<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ನನಗೂ ಬೇಕಾದ ಖಾತೆ ಸಿಗಲಿಲ್ಲ - ಸತೀಶ್ ಜಾರಕಿಹೊಳಿ ಹೊಸ ಬಾಂಬ್

ನನಗೂ ಬೇಕಾದ ಖಾತೆ ಸಿಗಲಿಲ್ಲ  - ಸತೀಶ್ ಜಾರಕಿಹೊಳಿ ಹೊಸ ಬಾಂಬ್
Summary: Amidst the issue of account sharing being a major debate in state politics, a new statement made by Minister Satish Jarkiholi has created a stir. "I also did not get the account I wanted. But I am neither sad nor happy," his words have led to a new debate in the political circle.

Balagavi News:

ಬೆಂಗಳೂರು ಜೂನ್ 5: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಭಿನ್ನಾಭಿಪ್ರಾಯ ಮತ್ತು ರಾಜೀನಾಮೆ ಚರ್ಚೆಗಳು ಜೋರಾಗಿರುವ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ರಾಜಕೀಯ ವಲಯದ ಗಮನ ಸೆಳೆದಿದೆ.

ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಜಾರಕಿಹೊಳಿ, ಪರಿಸ್ಥಿತಿಯನ್ನು ಅತಿಯಾಗಿ ಬಿಂಬಿಸುವ ಅಗತ್ಯವಿಲ್ಲ ಎಂಬ ಸಂದೇಶ ನೀಡಿದರು. "ಅವರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ ಆದರೆ ಈ ಇಡೀ ಪರಿಸ್ಥಿತಿಯನ್ನು ಸಮಾಧಾನ ಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ" ಎಂದು ಹೇಳಿದರು.

ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಕಾಂಗ್ರೆಸ್ ನಾಯಕತ್ವದ ಮೇಲೆ ನಂಬಿಕೆ ವ್ಯಕ್ತಪಡಿಸಿದರು. ಅವರು ಈ ಹೇಳಿಕೆ ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವ ಪ್ರಯತ್ನವಾಗಿ ಕಾಣುತ್ತಿದೆ.

Sponsored

ರಾಮಲಿಂಗಾ ರೆಡ್ಡಿ ರಾಜೀನಾಮೆ ಚರ್ಚೆ ತೀವ್ರವಾಗಿರುವ ಹೊತ್ತಲ್ಲೇ, ಸಿದ್ದರಾಮಯ್ಯ ಸಮಸ್ಯೆ ಬಗ್ಗೆ ಹರಿಸುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಮತ್ತು ಅಸಮಾಧಾನಗಳ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಹಾಗೂ ಕೆಲವು ಸಚಿವರ ಅಸಮಾಧಾನದ ಬಗ್ಗೆ ಮಾತನಾಡಿದವರು ಪರಿಸ್ಥಿತಿಯನ್ನು ನಿಭಾಯಿಸುವ ಸಂಪೂರ್ಣ ಸಾಮರ್ಥ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ಪ್ರಮೋಷನ್ ಅಥವಾ ಉತ್ತಮ ಖಾತೆಯ ನಿರೀಕ್ಷೆ ಇರುವುದು ಸಹಜ. ಆದರೆ ಎಲ್ಲರಿಗೂ ಬೇಕಾದುದನ್ನು ನೀಡುವುದು ಯಾವಾಗಲೂ ಸಾಧ್ಯವಾಗುವುದಿಲ್ಲ" ಎಂದು ಜಾರಕಿಹೊಳಿ ಹೇಳಿದ್ದಾರೆ. ಜೊತೆಗೆ, ತಮ್ಮ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದ ಅವರು, "ನನಗೆ ಯಾವುದೇ ಅಸಮಾಧಾನ ಇಲ್ಲ. ರಾಜೀನಾಮೆ ನೀಡುವ ಉದ್ದೇಶವೂ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಅವರ ಈ ಹೇಳಿಕೆ ಕಾಂಗ್ರೆಸ್ ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳ ಚರ್ಚೆ ನಡುವೆ ಮಹತ್ವ ಪಡೆದಿದ್ದು ಸರ್ಕಾರದಲ್ಲಿ ಸ್ಥಿರತೆ ಇದೆ ಎಂಬ ಸಂದೇಶವನ್ನು ರವಾನಿಸಿದಂತಾಗಿದೆ.

Sponsored

"ಎಲ್ಲರಿಗೂ ಬೇಕಾದ ಖಾತೆ ಸಿಗುವುದಿಲ್ಲ" ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟ ಖಾತೆ ಹಂಚಿಕೆ ಕುರಿತ ಅಸಮಾಧಾನಗಳ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಸಮತೋಲಿತ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನದ ಕುರಿತು ಮಾತನಾಡಿದ ಅವರು, "ರಾಜಕಾರಣದಲ್ಲಿ ಪ್ರಮೋಷನ್ ಅಥವಾ ಉನ್ನತ ಹುದ್ದೆಗಳ ಬಯಕೆ ಇರುವುದು ಸಾಮಾನ್ಯ. ಆದರೆ ಎಲ್ಲರಿಗೂ ಉನ್ನತ ಸ್ಥಾನ ಸಿಗುವುದಿಲ್ಲ. ಕೆಲವರಿಗೆ ಮಾತ್ರ ಅವಕಾಶ ಸಿಗುತ್ತದೆ ಈ ಎಲ್ಲ ಗೊಂದಲಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸಲಿದ್ದಾರೆ ಇನ್ನು ಒಂದು- ಎರಡು ದಿನ ಕಾಯೋಣ" ಎಂದು ಹೇಳಿದ್ದಾರೆ.

ಡಿಸಿಎಂ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿರುವ ಬಗ್ಗೆ ಪ್ರಶ್ನಿಸಿದಾಗ ಜಾರಕಿಹೊಳಿ ಮುಕ್ತವಾಗಿ ಪ್ರತಿಕ್ರಿಯಿಸಿ, "ಆಸೆ ಇತ್ತು, ಆದರೆ ಏನು ಮಾಡಲಿಕ್ಕೆ ಆಗಲ್ಲ. ಸಿಕ್ಕಿದ್ದಕ್ಕೆ ಸಮಾಧಾನ ಮತ್ತು ತೃಪ್ತಿ ಪಡಬೇಕು"ಎಂದು ಹೇಳಿದ್ದಾರೆ. ಅವರ ಈ ಮಾತುಗಳು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿವೆ.

ಇದೇ ವೇಳೆ ರಾಜೀನಾಮೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದ ಅವರು, "ರಾಜೀನಾಮೆ ಯಾಕೆ ಕೊಡಬೇಕು? ಅವರು ಅವಶ್ಯಕತೆ ಇಲ್ಲ. ನಮಗೆ ಯಾವ ಖಾತೆ ಇದ್ದೆಯೋ ಅದನೇ ಮುಂದುವರಿಸಿದ್ದಾರೆ. ನಾನು ನನ್ನ ಕೆಲಸ ಮಾಡುತ್ತೇನೆ" ಎಂದು ಸ್ಪಷ್ಟಪಡಿಸಿದರು.

Sponsored

ಸಚಿವರುಗಳಲ್ಲಿ ಮೊದಲು ನೊಂದವರು ನೀವು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವುದೇ ನೋವೂ ಇಲ್ಲ, ಸಂತೋಷವೂ ಇಲ್ಲ, ದುಃಖವೂ ಇಲ್ಲ ಎಂದು ಹೇಳುವ ಮೂಲಕ ಪ್ರಸ್ತುತ ರಾಜಕೀಯ ಹೈಡ್ರಾಮಾದ ನಡುವೆ ತಾವು ಸಂಪೂರ್ಣ ಸಮಚಿತ್ತದಿಂದ ಇರುವುದಾಗಿ ಈ ಮೂಲಕ ಹೇಳಿಕೊಂಡಿದ್ದಾರೆ. ಜಾರಕಿಹೊಳಿಯವರ ಈ ನಡೆ ಸಂಪುಟದ ಇತರ ರೆಬಲ್ ನಾಯಕರಿಗೆ ಪರೋಕ್ಷ ಸಂದೇಶ ರವಾನಿಸಿದಂತಿದೆ.

Also Read:

IND vs AFG: ವಿರಾಟ್ ಬಳಿಕ 3ನೇ ಸ್ಥಾನದಲ್ಲಿ ಯಾರು? ಐಪಿಎಲ್ ಸ್ಟಾರ್ ಗೆ ಚಾನ್ಸ್

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online