Belagavi News:
ಜಿಂದ್: ಭಾರತದ ರೈಲ್ವೆ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಜಿಂದ್ ಮತ್ತು ಸೋನಿಪತ್ ನಡುವೆ ಸಂಚರಿಸಲಿರುವ ಈ ಪರಿಸರ ಸ್ನೇಹಿ ರೈಲು 'ಮೇಕ್ ಇನ್ ಇಂಡಿಯಾ' ಯೋಜನೆಯಡಿ ಸ್ಥಳೀಯ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಲಾಗಿದೆ.
ಅತ್ಯಾಧುನಿಕ ಹೈಡ್ರೋಜನ್ ಇಂಧನ ಕೋಶ ತಂತ್ರಜ್ಞಾನದಿಂದ ಕಾರ್ಯನಿರ್ವಹಿಸುವ ಈ ರೈಲು, ಪರಿಸರ ಮಾಲಿನ್ಯ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಹೈಡ್ರೋಜನ್ ಆಧಾರಿತ ರೈಲು ತಂತ್ರಜ್ಞಾನವು ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ನೀಡಲಿದ್ದು, ಭವಿಷ್ಯದ ಹಸಿರು ಸಾರಿಗೆ ವ್ಯವಸ್ಥೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆಯಿದೆ.
ಈ ಮೂಲಕ ಹೈಡ್ರೋಜನ್ ರೈಲು ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವ ವಿಶ್ವದ ಕೆಲವೇ ದೇಶಗಳ ಸಾಲಿಗೆ ಭಾರತವು ಸೇರ್ಪಡೆಯಾಗಿದೆ. ರೈಲ್ವೆ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಮತ್ತು ಪರಿಸರ ಸ್ನೇಹಿತ ತಂತ್ರಜ್ಞಾನದತ್ತ ಭಾರತದ ಮಹತ್ವದ ಹೆಜ್ಜೆ ಇದಾಗಿದೆ.
ಹೈಡ್ರೋಜನ್ ರೈಲಿನ ಯುಗ ಆರಂಭ: ಹರಿಯಾಣದಲ್ಲಿ ದೇಶದ ಮೊದಲ ರೈಲಿಗೆ ಪಿಎಂ ಮೋದಿ ಚಾಲನೆ
ಜಿಂದ್: ಭಾರತದ ಇಂಧನ ಮತ್ತು ರೈಲ್ವೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ದಾಖಲಾಗುತ್ತಿದೆ. ಹರಿಯಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಿಂದ್ ರೈಲು ನಿಲ್ದಾಣದಿಂದ ಜಿಂದ್ - ಸೋನಿಪತ್ ನಡುವೆ ಸಂಚರಿಸಲಿರುವ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಸಂಪೂರ್ಣವಾಗಿ ಭಾರತದಲ್ಲಿ ವಿನ್ಯಾಸಗೊಳಿಸಿ, ಸ್ಥಳೀಯ ತಂತ್ರಜ್ಞಾನ ಬಳಸಿ ನಿರ್ಮಿಸಿರುವ ಈ ರೈಲು, ದೇಶದ ಸ್ವಚ್ಛ ಇಂಧನ ಆಧಾರಿತ ಸಾರಿಗೆ ವ್ಯವಸ್ಥೆಯತ್ತದ ಮಹತ್ವದ ಹೆಜ್ಜೆಯಾಗಿದೆ. ಹೈಡ್ರೋಜನ್ ತಂತ್ರಜ್ಞಾನ ಆಧಾರಿತ ಈ ರೈಲು ಪರಿಸರ ಸ್ನೇಹಿ ಸಾರಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
ಈ ಐತಿಹಾಸಿಕ ಉಡಾವಣೆಯೊಂದಿಗೆ, ಹೈಡ್ರೋಜನ್ ರೈಲು ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವ ವಿಶ್ವದ ಆಯ್ದ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಲಿದೆ. ರೈಲ್ವೇ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ ಮತ್ತು ಹಸಿರು ತಂತ್ರಜ್ಞಾನದತ್ತ ಇದು ಹೊಸ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ.
ಚೀನಾ, ಜರ್ಮನಿಯನ್ನೇ ಹಿಂದಿಕ್ಕಿದ್ದ ಭಾರತದ ಹೈಡ್ರೋಜನ್ ರೈಲು ಸಾಧನ!
ಹೈಡ್ರೋಜನ್ ರೈಲು ತಂತ್ರಜ್ಞಾನದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಹೈಡ್ರೋಜನ್ ತಂತ್ರಜ್ಞಾನ ಬಳಸುತ್ತಿರುವ ಪ್ರಮುಖ ರಾಷ್ಟ್ರಗಳ ಸಾಲಿನಲ್ಲಿ ಭಾರತ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.
ಭಾರತ ಅಭಿವೃದ್ಧಿ ಪಡಿಸಿರುವ ಹೈಡ್ರೋಜನ್ ರೈಲು ಸಾಮರ್ಥ್ಯದ ದೃಷ್ಟಿಯಿಂದ ವಿಶೇಷ ಗಮನ ಸೆಳೆದಿದೆ. ಜರ್ಮನಿ ಮತ್ತು ಚೀನಾದಂತಹ ದೇಶಗಳಲ್ಲಿ ಸಾಮಾನ್ಯವಾಗಿ ಕಡಿಮೆ ಭೋಗಿಗಳ ಹೈಡ್ರೋಜನ್ ರೈಲುಗಳು ಕಾರ್ಯ ನಿರ್ವಹಿಸುತ್ತಿದ್ದರೆ, ಭಾರತವು 10 ಭೋಗಿಗಳು ಬೃಹತ್ ಹೈಡ್ರೋಜನ್ ರೈಲನ್ನು ಅಭಿವೃದ್ಧಿಪಡಿಸಿರುವುದಾಗಿ ತಿಳಿಸಲಾಗಿದೆ.
ಒಂದೇ ಬಾರಿ ಸುಮಾರು 2,600 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿರುವ ಈ ರೈಲು, ಹೆಚ್ಚಿನ ಪ್ರಯಾಣಿಕ ಸಾಮರ್ಥ್ಯದ ಹೈಡ್ರೋಜನ್ ರೈಲುಗಳನ್ನು ಪ್ರಮುಖ ಸ್ಥಾನ ಪಡೆದಿದೆ. 3,200 ಅಶ್ವಶಕ್ತಿಯ (HP) ಪ್ರೊಪಲ್ಪನ್ ಸಿಸ್ಟಮ್ ಹೊಂದಿರುವ ಈ ರೈಲು ಅತ್ಯಾಧುನಿಕ ತಂತ್ರಜ್ಞಾನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತದೆ.
ಹೈಡ್ರೋಜನ್ ಇಂಧನ ಕೋಶ ತಂತ್ರಜ್ಞಾನದ ಮೂಲಕ ಹೈಡ್ರೋಜನ್ ಅನ್ನು ವಿದ್ಯುತ್ ಶಕ್ತಿಯಾಗಿ ಪರಿವರ್ತಿಸಿ ರೈಲು ಚಲಿಸುತ್ತದೆ. ಈ ತಂತ್ರಜ್ಞಾನವು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಹೊಸ ದಾರಿ ತೆರೆದಿದೆ.