belagavi news :
ಕರ್ನಾಟಕ ಕಾಂಗ್ರೆಸ್ ಸರ್ಕಾರ: ಡಿಸಿಎಂ ಹುದ್ದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸಂಪುಟ ರಚನೆಗೆ ಕಸರತ್ತು ತೀವ್ರ
ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಪದಗ್ರಹಣದ ಬಳಿಕ ಇದೀಗ ಡಿಸಿಎಂ ಹುದ್ದೆಗಳ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಸಚಿವ ಸಂಪುಟ ರಚನೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಜಾತಿ ಸಮೀಕರಣಗಳು ಮತ್ತು ಪ್ರಾದೇಶಿಕ ಪ್ರತಿನಿಧಿತ್ವದ ಲೆಕ್ಕಾಚಾರಗಳು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರೊಂದಿಗೆ ಸುಮಾರು 14 ಮಂದಿ ಸಚಿವರು ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ರಾಜ್ಯದ ಫಿಲಂ ಸಮುದಾಯಗಳು, ಜಿಲ್ಲೆಗಳು ಹಾಗೂ ಹಿರಿಯ ನಾಯಕರಿಗೆ ಸಮಾನ'ಅವಕಾಶ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕತ್ವ ಮಹತ್ವದ ಪಟ್ಟಿಯನ್ನು ನಿರ್ಮಿಸುವಲ್ಲಿ ತೊಡಗಿಕೊಂಡಿದೆ.
ಡಿಸಿಎಂ ಹುದ್ದೆಗಳ ಸಂಖ್ಯೆ ಎಷ್ಟು ಇರಬೇಕು, ಯಾವ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕು ಹಾಗೂ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ನಿರಂತರ ಸಮಲೋಚನೆ ನಡೆಯುತ್ತಿದೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ನಾಲ್ಕು ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಕುರಿತು ತೆರೆ ಮೆರೆಯಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿರುವುದಾಗಿ ತಿಳಿದು ಬಂದಿದೆ. ವಿವಿಧ ಸಮುದಾಯಗಳು ಮತ್ತು ಪ್ರದೇಶಗಳಿಗೆ ಸಮರ್ಪಕ ಪ್ರತಿನಿತ್ಯ ನೀಡುವ ಉದ್ದೇಶದಿಂದ ಈ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕತ್ವ ಗಂಭೀರವಾಗಿ ಪರಿಗಣಿಸುತ್ತಿದೆ.
ಜಾತಿವಾರು ಸಮೀಕರಣ, ಪ್ರಾದೇಶಿಕ ಸಮತೋಲನ ಹಾಗೂ ಹಿರಿಯ ನಾಯಕರ ನಿರೀಕ್ಷೆಗಳನ್ನು ಪೂರೈಸುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಹೈದ್ರಾಬಾದ್- ಕರ್ನಾಟಕ ಹಾಗೂ ಕರಾವಳಿ ಭಾಗಗಳಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ಜೊತೆಗೆ ಪ್ರಮುಖ ಸಮುದಾಯಗಳ ಪ್ರಾತಿನಿತ್ವಕ್ಕೂ ಆದ್ಯತೆ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.
ಸಂಪುಟದ ಅಂತಿಮ ರೂಪರೇಷೆ ಕುರಿತು ಇನ್ನು ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ ಬಿಸಿಎಂ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಪಕ್ಷದ ಒಳಗಿನ ಅಸಮಾಧಾನವನ್ನು ತಗ್ಗಿಸಿ, ಎಲ್ಲಾ ವರ್ಗಗಳ ನಾಯಕರಿಗೆ ನ್ಯಾಯ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳನ್ನು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಹುದ್ದೆಗಾಗಿ ಹಲವು ಹಿರಿಯ ನಾಯಕರು ಹಾಗೂ ಪ್ರಭಾವಿ ಮುಖಂಡರು ಲಾಬಿ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಾತಿವಾರು ಸಮೀಕರಣ,ಪ್ರಾದೇಶಿಕ ಪ್ರತಿನಿಧಿತ್ವ ಮತ್ತು ಪಕ್ಷದ ಸಂಘಟನಾ ಬಲವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನೀರಿಕ್ಷೆ ಇದೆ.
ಡಿಸಿಎಂ ಹುದ್ದೆಯ ರೇಸ್ ನಲ್ಲಿ ಯತೀಂದ್ರ, ಎಂ ಬಿ ಪಾಟೀಲ್, ಜಮೀರ್ ಅಹಮದ್ ಖಾನ್, ಯುಟಿ ಖಾದರ್, ಡಾ ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ನಾಯಕರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿದೆ. ವಿವಿಧ ಸಮುದಾಯಗಳು ಮತ್ತು ಪ್ರದೇಶಗಳಿಗೆ ಪ್ರಾತಿನಿತ್ಯ ನೀಡುವ ಉದ್ದೇಶದಿಂದ ಒಂದಕ್ಕಿಂತ ಹೆಚ್ಚು ಡಿಸಿಎಂ ಹುದ್ದೆಗಳ ಸೃಷ್ಟಿ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ.
ಇದರ ಜೊತೆಗೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಇವರ ಪೈಪೋಟಿ ಕಂಡುಬರುತ್ತಿದೆ. ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಹತ್ವ ಪಡೆದಿದ್ದು, ಸಚಿವರಾಗಿರುವ ಸತೀಶ್ ಜಾರಕಿಹೊಳಿ ಹಾಗೂ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಪಕ್ಷದ ಮುಂದಿನ ರಾಜಕೀಯ ತಂತ್ರ ರೂಪಿಸುವಲ್ಲಿ ಈ ನೇಮಕಾತಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ರಚನೆ, ಬಿಸಿಎಂ ಹುದ್ದೆಗಳ ಹಂಚಿಕೆ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತ ಅಂತಿಮ ನಿರ್ಧಾರಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಿರಂತರ ಸಮಲೋಚನೆಗಳು ನಡೆಯುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.
Also Read: