<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ರಾಜ್ಯದಲ್ಲಿ ಮಳೆ ಅಬ್ಬರ ! ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮಳೆ ಅಬ್ಬರ ! ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
Summary: The pre-monsoon is strong in Karnataka and the Meteorological Department has forecast heavy rains with thunderstorms in the next five to six days. The intensity of the rains is likely to increase in many parts of the state.

Belagavi news:

ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿದ್ದು, ಮುಂದಿನ ಐದಾರು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22 ರಿಂದ ಈ ಮಳೆ ಚಟುವಟಿಕೆಗಳು ಇನ್ನಷ್ಟು ತೀವ್ರ ಗೊಳ್ಳುವ ಸಾಧ್ಯತೆ ಇರುವುದಾಗಿ ತಿಳಿಸಲಾಗಿದೆ.

ಊರ ಮುಂಗಾರು ಮಾರುತಗಳು ಬಲಗೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನೈರುತ್ಯ ಮುಂಗಾರು ಮಾಲ್ಡಿವ್ಸ್ ಹಾಗೂ ಬಂಗಾಳಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಅನುಕೂಲಕರ ವಾತಾವರಣ ನಿರ್ಮಾಣ ವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

Sponsored

ಬೆಂಗಳೂರು ನಗರದಲ್ಲೂ ಮುಂದಿನ ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೃಷಿ ಚಟುವಟಿಕೆಗಳು ಹಾಗೂ ದೈನಂದಿನ ಜೀವನದ ಮೇಲೆ ಈ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23 ರಿಂದ 28ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಬದಲಾವಣೆಯೊಂದಿಗೆ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.

ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮೇ 24ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದ್ದು, ಈ ಸಂದರ್ಭದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಮೀ ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಮೇ 25 ಮತ್ತು 26ರಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದ್ದರು ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

Sponsored

ಮತ್ತೊಂದೆಡೆ ಮೇ 27 ಮತ್ತು 28 ರಂದು ಕರಾವಳಿ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆ ಆಗುವ ಮುನ್ಸೂಚನೆ ಲಭ್ಯವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳವರೆಗೆ ಯಾವುದೇ ಮಹತ್ವದ ಬದಲಾವಣೆ ಇರುವುದಿಲ್ಲ ಎಂದು ಐಎಂಡಿ ಮಾಹಿತಿ ನೀಡಿದೆ.

ಕರ್ನಾಟಕ ಪೂರ್ವ ಮುಂಗಾರು ಮಾರುತಗಳ ಪ್ರಭಾವದಿಂದ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯುತ್ತಿದೆ ಎಂದು ಭಾರತೀಯ ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಈ ವೇಳೆ ಸಿಡಿಲು ಹಾಗೂ ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಉತ್ತರವಳ ನಾಡಿನಲ್ಲೂ ಮಳೆಯ ಚಟುವಟಿಕೆ ತೀವ್ರ ವಾಗುವ ನಿರೀಕ್ಷೆ ಇದೆ. ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೋಂದಿಗೆ ಆಲಿಕಲ್ಲು ಮಳೆ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 50 ರಿಂದ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದಾಗಿ ಐಎಂಡಿ ತಿಳಿಸಿದೆ.

Sponsored

ವಿಜಯಪುರ, ರಾಯಚೂರು,ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆ ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರ್ಗಗಳ ಪ್ರಭಾವದಿಂದ ಕರಾವಳಿ ಭಾಗದಲ್ಲೂ ಮಳೆಯ ಚಟುವಟಿಕೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕ ದ ಹಲವೆಡೆ ಚದುರದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Sponsored

ಇದೇ ವೇಳೆ ಕರಾವಳಿ ಭಾಗದಲ್ಲಿ ಉರಿ ಸೆಖೆಯ ವಾತಾವರಣ ಮುಂದುವರೆಯಲಿದ್ದು, ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ ದಿನದ ಉಷ್ಣತೆ ಹಾಗೂ ತೇವಾಂಶದ ಪ್ರಮಾಣ ಹೆಚ್ಚಾಗಿರುವ ಸಾಧ್ಯತೆ ಇದೆ.

ಮಳೆಯ ಜೊತೆಗೆ ಉಷ್ಣತೆ ಮುಂದುವರೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೃಷಿ ಚಟುವಟಿಕೆಗಳ ಮೇಲು ಈ ಹವಾಮಾನ ಬದಲಾವಣೆಯ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

Also Read:

ಇಂದು SRH vs RCB ಹೈವೋಲ್ಟೇಜ್ ಪಂದ್ಯ : ಇತಿಹಾಸರ ದೃಷ್ಟಿಸಲು ಕೊಹ್ಲಿ ರೆಡಿ !

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online