವಾಮಿ, ಅಯ್ಯಪ್ಪ ಮಾಲೆ ಧರಸಿ ಪ್ರಯಾಣ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online