belagavi news :
ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾಗಿ ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಇದೀಗ ಉಳಿದಿರುವ 20 ಸಚಿವ ಸ್ಥಾನಗಳಿಗಾಗಿ ಬಾರಿ ಪೈಪೋಟಿ ಆರಂಭವಾಗಿದೆ.
ಮೂಲಗಳ ಪ್ರಕಾರ, ಸಚಿವ ಸ್ಥಾನ ಪಡೆಯಲು 60ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ದೆಹಲಿ ಮಟ್ಟದಲ್ಲಿ ತೀವ್ರ ಲಾಭವನ್ನು ನಡೆಸುತ್ತಿದ್ದಾರೆ. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಮೊದಲ ಬಾರಿಗೆ ಗೆದ್ದಿರುವ ಕೆಲವು ಪ್ರಭಾವಿ ಶಾಸಕರು ಮಂತ್ರಿಗಿರಿಯ ರೇಸ್ ನಲ್ಲಿ ಇದ್ದಾರೆ. ಇದರಿಂದ ಹೈಕಮಾಂಡ್ಗೆ ಸಚಿವ ಸ್ಥಾನ ಹಂಚಿಕೆ ದೊಡ್ಡ ತಲೆನೋವುವಾಗಿದ್ದು, ಸಮತೋಲನ ಸಾಧಿಸುವುದು ಸವಾಲಾಗಿದೆ.
ಇತ್ತೀಚಿಗೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಜಮೀರ್ ಅಹಮದ್ ಬೆಂಬಲಿಗರ ಪ್ರತಿಭಟನೆಯ ಬಿಸಿ ಸದ್ಯ ತಣ್ಣಗಾಗುತ್ತಿದೆ. ಈ ಬೆಳವಣಿಗೆಗಳ ನಡುವೆ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಕಾಂಗ್ರೆಸ್ ನಾಯಕರಿಗೆ ಹೊಸ ಸವಾಲ್ ಆಗಿ ಪರಿಣಮಿಸಿದೆ.
ಪ್ರದೇಶ, ಜಾತಿ, ಅನುಭವ ಹಾಗೂ ರಾಜಕೀಯ ಪ್ರಭಾವದ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡುವ ಲೆಕ್ಕಾಚಾರದಲ್ಲಿ ಹೈಕಮಾಂಡ್ ತೊಡಗಿದೆ. ಆದರೆ ಆಕಾಂಕ್ಷಿಗಳ ಸಂಖ್ಯೆ ಏರಿಕೆಗಿಂತ ಹೆಚ್ಚಿರುವುದರಿಂದ. ಅಸಮಾಧಾನ ಭುಗಿಲೆದ್ದರೆ ಸರ್ಕಾರ ಮತ್ತು ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಹೀಗಾಗಿ, ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಮಂತ್ರಿ ಗಿರಿಯ ಮಹಾಸಮರ ತಾರಕಕ್ಕೇರಿದ್ದು, ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಾಂಶಗಳು:
20 ಸಚಿವ ಸ್ಥಾನಗಳಿಗೆ ಬಾರಿ ಪೈಪೋಟಿ
ಹೈಕಮಾಂಡ್ ಮಟ್ಟದಲ್ಲಿ ಮಾಜಿ ಸಚಿವರ ತೀವ್ರ ಲಾಭ
ಒಂದೊಂದು ಸ್ಥಾನಕ್ಕೆ ಮೂರ್ ನಾಲ್ಕು ಆಕಾಂಕ್ಷಿಗಳು
ದೆಹಲಿಯಲ್ಲಿ ಗಾಡ್ ಫಾದರ್ ಗಳ ಹುಡುಕಾಟ
ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ತೀವ್ರಗೊಂಡಿದೆ. ಸದ್ಯ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರು ಪೈಪೋಟಿ ನಡೆಸುತ್ತಿದ್ದು, ಪಕ್ಷದ ಹೈಕಮಾಂಡ್ ಗೆ ಹೊಸ ತಲೆನೋವು ಆರಂಭವಾಗಿದೆ. ಮೊದಲ ಹಂತದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದ ಹಲವು ಹಿರಿಯ ನಾಯಕರು ಹಾಗೂ ಮಾಜಿ ಸಚಿವರು ಇದನ್ನು ತಮ್ಮ ರಾಜಕೀಯ ವರ್ಚಸ್ಸಿಗೆ ಆದ ಹಿನ್ನಡೆಯಾಗಿ ಪರಿಗಣಿಸಿದ್ದು, ಎರಡನೇ ಹಂತದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಕೈತಪ್ಪದಂತೆ ತೀವ್ರಲಾಬಿ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ, ಮೊದಲ ಪಟ್ಟಿಯಲ್ಲಿ ವಂಚಿತರಾದ ಹಲವರು ಈಗಾಗಲೇ ದೆಹಲಿ ಮಟ್ಟದಲ್ಲಿ ಪ್ರಭಾವಿ ನಾಯಕರ ಸಂಪರ್ಕ ಸಾಧಿಸಿ ಬೆಂಬಲ ಕೋರಲು ಮುಂದಾಗಿದ್ದಾರೆ. ಸಚಿವ ಸ್ಥಾನಕ್ಕಾಗಿ ಒಂದೊಂದು ಕ್ಷೇತ್ರದಲ್ಲಿ ಮೂರರಿಂದ ನಾಲ್ಕು ಮಂದಿ ಆಕಾಂಕ್ಷಿಗಳು ಸ್ಪರ್ಧಿಸುತ್ತಿರುವುದರಿಂದ, ಯಾರಿಗೆ ಮನೆ ಹಾಕಬೇಕು ಎಂಬ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಲುಕಿದೆ.
ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಸಮತೋಲನಗೊಳಿಸುವುದು ನಾಯಕತ್ವಕ್ಕೆ ದೊಡ್ಡ ಸವಾಲಾಗಿದ್ದು, ಯಾವುದೇ ನಿರ್ಧಾರ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತ್ವರಿತವಾದ ಸಂಪುಟ ವಿಸ್ತರಣೆ ಮಾಡುವ ಬದಲು, ಜೂನ್ 18ರ ವಿಧಾನ ಪರಿಷತ್ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಒಟ್ಟಾರೆ, ಕಾಂಗ್ರೆಸ್ ಪಾಳಯದಲ್ಲಿ ಮಂತ್ರಿ ಗಿರಿಯ ರೇಸ್ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಚಿವ ಸ್ಥಾನ ಯಾರ ಪಾಲಾಗಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಜಾತಿ, ಜಿಲ್ಲಾ ವಾರು ಲೆಕ್ಕಾಚಾರ: ಖರ್ಗೆ, ಸಿದ್ದರಾಮಯ್ಯ ಹಾಗೂ ಡಿಕೆಶಿ ಕದಾರ್ ತಟ್ಟಿದ ಶಾಸಕರು ಈ ಬಾರಿ ಸಚಿವ ಸಂಪುಟ ಸೇರಲು ಹೊಸಬರು, ಹಳಬರು, ಹಿರಿಯರು, ವಲಸಿಗರು ಹಾಗೂ ಸಮುದಾಯದ ಮುಂದಾಳುಗಳು ತಮ್ಮದೇ ಆದ ಜಾತಿವಾರು ಲೆಕ್ಕಾಚಾರ, ಜಿಲ್ಲಾ ವಾರು ಕೋಟಾ ಮತ್ತು ಸಮುದಾಯದ ಪ್ರಾಬಲ್ಯದ ಕಾರ್ಡ್ ಬಳಸುತ್ತಿದ್ದಾರೆ. ಆರೇಳು ಬಾರಿ ಗೆದ್ದಿದ್ದರೂ ಇದುವರೆಗೆ ಒಮ್ಮೆಯೂ ಸಚಿವರಾಗದ ಹಿರಿಯ ಶಾಸಕರು ತಮಗೆ ಮೊದಲ ಆದ್ಯತೆ ನೀಡಬೇಕೆಂದು ಖರ್ಗೆಯವರಮ್ಮ ನಿವಾಸಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ .
ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿದ್ದು, ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರು ಕಣಕ್ಕಿಳಿದಿದ್ದಾರೆ. ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಒಳ ಪೈಪೋಟಿ ಇದೀಗ ಹೈಕಮಾಂಡ್ ಮಟ್ಟಕ್ಕೂ ತಲುಪಿದ್ದು, ಪಕ್ಷದ ನಾಯಕತ್ವಕ್ಕೆ ಹೊಸ ತಲೆ ನೋವಾಗಿ ಪರಿಣಮಿಸಿದೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ವಲಯದ ಶಾಸಕರು ತಮ್ಮ ನಿಷ್ಠೆ ಹಾಗೂ ರಾಜಕೀಯ ಸಮೀಪತೆಯ ಆಧಾರದ ಮೇಲೆ ಮಂತ್ರಿ ಗಿರಿ ಖಚಿತ ಎಂಬ ವಿಶ್ವಾಸದಲ್ಲಿದ್ದಾರೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಹೊಂದಿರುವ ಪ್ರಭಾವಿ ಶಾಸಕರ ಗುಂಪು ಕೂಡ ಸಚಿವ ಸಂಪುಟ ಸೇರ್ಪಡೆ ಗಾಗಿ ಭರ್ಜರಿ ಕಸರತ್ತು ನಡೆಸುತ್ತಿದೆ. ಹೀಗಾಗಿ, ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಬನ ರಾಜಕೀಯವು ಪ್ರಮುಖ ಅಂಶವಾಗಿ ಹೊರಹೊಮ್ಮಿದೆ.
ಈಗಾಗಲೇ ಮೊದಲ ಹಂತದಲ್ಲಿ ನೇಮಕಗೊಂಡ 13 ಸಚಿವರ ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾದ ಅಸಮಾಧಾನವನ್ನು ನಿಭಾಯಿಸುವುದರಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಸಿಎಂ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮವಹಿಸಿದ್ದಾರೆ. ಕೆಲ ಹಿರಿಯ ನಾಯಕರು ಮತ್ತು ಮಾಜಿ ಸಚಿವರ ಆತೃಪ್ತಿ ಇನ್ನೂ ಸಂಪೂರ್ಣ ಶಮನವಾಗಿಲ್ಲ ಎಂದು ಮಾತುಗಳು ಪಕ್ಷದೊಳಗೆ ಕೇಳಿ ಬರುತ್ತಿವೆ.
ಇದೀಗ ಉಳಿದಿರುವ 20 ಸ್ಥಾನಗಳಿಗೆ ಒಂದೊಂದು ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿರುವುದರಿಂದ, ಪ್ರಾದೇಶಿಕ, ಜಾತಿ, ರಾಜಕೀಯ ಹಾಗೂ ಬನ ಸಮೀಕರನಾಗಳನ್ನು ಸಮತೋಲನಗೊಳಿಸುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿದೆ. ಯಾವುದೇ ನಿರ್ಧಾರ ಅ ಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ನಾಯಕತ್ವ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ.
ಒಟ್ಟಾರೆ, ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಈ ಮಹಾಲಾಬಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಉಳಿದ 20 ಸ್ಥಾನಗಳ ಬರ್ತಿ ಪ್ರಕ್ರಿಯೆ ಪಕ್ಷದ ನಾಯಕತ್ವಕ್ಕೆ ಅಗ್ನಿಪರೀಕ್ಷೆಯಾಗಲಿದೆ ಎಂಬುವುದರಲ್ಲಿ ರಾಜಕೀಯ ವಲಯದಲ್ಲಿ ಯಾವುದೇ ಅನುಮಾನವಿಲ್ಲ.
Also Read:
ರಾಜ್ಯದಲ್ಲಿ ಭೀಕರ ಮಳೆ ಎಚ್ಚರಿಕೆ! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ