belagavi news:
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ. ಸರ್ಕಾರ ರಚಿಸಲು ಅಗತ್ಯವಿರುವ ನಿಶ್ಚಳ ಬಹುಮತವನ್ನು ದಾಟಿ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ ಈ ಮೂಲಕ ರಾಜ್ಯ ಸರ್ಕಾರದಲ್ಲಿ ಮಹತ್ವದ ತಿರುವು ಕಾಣಿಸುತ್ತಿದೆ. ಇದರೊಂದಿಗೆ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಆಡಳಿತಕ್ಕೆ ಅಂತ್ಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿರುವುದು ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ದಾಖಲಾಗುತ್ತಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 171ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸಲು ಅಗತ್ಯವಿರುವ 148 ಸ್ಥಾನಗಳ ಗಡಿಯನ್ನು ಸುಲಭವಾಗಿ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೇಸರಿ ಪಕ್ಷ ಅಧಿಕಾರದ್ದ ಗದ್ದುಗೆ ಹಿಡಿಯುವತ್ತ ಭರ್ಜರಿ ಮುನ್ನಡೆ ಸಾಧಿಸಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.
ಬಿಜೆಪಿಯ ಈ ಬಾರಿ ಮುನ್ನಡೆಯ ಬೆನ್ನಲ್ಲೇ ಕೊಲ್ಕತ್ತಾದಲ್ಲಿರುವ ಪಕ್ಷದ ರಾಜ್ಯ ಪ್ರಧಾನ ಕಚೇರಿ ಎದರು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಬಿಜೆಪಿ ಕಾರ್ಯಕರ್ತರು 'ಜೈ ಶ್ರೀ ರಾಮ್' ಘೋಷಣೆಗಳನ್ನು ಕೂಗುತ್ತಿದ್ದಾರೆ. ಪಕ್ಷದ ನಾಯಕತ್ವ ಹಾಗೂ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧಪಕ್ಷದ ನಾಯಕ ಸುವೆಂದು ಅಧಿಕಾರಿ ಅವರಿಗೆ ಕಾರ್ಯಕರ್ತರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಸಿಹಿ ತಿಂಡಿ ಹಂಚಿಕೆ ಪಟಾಕಿ ಸಿಡಿತ ಹಾಗೂ ವಿಜಯೋತ್ಸವದ ದೃಶ್ಯಗಳು ಗಮನ ಸೆಳೆಯುತ್ತಿವೆ.
ನಂದಿಗ್ರಾಮ ಮತ್ತು ಭಬಾನಿಪುರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ 180ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಸರ್ಕಾರ ರಚಿಸುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಮುಂದುವರೆದು,"ವಿದ್ಯಾವಂತ ಹಿಂದುಗಳು ಮಮತಾ ಬ್ಯಾನರ್ಜಿ ಯನ್ನು ತಿರಸ್ಕರಿಸಿದ್ದಾರೆ"ಎಂದು ಹೇಳಿಕೆ ನೀಡಿದು ಈ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Also Read:
ಸುನಿಲ್ ನರೈನ್ ಇತಿಹಾಸದ ಪುಟಗಳಲ್ಲಿ ಹೆಸರು; ಅಪೂರ್ವ ದಾಖಲೆ