belagavi news :
ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರ : ಕೇಂದ್ರ,ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಜಂತರ್ ಮಂತರ್ ನಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ದೆಹಲಿ ಹೈ ಕೋರ್ಟ್ ಕೈಗೆತ್ತಿಕೊಂಡಿದೆ.
ಸೋನಂ ವಾಂಗ್ಚುಕ್ ಅವರಿಗೆ ತುರ್ತು ವೈದ್ಯಕೀಯ ನೆರವು ಒದಗಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. ಈ ಪ್ರಕರಣವನ್ನು ಮುಂದಿನ ವಿಚಾರಣೆಗಾಗಿ ಗುರುವಾರಕ್ಕೆ ಪಟ್ಟಿ ಮಾಡಲಾಗಿದೆ.
ಜೂನ್ 28ರಿಂದ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟ ಅವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ದಲ್ಲಿ ನಿರಂತರ ಹೋರಾಟದ ಪರಿಣಾಮ ವ್ಯತ್ಯಯ ಉಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ವಿಭಾಗೀಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿದಾರ ರಾಕೇಶ್ ಕುಮಾರ್ ಸೈನಿ ಅವರು ವರ್ಚುವಲ್ ಮೂಲಕ ತಮ್ಮ ವಾದ ಮಂಡಿಸಿದರು.
ಸೋನಮ್ ವಾಂಗ್ಚುಕ್ ಅವರ ಆರೋಗ್ಯ ರಕ್ಷಣೆಗಾಗಿ ಸೂಕ್ತ ವೈದ್ಯಕೀಯ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಅರ್ಜಿ ಬಗ್ಗೆ ಹೈಕೋರ್ಟ್ ಕೇಂದ್ರ ಮತ್ತು ದೆಹಲಿ ಸರ್ಕಾರದ ನಿಲುವನ್ನು ಕೇಳಿದೆ.
ಸೋನಮ್ ವಾಂಗ್ಚುಕ್ ಆರೋಗ್ಯ ಪ್ರಕರಣ : ತುರ್ತು ವಿಚಾರಣೆಗೆ ಹೈಕೋರ್ಟ್ ಸೂಚನೆ
ವಿಚಾರಣೆಯ ವೇಳೆ ಅರ್ಜಿದಾರ ರಾಕೇಶ್ ಕುಮಾರ್ ಸೈನಿ ಅವರು ಪ್ರಕರಣವನ್ನು ತುರ್ತಾಗಿ ಪರಿಶೀಲಿಸುವಂತೆ ದೆಹಲಿ ಹೈಕೋರ್ಟಗೆ ಮನವಿ ಮಾಡಿದರು. ಧೀರ್ಘಾವದಿಯ ಉಪವಾಸ ಸತ್ಯಾಗ್ರಹದಿಂದ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ. ಅವರ ಜೀವ ರಕ್ಷಣೆಗೆ ತಕ್ಷಣದ ನ್ಯಾಯಾಂಗ ಮಧ್ಯಪ್ರದೇಶ ಅಗತ್ಯವಿದೆ ಎಂದು ಅವರು ವಾದಿಸಿದರು.
ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್
ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯ ಪೀಠ, ಪ್ರಕರಣದ ತುರ್ತುತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿಯಲ್ಲಿ ಮಾಡಿರುವ ಬೇಡಿಕೆಗಳ ಕುರಿತು ತಮ್ಮ ನಿಲುವನ್ನು ಸ್ಪಷ್ಟ ಪಡಿಸುವಂತೆ ಸರ್ಕಾರಗಳಿಗೆ ಸೂಚಿಸಲಾಗಿದೆ.
ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 16ಕ್ಕೆ ನಿಗದಿಪಡಿಸಿದೆ. ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ನೆರವಿನ ಕುರಿತು ಸರ್ಕಾರಗಳ ಪ್ರತಿಕ್ರಿಯೆಯನ್ನು ನ್ಯಾಯಾಲಯ ಪರಿಶೀಲಿಸಿದೆ .
ಸೋನಮ್ ವಾಂಗ್ಚುಕ್ ಆರೋಗ್ಯ ಪ್ರಕರಣ : ವಕೀಲರ ಗೈರು, ತುರ್ತು ವೈದ್ಯಕೀಯ ನೆರವಿಗೆ PIL ಮನವಿ
ಸೋನಮ್ ವಾಂಗ್ಚುಕ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಪ್ರತಿವಾದಿಗಳ ಪರವಾಗಿ ಯಾವುದೇ ವಕೀಲರು ಹಾಜರಾಗಿರಲಿಲ್ಲ. ಜಿಲ್ಲಾ ನ್ಯಾಯಾಲಯಗಳ ಆರ್ಥಿಕ ನ್ಯಾಯವ್ಯಾಪ್ತಿಯಲ್ಲಿ ಹೆಚ್ಚಿಸುವ ಪ್ರಸ್ತಾವಿಕ ಕ್ರಮವನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದ ಹಿನ್ನೆಲೆ ವಕೀಲರು ಗೈರಾಗಿದ್ದರು.
ಇದರ ಪರಿಣಾಮವಾಗಿ, ವಿಚಾರಣೆಯ ಸಂಧರ್ಭದಲ್ಲಿ ನ್ಯಾಯಾಲಕ್ಕೆ ಸಹಾಯ ಮಾಡಲು ಯಾವುದೇ ಕಾನೂನು ಅಧಿಕಾರಿ ಅಥವಾ ಸರ್ಕಾರಿ ವಕೀಲರು ಲಭ್ಯವಿರಲಿಲ್ಲ.
ಸೋನಮ್ ವಾಂಗ್ಚುಕ್ ಅವರಿಗೆ ತಕ್ಷಣವೇ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಜೀವ ರಕ್ಷಣೆ ಕ್ರಮಗಳನ್ನು ಒದಗಿಸುವಂತೆ PIL ನಲ್ಲಿ ಮನವಿ ನಡೆಸುವಂತೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ,ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಮತ್ತು ಅವರ ಬೇಡಿಕೆಗಳ ಕುರಿತು ನ್ಯಾಯಾಲಯದ ಗಮನ ಸೆಳೆಯಲಾಗಿದೆ.