Belagavi News :
ಅಸ್ಸಾಂ ನ ಕಾಚರ್ ಜಿಲ್ಲೆಯ ಲೋಹ ಸಂಸ್ಕರಣ ಕಾರ್ಖಾನೆ ಅಂದರಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ ನಾಲ್ವರು ಕಾರ್ಮಿಕರು ದಾರಣವಾಗಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಪ್ರಬಲ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹ ಸುತ್ತಮುತ್ತಲಿಕೆ ಸಿಡಿದು ಬಿದ್ದಿದ್ದು, ಹತ್ತಿರದಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕಾರ್ಖಾನೆಯ ಮಾಲೀಕ ಹಾಗೂ ಮಂಡಳಿಯ ನಾಲ್ವರು ಸದಸ್ಯರಿಗೆ ಸೇರಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಕಾರ್ಖಾನೆಯ ಸುರಕ್ಷತಾ ಕ್ರಮಗಳಲ್ಲಿನ ನಿರ್ಲಕ್ಷವೇ ಸ್ಫೋಟಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಕಚ್ಚಾ ಜಿಲ್ಲೆಯ ಈ ದುರಂತದಿಂದ ಕಾರ್ಮಿಕರ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿದ್ದು, ಘಟನೆಯ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
Assam factory blast - ಕಚಾರ್ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರ ಸಾವು ; ಮಾಲಿಕ ಸೇರಿ ಐವರ ವಿರುದ್ಧ ಕೇಸ್ :
ಅಸ್ಸಾಂನ ಕಚಾರ್ ಜಿಲ್ಲೆಯ ಲೋಹ ಸಂಸ್ಕರಣ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ವೇಳೆ ಕರಗಿದ ಬಿಸಿಲೋಹ ಸಿಡಿದು ಬಿದ್ದು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟನೆಯ ತೀವ್ರತೆಗೆ ಹತ್ತಿರದಲ್ಲಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಹಾಗೂ ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಗಾಯಗೊಂಡ ಇಬ್ಬರು ಕಾರ್ಮಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆ ಬಳಿಕ ಕಾರ್ಖಾನೆಯ ಸುರಕ್ಷತಾ ಕ್ರಮಗಳ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುವಾಹಟಿಯಲ್ಲಿ ತಲೆಮರಸಿಕೊಂಡಿದ್ದ ಕಾರ್ಖಾನೆಯ ಮಾಲಿಕನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕಚ್ಚಾರ ನಲ್ಲಿ ಉಳಿದ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, ಒಟ್ಟು ಐವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ನಿರ್ಲಕ್ಷದ ಪ್ರಕರಣ ದಾಖಲಿಸಲಾಗಿದೆ.
ಕಾರ್ಖಾನೆಯಲ್ಲಿ ನಡೆದ ದುರಂತದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಸ್ಫೋಟಕ್ಕೆ ಕಾರಣ ಹಾಗೂ ಸುರಕ್ಷಿತ ಲೋಕಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
Assam factory blast - ಸುರಕ್ಷತಾ ಲೋಕ ಆರೋಪ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ; ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಘೋಷಣೆ :
ಅಸ್ಸಾಂ ಕಚಾರ್ ಮೆಟಲ್ ಫ್ಯಾಕ್ಟರಿ ಸ್ಫೋಟ ಪ್ರಕರಣದ ಬಳಿಕ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದ್ದು, ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಜೊತೆಗೆ ಜಿಲ್ಲೆಯ ಕೈಗಾರಿಕಾ ಘಟಕಗಳ ಸುರಕ್ಷತಾ ತಪಾಸಣೆಗೆ ಸೂಚನೆ ನೀಡಲಾಗಿದೆ.
Also Read :
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವ : ದೇವರ ದರ್ಶನಕ್ಕೆ ಭಕ್ತರ ಸಾಗರ