BELAGAVI NEWS
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂಪಾಯಿ ಸರಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಅಕ್ರಮದ ಕುರಿತು ತಕ್ಷಣವೇ ಎಸ್ಐಟಿ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಜಿ ವರದಿಯಲ್ಲಿ 225 ಕೋಟಿ ರೂ. ಆಕ್ರಮ ನಡೆದಿದೆ ಎಂದು ಉಲ್ಲೇಖಿಸಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ನಕಲಿ ಖಾತೆಗಳಿಗೆ ಹಣ ಜಮೆಯಾಗಿದ್ದು ಅಧಿಕಾರಿಗಳು ಮತ್ತು ರಾಜಕಾರಣಿಗಳ ದೊಡ್ಡ ಗ್ಯಾಂಗ್ ಇದರ ಹಿಂದೆ ಇದೆ ಎಂದು ಅವರು ಹೇಳಿದರು.
ಸತ್ತವರ ಹೆಸರಿಗೆ ಹಣ ವರ್ಗಾವಣೆಯಾಗಿರುವುದು ಗಂಭೀರ ವಿಷಯವಾಗಿದ್ದು, ಕಂದಾಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆಯೇ ಎಂದು ಅವರು ಪ್ರಶ್ನಿಸಿದರು. ಬೇಕೆಂದೇ ಸಾಫ್ಟ್ವೇರ್ ತಿದ್ದುಪಡಿ ಮೂಲಕ ಸತುರ ಹೆಸರಿನಲ್ಲಿ ಹಣ ಲೂಟಿ ಮಾಡಲಾಗಿದೆ ಎಂಬುದು ಅತಿ ದೊಡ್ಡ ಸೈಬರ್ ಕ್ರೈಂ ಎಂದು ಅವರು ದೂರಿದರು.
ಇದೇ ವೇಳೆ, 2.11 ಲಕ್ಷ ಫಲಾನುಭವಿಗಳು ಮೃತಪಟ್ಟಿರುವ ಮಾಹಿತಿ ಇದ್ದರೂ ಇನ್ನೂ 77,000 ಜನರ ದತ್ತಾಂಶ ಪಟ್ಟಿಯಾಗಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆ ನಡೆದಿದೆ ಎಂಬ ಶಂಕೆ ವ್ಯಕ್ತಪಡಿಸಿದ ಅವರು, ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ರಚಿಸಿರುವ ಸಮಿತಿಗಳು ಅಕ್ರಮ ತಡೆಯುವಲ್ಲಿ ವಿಫಲವಾಗಿವೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಆರ್ಥಿಕ ಇಲಾಖೆ ಬಿಕ್ಕಟ್ಟಿನ ಇಲಾಖೆಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ಅವರು, ಪಿಂಚಣಿ ಪಾವತಿಗಳನ್ನು ವಿಳಂಬವಾಗಿದ್ದು ಲಕ್ಷಾಂತರ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಸರ್ಕಾರದ ನೀತಿಯನ್ನು ಟೀಕಿಸಿದ ಅವರು, "ಗ್ಯಾರಂಟಿ ಮೊದಲು, ಪಿಂಚಣಿ ನಂತರ" ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.
ಕದ್ದು ಮುಚ್ಚಿ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿನ ಅನ್ಯಾಯವಾಗಿ ನೀರು ಹರಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಆರ್ ಎಸ್ ಜಲಾಶಯದಲ್ಲಿ 124.80 ಅಡಿ ಸಾಮರ್ಥ್ಯವಿದ್ದು, ಈಗ 81.03 ಅಡಿ ಮಟ್ಟಕ್ಕೆ ನೀರು ಕುಸಿದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಒಳಹರಿವು 689 ಕ್ಯೂಸೆಕ್ ಮಾತ್ರ ಇದ್ದು, ಹೊರಹರಿವು 1886 ಕ್ಯೂಸೆಕ್ ಆಗಿದೆ. ಇಷ್ಟು ಹೆಚ್ಚಿನ ಪ್ರಮಾಣದ ನೀರು ಯಾರಿಗೂ ತಿಳಿಯದ ಪ್ರೀತಿಯಲ್ಲಿ ತಮಿಳುನಾಡಿನ ಹರಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬೆಳೆಗಳಿಗೆ ಹಾಗೂ ನಾಲೆಗಳಿಗೆ ನೀರು ನೀಡುವುದಿಲ್ಲ ಎಂದು ಸರ್ಕಾರವೇ ಪ್ರಕಟಿಸಿದರು ಜಲಾಶಯದಿಂದ ನೀರು ಬೇರೆಡೆಗೆ ಹರಿಯುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೇ ಎಂದು ಅವರು ಹೇಳಿದ್ದಾರೆ.
ಜೂನ್ ತಿಂಗಳಲ್ಲಿ 9.19 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕಿರುವ ಹಿನ್ನೆಲೆಯಲ್ಲಿ, ರಾಜ್ಯದ ರೈತರ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂದು ಆರ್. ಅಶೋಕ್ ದೂರಿದ್ದಾರೆ. ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಭಾಗದ ರೈತರು ಇದೇ ನೀರಿನ ಮೇಲೆ ಅವಲಂಬಿತರಾಗಿದ್ದು, ಈಗಾಗಲೇ ಅರ್ಧ ಬೆಳೆ ಹಾನಿಯಾಗಿರುವ ಪರಿಸ್ಥಿತಿ ಇದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ, ರಾಜ್ಯ ಸರ್ಕಾರವು ತಮಿಳುನಾಡಿನ ಮಿತ್ರ ಪಕ್ಷವನ್ನು ತೃಪ್ತಿ ಪಡಿಸಲು ನೀರು ಬಿಡುಗಡೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇಂತಹ ಕಡಿಮೆ ನೀರಿನ ಸ್ಥಿತಿಯಲ್ಲಿ ಸರ್ವ ಪಕ್ಷ ಸಭೆ ಕರೆಯಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿದ ಅವರು, ಮುಖ್ಯಮಂತ್ರಿ ಅವರ ನಿಲುವಿನ ಮೇಲೆ ಪ್ರಶ್ನೆ ಎತ್ತಿದ್ದಾರೆ. ರೈತರ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.
ದೊಡ್ಡ ಮಟ್ಟದಲ್ಲಿ ಬಿಡದಿ ಹೋರಾಟ ಆರಂಭಿಸುವುದಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಘೋಷಿಸಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈ ಬಿಟ್ಟು ರೈತರ ಜಮೀನುಗಳನ್ನು ಉಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಅವರ ಬೆಂಬಲಿಗರು, ಒಂದು ರಾಜಕಾರಣಿಯ ಜಮೀನು ಇರುವುದರಿಂದ ಯೋಜನೆ ವಿರುದ್ಧ ಮಾತಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ ಎಂದು ಆರ್. ಅಶೋಕ ಆರೋಪಿಸಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ಹೆಚ್.ಡಿ. ಕುಮಾರಸ್ವಾಮಿ ಅವರದ್ದೆಂದು ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ತಾವು ಈಗಾಗಲೇ ಮೂರು ಬಾರಿ ಬಿಡದಿಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರ ರಾಜ್ಯದಲ್ಲಿ ಖಾಲಿ ಇರುವ ನಿವೇಶನಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನೂ ಒಂದುವರೆ ವರ್ಷದಲ್ಲಿ ಸರ್ಕಾರದಿಂದ ದೊಡ್ಡ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಮುಂದೆ ತಮ್ಮ ಸರ್ಕಾರ ಬಂದರೆ ಬಿಡದಿ ಟೌನ್ ಶಿಪ್ ಯೋಜನೆಯನ್ನು ರದ್ದುಪಡಿಸುವುದಾಗಿ ತಿಳಿಸಿದ್ದಾರೆ. ಆನೇಕಲ್ ನಲ್ಲಿ 9,000 ಎಕರೆ ಭೂಸ್ವಾಧೀನ ಹಾಗೂ ದೇವನಹಳ್ಳಿ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಗಳನ್ನು ಅವರು ವಿರೋಧಿಸಿದ್ದಾರೆ.
" ಒಂದು ಕಡೆ ಮರ ಕಡಿಯುವುದು, ಮತ್ತೊಂದು ಕಡೆ ನಡೆವುದು" ಎಂಬ ವಿರೋಧಾಭಾಸದ ನೀತಿಗಳಿಂದ ರಾಜ್ಯದಲ್ಲಿ ಪರಿಸರ ಹಾನಿಯಾಗುತ್ತಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.
Also Read:
ಸೂಪರ್ ಎಲ್ ನೀನೋ ಎಫೆಕ್ಟ್ ಗೆ ರಾಜ್ಯ ಸಜ್ಜಾಗಬೇಕು :ಡಿಸಿಎಂ ಜಿ.ಪರಮೇಶ್ವರ್ ಎಚ್ಚರಿಕೆ