belagavi news:
ಈ ಘಟನೆಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಗಲಾಗಿದೆ ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ತಂಡ ಬೆಂಕಿಯನ್ನು ನಂದಿಸಿದೆ ಪ್ರಕಟನ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಸಂಜನಾ ಟ್ರಾವೆಲ್ಸ್ ನ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೆಂಕಿಗೆ ಆಹುತಿಯಾಗಿದೆ.
ಬಸ್ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿಸಿದ್ದರು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ, ಪ್ರಯಾಣಿಕರನ್ನು ತಕ್ಷಣ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಅದೃಷ್ಟವಶಾತ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಖಾಸಗಿ ಬಸ್ ವೊಂದು ಅಪಘಾತಕ್ಕೀಡಾಗಿ, ಬೆಂಕಿ ಹೊತ್ತುಕೊಂಡು ಸುಟ್ಟು ಕರಗಳಾದ ಘಟನೆ ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ರಸ್ತೆಯಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ, ನಿಧಾನವಾಗಿ ಸಾಗುತ್ತಿದ್ದ ಬಸ್ ಚಾಲಕನ್ನ ನಿಯಂತ್ರಣ ತಪ್ಪಿ ರಸ್ತೆ ವಿಭಜನಕ್ಕೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತುಕೊಂಡಿದೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ನಾಶವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಗೇಜ್ ಬಾಕ್ಸ್ ನಲ್ಲಿದ್ದ ಪ್ರಯಾಣಿಕರ ವಸ್ತುಗಳು ಸಹ ಸುಟ್ಟು ಕರಗಲಾಗಿವೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ತಕ್ಷಣ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಿದ್ದಾರೆ.
ಸಮಯಪ್ರಜ್ಞೆ ಮೆರೆದ ಬಸ್ ಚಾಲಕ: ಬಸ್ ಪ್ರಯಾಣ ಆರಂಭಿಸಿ ಕೇವಲ 30 ನಿಮಿಷದಲ್ಲಿ ಘಟನೆ ನಡೆದಿತ್ತು. ಬೆಂಕಿ ತಗುಲಿರುವುದು ಗಮನಕ್ಕೆ ಬಂದ ತಕ್ಷಣ ಚಾಲಕ ವಾಹನವನ್ನು ರಸ್ತೆ ಪಕ್ಕದ್ದ ಮರಕ್ಕೆ ಡಿಕ್ಕಿನಲ್ಲಿ ನಿಲ್ಲಿಸಿದ್ದ. ಮರ ಕೇಡಿಕ್ಕಿ ಹೊಡೆಯದೆ ಮುಂದಕ್ಕೆ ಸಾಗಿದ್ದರೆ ಸಾಕಷ್ಟು ಅನಾಹುತ ಸಂಭಿಸುವ ಸಾಧ್ಯತೆ ಇತ್ತು . ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿತ್ತು.
ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸ್ಕಿ ನಾನ್ ಎಸಿ ಸ್ಲೀಪರ್ ಬಸ್ ನಲ್ಲಿ ಆಕಸ್ಮಿಕ ವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪುನ ಸುಟ್ಟು ಕರಗಲಾದ ಘಟನೆ ಇತ್ತೀಚಿಗೆ ಸೂಡೂರು ಗ್ರಾಮದ ಬಳಿ ನಡೆದಿತ್ತು.
ಈ ವೇಳೆ, ಬಸ್ ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿತ್ತು. ಇದರಲ್ಲಿ 12 ಜನರನ್ನು ಶಿವಮೊಗ್ಗದ್ದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು . ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರು. ಎಲ್ಲರನ್ನು ರಿಪ್ಪನ್ ಪೇಟಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿ ಗಲ್ಲಿನ ಬಳಿ ಬಸ್ಸಿಗೆ ಆಕಸ್ಮಿಕ ಬೆಂಕಿ ತಗುಲಿತ್ತು.
ಇನ್ನಷ್ಟು ಓದಿರಿ:
Gold & Silver Price: ದರಗಳಲ್ಲಿ ಏರಿಳಿತ, ಚಿನ್ನದ ರೇಟು ಹೆಚ್ಚುವ ನಿರೀಕ್ಷೆ!