Belagavi News :
ಕೊಡಗಿನಲ್ಲಿ ಭೀಕರ ದುರಂತ ಒಂದು ನಡೆದಿದೆ. ಕಾಫಿ ತೋಟದಲ್ಲಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸಾವು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲಸ ಮಾಡುತ್ತಿದ್ದ ವೇಳೆ, ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಕುಸಿತ ಪರಿಣಾಮ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದವರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಮೃತ ಕಾರ್ಮಿಕರು ಎಂದು ತಿಳಿದುಬಂದಿದ್ದು, ಘಟನೆಯಿಂದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಕುರಿತು ಸ್ಥಳಿಯ ಪೊಲೀಸರು ಮಾಹಿತಿ ಪಡೆದು ಪರಿಶೀಲನೆ ನಡೆಸುತ್ತಿದ್ದು, ಬೀಳಲು ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಕೊಡಗಿನಲ್ಲಿ ಭಾರಿ ಗಾಳಿ ಮಳೆಗೆ ಮರ ಉರುಳಿ ದುರಂತ ; ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು :
ಜಿಲ್ಲೆಯ ಮಾದಾಪುರ ಸಮೀಪದ ಬಿಳಿಗೇರಿ ಟಾಟಾ ಕಾಫಿ ತೋಟದಲ್ಲಿ ಭೀಕರ ದುರಂತ ಸಂಭವಿಸಿದೆ. ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ವೇಳೆ ಬಾರಿ ಗಾಳಿ ಮಳೆಗೆ ಮರ ಒಂದು ಉರಳಿ ಬಿದ್ದ ಪರಿಣಾಮ ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಎಂದು ಗುರುತಿಸಲಾಗಿದೆ. ಏಕಾಏಕಿ ಮರ ಬಿದ್ದ ಪರಿಣಾಮ ಕಾರ್ಮಿಕರಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಗದೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ತೋಟದ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೊಡಗು ಕಾಫಿ ತೋಟ ದುರಂತ - ಗಾಯಗೊಂಡ ಇಬ್ಬರು ಕಾರ್ಮಿಕರು ಆಸ್ಪತ್ರೆಗೆ ದಾಖಲು; ಪೊಲೀಸರು ತನಿಖೆ ಆರಂಭ :
ಕೊಡಗು ಜಿಲ್ಲೆಯಲ್ಲಿ ನಡೆದಂತಹ ಕಾಫಿ ತೋಟದ ದುರಂತದಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದ ಘಟನೆ ಬಳಿಕ ಗಾಯಗೊಂಡ ಇನ್ನಿಬ್ಬರು ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರಿ ಗಾಳಿ ಮಳೆಯಿಂದ ಮರ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಜೊತೆಗೆ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ತೀವ್ರ ಗಾಯಗಳಾಗಿವೆ. ಗಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾಫಿ ತೋಟದಲ್ಲಿ ನಡೆದ ಈ ದುರಂತದಿಂದ ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.