Belagavi News:
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷ ಕರಾವಳಿ ಕರ್ನಾಟಕ ಹಾಗೂ ಉತ್ತರವಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಾಹಿತ್ಯ ಧಾರಾಕಾರ ಮಳೆ ಆಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದ್ದು, ಈ ಪ್ರದೇಶಗಳಲ್ಲಿ ಭಾರಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಪರಿಣಾಮವಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಹವಾಮಾನ ಮಾಹಿತಿ ಪರಿಶೀಲಿಸುವಂತೆ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿಯೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಕೆಲವೆಡೆ ಮರಗಳು ಉರುಳುವಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಕೂಡ ಎಚ್ಚರಿಕೆ ವಹಿಸಿವೆ.
ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
ಕರಾವಳಿಯಲ್ಲಿ ಮಳೆಯ ಅಬ್ಬರ, ಉಡುಪಿ ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್:
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಸಂದರ್ಭದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಇತರೆ ಭಾಗಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ವೈಪರ್ದಿತ್ಯದಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಂತೆ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿವೆ.
ಕರಾವಳಿ ಭಾಗಗಳ ಜೊತೆಗೆ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರವಾಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಜನರು ಹವಾಮಾನ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಇಲಾಖೆ ಮನವಿ ಮಾಡಿದೆ.
ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದ್ದು, ಬಲವಾದ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಿಶೇಷ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
Karnataka weather alert - ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:
ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಜೊತೆಗೆ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆ ಇದೆ. ಹಾವೇರಿ, ಗದಗ ಮತ್ತು ಬಾಗಲಕೋಟೆ ಭಾಗದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಮಿಂಚಿನ ಚಟುವಟಿಕೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಬಹುತೇಕ ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿಯೂ ಮಳೆಯೊಂದಿಗೆ ಗಂಟೆಗೆ 30 ರಿಂದ 40 km ವೇಗದ ಬಿರುಗಾಳಿ ಬೀಸುವ ಸಾಧ್ಯತೆಯನ್ನು ಇಲಾಖೆ ಎಚ್ಚರಿಸಿದೆ.
ಈ ನಡುವೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಮುಂದುವರಿದಿದ್ದು, ರಾಜ್ಯದ ಉಳಿದ ಭಾಗಗಳಿಗೆ ಎಲ್ಲೋ ಅಲರ್ಟ್ ಜಾರಿಯಲ್ಲಿದೆ. ಹೀಗಾಗಿ ರಾಜ್ಯದಾದ್ಯಂತ ಮಳೆ ಚಟುವಟಿಕೆ ಹೆಚ್ಚಿರುವ ಸಾಧ್ಯತೆ ಇದೆ.
ಸಾರ್ವಜನಿಕರು ಮತ್ತು ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಗುಡುಗು ಮತ್ತು ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯುವುದನ್ನು ತಪ್ಪಿಸಲು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರಲು ಮನವಿ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
Also Read:
ಆಂಧ್ರದಲ್ಲಿ ಮತ್ತೊಂದು ಚಿನ್ನದ ಯುಗ ಆರಂಭ: ಜೊನ್ನಗಿರಿ ಗೋಲ್ಡ್ ಮೈನ್ಸ್ 2ನೇ ಘಟಕಕ್ಕೆ ಸಿಎಂ ಚಾಲನೆ