<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಅಸ್ಸಾಂನಲ್ಲಿ ಇಂದು ಹಿಮಂತ್ ಬಿಸ್ವಾ ಶರ್ಮಾ ಪ್ರಮಾಣವಚನ : ಬಿಜೆಪಿ ನಾಯಕರ ಮಹಾಸಂಗಮ

ಅಸ್ಸಾಂನಲ್ಲಿ ಇಂದು ಹಿಮಂತ್ ಬಿಸ್ವಾ ಶರ್ಮಾ ಪ್ರಮಾಣವಚನ : ಬಿಜೆಪಿ ನಾಯಕರ ಮಹಾಸಂಗಮ
Summary: A major development will take place in Assam politics today, as Himanta Biswa Sarma will take oath as the Chief Minister of Assam for the second consecutive term in the presence of Prime Minister Narendra Modi on Tuesday. Senior BJP leaders including Union Home Minister Amit Shah are expected to attend this grand ceremony. A new study in royal politics is beginning.

BELAGAVI NEWS :

ಅಸ್ಸಾಂ ನಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್.ಡಿ.ಎ ಸರ್ಕಾರದ ಭರ್ಜರಿ ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬಿಜೆಪಿ ಹಿರಿಯ ನಾಯಕ ಹಿಮಂತ್ ಬಿಸ್ವಾ ಶರ್ಮಾ ಅವರು ಮಂಗಳವಾರ ಸತತ ಎರಡನೇ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯ ರಾಜಕೀಯದಲ್ಲಿ ಈ ಸಮಾರಂಭಕ್ಕೆ ವಿಶೇಷ ಮಹತ್ವ ದೊರೆತಿದ್ದು, ಬಿಜೆಪಿ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಸಜ್ಜಾಗಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಕೇಂದ್ರ ಗ್ರಹ ಸರ್ಕಾರದ ಹಲವು ಉನ್ನತ ನಾಯಕರು ಭಾಗವಹಿಸಲಿದ್ದಾರೆ.

ಜೊತೆಗೆ ಆಡಳಿತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸಮಾರಂಭಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಹೊಸ ಸರ್ಕಾರದ ರಚನೆಗೆ ಸಂಬಂಧಿಸಿದಂತೆ ಹಿಮಂತ್ ಬಿಸ್ವಾ ಶರ್ಮಾ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವ ನಾಲ್ವರು ಸಚಿವರ ಹೆಸರುಗಳನ್ನು ಸೋಮವಾರವೇ ಘೋಷಿಸಿದ್ದಾರೆ. ಅಲ್ಲದೆ ರಾಜ್ಯ ವಿಧಾನಸಭೆಯ ಹೊಸ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದ್ದು, ಅಸ್ಸಾಮಿನಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರದ ಆಡಳಿತಕ್ಕೆ ವೇಗ ಸಿಕ್ಕಂತಾಗಿದೆ.

X ನಲ್ಲಿ ಪೋಸ್ಟ್ ಮಾಡಿರುವ ಶರ್ಮಾ, ತಮ್ಮ ಜೊತೆಗೆ ರಾಮಲಿಂಗೇಶ್ವರ ತೇಲಿ, ಅತುಲ್ ಬೋರಾ, ಚರಣ್ ಬೋರೋ ಮತ್ತು ಅಜಂತಾ ನಿಯೋಗ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಹೆಚ್ಚುರಿಯಾಗಿ ಹಿರಿಯ ಬಿಜೆಪಿ ನಾಯಕ ಮತ್ತು ಶಾಸಕ ರಂಜಿತ್ ದಾಸ್ ಅವರು ಅಸ್ಸಾಂವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯಾಗಿ ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

Sponsored

ಅಸ್ಸಾಮಿನಲ್ಲಿ ಹೊಸ ಎನ್ ಡಿಎ ಸರ್ಕಾರ ರಚನೆಗೆ ವೇದಿಕೆ ಸಜ್ಜಾಗಿರುವ ನಡುವೆ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಮತ್ತು ಇದರ ಜೊತೆಗೆ ರಂಜಿತ್ ದಾಸ್ ಅವರು ಅಸ್ಸಾಂ ವಿಧಾನಸಭೆ ಸ್ಪೀಕರ್ ಹುದ್ದೆಗೆ ಎನ್ ಡಿಎ ಅಭ್ಯರ್ಥಿಯಾಗಿ ಘೋಷಿಸಿರುವುದಾಗಿ ಅವರು ತಿಳಿಸಿದ್ದಾರೆ.

ಹೊಸ ಸಚಿವ ಸಂಪುಟವು ಬಲಿಷ್ಠ, ಅಭಿವೃದ್ಧಿ ಹೊಂದಿದ ಹಾಗೂ ಸಮೃದ್ಧ ಅಸ್ಸಾಂ ನಿರ್ಮಾಣದ ಗುರಿಯೊಂದಿಗೆ ಸಂಪೂರ್ಣ ಸಮರ್ಪಣೆಯಿಂದ ಕೆಲಸ ಮಾಡಲಿದೆ ಎಂದು ಶರ್ಮ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಭರವಸೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ಬಿಜೆಪಿಯ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಹಿಮಾಂತ್ ಬಿಸ್ವಾ ಶರ್ಮಾ ಅವರ ಪ್ರಮಾಣವಚನ ಸಮಾರಂಭಕ್ಕೆ ಬಾರಿ ಜನಸಾಗರ ಸೇರುವ ನಿರೀಕ್ಷೆ ಇದೆ. ಅಸ್ಸಾಂನ ವಿವಿಧ ಭಾಗಗಳಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಎಂದಿಎ ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಸ್ಸಾಂನಲ್ಲಿ ಹೊಸ ಎನ್ ಡಿಎ ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ತಕ್ಷಣವೇ ಮೊದಲ ಸಚಿವ ಸಂಪುಟದ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಪ್ರಮಾಣವಚನ ಸಮಾರಂಭದ ನಂತರ ಸರ್ಕಾರದ ಅಭಿವೃದ್ಧಿ ಕಾರ್ಯಸಿದ್ದಿ ಹಾಗೂ ಚುನಾವಣಾ ಬರವಸೆಗಳ ಅನುಷ್ಠಾನಕ್ಕೆ ವೇಗ ನೀಡುವುದು ಹೊಸ ಸರ್ಕಾರದ ಮೊದಲ ಆದ್ಯತೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಚುನಾವಣೆಯಲ್ಲಿ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸುವತ್ತ ಸರ್ಕಾರ ಗಂಭೀರವಾಗಿ ಕೆಲಸ ಮಾಡಲಿದ್ದು, ಅಭಿವೃದ್ಧಿ ಮತ್ತು ಜನಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಹೊತ್ತು ನೀಡಲಾಗುತ್ತದೆ ಎಂದು ಶರ್ಮ ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿಗೆ ನಡೆದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಭರ್ಜರಿಗೆಲು ಸಾಧಿಸಿದೆ. ಒಕ್ಕೂಟ ವಟ್ಟು 102 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ನಿರ್ಮಿಸಿದ್ದು, ಇದುವರೆಗಿನ ಅತ್ಯಧಿಕ ಸಾಧನೆ ಎಂದು ಹೇಳಲಾಗಿದೆ. ಬಿಜೆಪಿ ಪಕ್ಷವು ಏಕಾಂಗಿಯಾಗಿ 82 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಮಿತ್ರ ಪಕ್ಷಗಳಾದ ಎಜಿಪಿ ಹಾಗೂ ಬಿಪಿಎಫ್ ತಲಾ ಹತ್ತು ಸ್ಥಾನಗಳಲ್ಲಿ ಜಯಗಳಿಸಿವೆ. ಈ ಬಾರಿ ಜನಾದೇಶದೊಂದಿಗೆ ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ.

Sponsored

ಅಸ್ಸಾಂನಲ್ಲಿ ಎನ್ ಡಿ ಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಮೂರನೇ ಅವಧಿಗೂ ಏನ್ ಡಿಎ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಸ್ಸಾಂ ಜನರಿಗೆ ಧನ್ಯವಾದ ಹೇಳಿದರು. ನಿಯೋಜಿತ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ನೇತೃತ್ವದಲ್ಲಿ ಅಸ್ಸಾಂ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದ್ದು, ದೇಶದ ಅತ್ಯಂತ ಪ್ರಗತಿಪರ ಹಾಗೂ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ಸೋನೋವಾಲ್ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮೂಲಸೌಕರ್ಯ, ಕೈಗಾರಿಕೆ, ಉದ್ಯೋಗ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೊಸ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಎನ್ ಡಿ ಎ ಸತತ ಮೂರನೆಯವರಿಗೆ ತನ್ನ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಇದನ್ನು ಅಸ್ಸಾಂ ಜನರಿಗೆ ಉತ್ತಮ ದಿನ ಎಂದು ಸಂತಸ ವ್ಯಕ್ತಪಡಿಸಿದರು.

Also Read:

ಹುಲಿಗೆಮ್ಮ ದೇವಿಯ ಮಹಾರಥೋತ್ಸವ ವೈಭವ; ದೇವಸ್ಥಾನದಲ್ಲಿ ಭಕ್ತರ ಸಾಗರ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online