belagavi news :
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಅನುಕಲ್ಪ್ ಮಿಶ್ರಾ ವಿರುದ್ಧದ ತನಿಖೆಯಲ್ಲಿ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಕಳುವಾಗಿರುವ ದೇಣಿಗೆ ಹಣವನ್ನು ಬಳಸಿ ಹೊಸ ಮನೆ ನಿರ್ಮಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಅನುಕಲ್ಪ್ ಮಿಶ್ರಾ ಅವರ ಇನಾಯತ್ ನಗರದ ಬಸವ ಮುತಲೈ ಗ್ರಾಮದಲ್ಲಿರುವ ಹೊಸ ಮನೆ ಸೇರಿದಂತೆ ಅವರ ತಂದೆ ಹಾಗೂ ಮೂವರು ಸಹೋದರರ ನಿವಾಸಗಳ ಮೇಲು ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಇತರ ಸಾಕ್ಷ್ಯ ಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ರಾಮಂದಿರಕ್ಕೆ ಭಕ್ತರು ಸಮರ್ಪಿಸಿದ್ದ ದೇಣಿಗೆ ಹಣ ಕಳುವಾಗಿದೆ ಎಂಬ ಆರೋಪ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು, ತನಿಖೆಯ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ.
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣದ ತನಿಖೆ ತೀವ್ರ ಗೊಂಡಿದೆ. ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಜಾಲವನ್ನು ಭೇದಿಸಲು ಕಾರ್ಯಾಚರಣೆಯನ್ನು ಮತ್ತಷ್ಟು ವಿತರಿಸಿದೆ.
ಜೂನ್ 23ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ SIT ಪ್ರಾಥಮಿಕ ವರದಿ ಸಲ್ಲಿಸಿದ್ದು, ತನಿಖೆಯಲ್ಲಿ ಹಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ ಎಂದು ವರದಿಯಾಗಿದೆ. ಅಧಿಕಾರಿಗಳು ಆರೋಪಿಗಳ ನಿವಾಸಗಳ ಮೇಲೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇದುವರೆಗೆ ಸುಮಾರು ₹80 ಲಕ್ಷ ನಗದನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಇದರ ಜೊತೆಗೆ ಅಕ್ರಮವಾಗಿ ಸಂಪಾದಿಸಲಾಗಿದೆ ಎಂದು ಶಂಕಿಸಲಾದ ಹಣವನ್ನು ಎಲ್ಲಿ ಮತ್ತು ಹೇಗೆ ಹೂಡಿಕೆ ಮಾಡಲಾಗಿದೆ ಎಂಬುದರ ಬಗ್ಗೆ SIT ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ಜಾಲವನ್ನು ಭೇದಿಸಲು ಹಣದ ಹರಿವಿನ ಕುರಿತು ತನಿಖೆ ಮುಂದುವರೆದಿದ್ದು, ಇನ್ನಷ್ಟು ಮಹತ್ವದ ಮಾಹಿತಿಗಳು ಹೊರ ಬೀಳುವ ಸಾಧ್ಯತೆ ಇದೆ.
ಪ್ರಕರಣದ ತನಿಖೆ ಇನ್ನು ಮುಂದುವರೆದಿರುವುದರಿಂದ, ಆರೋಪಗಳ ಅಂತಿಮ ಸತ್ಯಾಸತ್ಯತೆ ನ್ಯಾಯಾಂಗ ಮತ್ತು ತನಿಖಾ ಪ್ರಕ್ರಿಯೆಯ ಬಳಿಕವೇ ಸ್ಪಷ್ಟವಾಗಲಿದೆ.