<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಭಾರೀ ಮಳೆ ಎಫೆಕ್ಟ್: ಕರ್ನಾಟಕದ 9 ಜಲಪಾತಗಳಿಗೆ ತಾತ್ಕಾಲಿಕ ನಿರ್ಬಂಧ

ಭಾರೀ ಮಳೆ ಎಫೆಕ್ಟ್: ಕರ್ನಾಟಕದ 9 ಜಲಪಾತಗಳಿಗೆ ತಾತ್ಕಾಲಿಕ  ನಿರ್ಬಂಧ
Summary: In view of the heavy rains, entry to 9 major waterfalls in the state has been temporarily restricted keeping in mind the safety of tourists. Before you set off on your trip, check if your destination is on this list. Read now to know the complete information and share with your friends.

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಹಿನ್ನೆಲೆ 9 ಜಲಪಾತಗಳಿಗೆ ಪ್ರವೇಶ ನಿರ್ಬಂಧ.

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹಲವು ಜಲಪಾತಗಳು ಅಪಾಯದ ಮಟ್ಟದಲ್ಲಿ ಧುಮ್ಮಿಕ್ಕಿ ಹರಿಯುತ್ತಿವೆ. ಜಲಪಾತಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಖಾನಾಪುರ ತಾಲೂಕಿನ " ಬೆಟಣೆ , ಚಿಕಲೆ, ಚೋರ್ಲಾ, ಬಟವಾಡೆ " ಸೇರಿದಂತೆ ಒಟ್ಟು 9 ಜಲಪಾತಗಳಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶಗಳನ್ನು ' ರಿಸರ್ವ್ ' ವಲಯವೆಂದು ಘೋಷಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ.

ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ನದಿಗಳು ಮತ್ತು ಜಲಪಾತಗಳ ನೀರಿನ ಹರಿವು ಗಣನೀಯವಾಗಿ ಹೆಚ್ಚಿದೆ. ಜಾರಿ ಬೀಳುವ ಅಪಾಯ, ಹಠಾತ್ ನೀರಿನ ಮಟ್ಟ ಏರಿಕೆ ಹಾಗೂ ಇತರ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರವಾಸಕ್ಕೆ ಹೊರಡುವವರು ಮೊದಲು ಸ್ಥಳೀಯ ಆಡಳಿತ ಅಥವಾ ಅರಣ್ಯ ಇಲಾಖೆಯ ಸೂಚನೆಗಳನ್ನು ಪರಿಶೀಲಿಸಿ, ಸುರಕ್ಷತೆಗೆ ಆದ್ಯತೆ ನೀಡಿ, ನಿರ್ಬಂಧಿತ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಿ.

ಈ ಹಿಂದೆ ಜಲಪಾತಗಳಲ್ಲಿ ಅಪಾಯಕಾರಿ ಸಾಹಸ ಹಾಗೂ ಹುಚ್ಚಾಟ ನಡೆಸಿದ ಪರಿಣಾಮ ಹಲವು ಜೀವಹಾನಿ ಪ್ರಕರಣಗಳು ವರದಿಯಾಗಿದ್ದವು, ಇದೇ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ 9 ಜಲಪಾತಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಜಲಪಾತಗಳಿಗೆ ಹೋಗುವ ಪ್ರಮುಖ ಮಾರ್ಗಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರಂತರ ಗಸ್ತು ತಿರುಗುತ್ತಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ. ನಿರ್ಬಂಧವನ್ನು ಉಲ್ಲಂಘಿಸಿ ನಿಷೇಧಿತ ಪ್ರದೇಶಗಳಿಗೆ ಪ್ರವೇಶಿಸುವವರು ವಿರುದ್ಧ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಪ್ರವಾಸಿಗರು ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ, ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವಾಸಕ್ಕೆ ತೆರಳುವ ಮೊದಲು ಸ್ಥಳೀಯ ಆಡಳಿತದ ಸೂಚನೆಗಳನ್ನು ಪರಿಶೀಲಿಸಿ, ನಿರ್ಬಂಧಿತ ಜಲಪಾತಗಳಿಗೆ ಭೇಟಿ ನೀಡುವುದನ್ನು ತಪ್ಪಿಸುವುದು ಒಳಿತು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online