<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಗಂಗಾವತಿಯಲ್ಲಿ ಭೀಕರ ಘಟನೆ: ಮನೆಯವರು ಮೇಲೆಯೇ ಚಾಕುದಾಡಿ ಮಾಡಿದ ಮಗ, ಇಬ್ಬರು ಮೃತ್ಯ

ಗಂಗಾವತಿಯಲ್ಲಿ ಭೀಕರ ಘಟನೆ: ಮನೆಯವರು ಮೇಲೆಯೇ ಚಾಕುದಾಡಿ ಮಾಡಿದ ಮಗ, ಇಬ್ಬರು ಮೃತ್ಯ
Summary: A shocking incident took place in Gangavathi, where a son attacked his family members with a knife. In this horrific incident, the father and sister died on the spot, while the mother was seriously injured and is undergoing treatment in the hospital. It is suspected that a family dispute was the reason for this tragedy. The police, who have registered a case, are investigating. Gangavathi, Koppal district, Crime News, Family murder, This incident has been the subject of intense discussion across the state.

Balagavi News:

ಗಂಗಾವತಿ (ಕೊಪ್ಪಳ): ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಮನ ಕಲಕುವ ಘಟನೆ ನಡೆದಿದ್ದು. ಮಾನಸಿಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎನ್ನಲಾದ ಯುವಕನೊಬ್ಬ ತನ್ನ ಕುಟುಂಬದ ಸದಸ್ಯರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರಲ್ಲಿ ತಂದೆ ಹಾಗೂ ಸಹೋದರಿ ಸೇರಿದ್ದಾರೆ ಎಂದು ತಿಳಿದುಬಂದಿದ್ದು, ತಾಯಿಗೆ ಗಂಭೀರ ಗಾಯಗಳಾಗಿವೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಯು ಆನ್ ಲೈನ್ ಗೇಮಿಂಗ್, ವಿಶೇಷವಾಗಿ PUBG ಗೇಮ್ ಗೆ ವ್ಯಸನಿಯಾಗಿದ್ದ ಎನ್ನಲಾಗಿದ್ದು. ಇದೇ ಹಿನ್ನೆಲೆ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಈ ಕೃತ್ಯ ಎಸಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಯ ನಿಖರ ಕಾರಣ ಅನ್ನೋ ಸ್ಪಷ್ಟವಾಗಿಲ್ಲ.

Sponsored

ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮ ಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಗಂಗಾವತಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಮವಾಗಿದ್ದು. ಆನ್ ಲೈನ್ ಗೇಮಿಂಗ್ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.

ಮಾಹಿತಿಯ ಪ್ರಕಾರ, ಯುವಕ ಚಾಕುವಿನಿಂದ ಕುಟುಂಬಸ್ಥರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ದಾಳಿಯ ವೇಳೆ ತೀವ್ರ ರಕ್ತಸ್ರಾವಗೊಂಡ ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇನ್ನೊಂದೆಡೆ, ಗಂಭೀರವಾಗಿ ಗಾಯಗೊಂಡ ತಾಯಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಸಿಲ್ಲ ಆಗಿದ್ದು. ಅವರ ಸ್ಥಿತಿ ಚಿಂತಾಜನಕವಾಗಿದೆ. ಕುಟುಂಬದವರ ಮೇಲೆ ದಾಳಿ ನಡೆಸಿದ ಬಳಿಕ ಆರೋಪಿಯು ಮತ್ತು ತನಗೂ ಚಾಕುವಿನಿಂದ ಇರಿದುಕೊಂಡಿದ್ದು. ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Sponsored

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಮಾನಸಿಕ ಅಸ್ಥಿರತೆಗೆ ಒಳಗಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದ್ದು. ಆನ್ ಲೈನ್ PUBG ಗೇಮ್ ವ್ಯಸನದ ಹಿನ್ನೆಲೆ ಈ ಕೃತ್ಯ ಎಸಗಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ಆದರೆ ಘಟನೆಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ . ಅರಸಿದ್ದಿ , ಡಿವೈಎಸ್ ಪಿ ಹಾಗೂ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಬೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಗಂಗಾವತಿ ಸೇರಿದಂತೆ ಇಡೀ ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ ಸವಾಗಿದ್ದು. ಕುಟುಂಬದೊಳಗಿನ ಹಿಂಸಾಚಾರ ಮತ್ತು ಆನ್ ಲೈನ್ ಗೇಮಿಂಗ್ ದುಷ್ಪರಿಣಾಮಗಳ ಕುರಿತು ಮತ್ತೆ ಆತಂಕ ಮೂಡಿಸಿದೆ.

Also Read:

Sponsored

'ಬಿಗ್ ಬಾಸ್ ಕನ್ನಡ 13' ಅಭಿಮಾನಿಗಳಿಗೆ ಗುಡ್ ನ್ಯೂಸ್: ಮುಂದುವರೆದಿದೆ ಈ ಬಾರಿ ಸಾಮಾನ್ಯ ಜನರಿಗೆ ಸುವರ್ಣಾವಕಾಶ!

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online