ಎಷ್ಟೇ ಮದ್ದು ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಈ ಒಂದು ಹೆಲ್ದಿ ಟ್ರಿಕ್ ಪಾಲಿಸಿ
ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಾಗಿಯೇ ಇದು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ. ಆದರೂ ಕೂಡ ಇಂದಿನ ಕಾಲದಲ್ಲಿ, ಅನಾರೋಗ್ಯಕರ ಜೀವನಶೈಲಿ ಮತ್ತು ಅನುಚಿತ ಆಹಾರ ಪದ್ಧತಿಗಳ ಅನುಕರಣೆ ಮಾಡುವುದರಿಂದ, ಅನೇಕ ರೀತಿಯ, ಆರೋಗ್ಯ ಸಂಬಂಧಿತ ಸಮಸ್ಯೆಗಳು ದೇಹದ ಮೇಲೆ ಪರಿಣಾಮ ಬೀರುತ್ತಿವೆ. ಅವುಗಳನ್ನು ಸರಿಯಾದ ಸಮಯಕ್ಕೆ ನಿಯಂತ್ರಿಸದಿದ್ದರೆ, ದೇಹದಲ್ಲಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆ ಮಿತಿಮೀರಿ ಬೆಳೆಯುತ್ತಿದ್ದು, ಇದನ್ನು ತಡೆಯುವುದು ಅನಿವಾರ್ಯವಾಗಿದೆ. ಆದರೆ ಈ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕೇವಲ ಒಂದು ತರಕಾರಿ ಸೇವನೆಯಿಂದ ಸಾಧ್ಯವಿದೆ. ಹಾಗಾದರೆ ಆ ತರಕಾರಿ ಯಾವುದು? ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಮಧುಮೇಹ ರೋಗಿಗಳಿಗೆ ಅಮೃತ:
ತರಕಾರಿಗಳು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುತ್ತವೆ. ಅದೇ ರೀತಿ ತೊಂಡೆಕಾಯಿ ಕೂಡ ತೂಕ ಇಳಿಸಲು, ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಜೊತೆಗೆ ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮಾತ್ರವಲ್ಲ, ತೊಂಡೆಕಾಯಿ ನಾರಿನಂಶದಿಂದ ಸಮೃದ್ಧವಾಗಿದ್ದು ಇದನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ವೇಗವಾಗಿ ಏರುವುದನ್ನು ತಡೆಯಲು ಸಹಾಯ ಮಾಡುತ್ತದೆ. ಇದು ವಿಶೇಷವಾಗಿ ಮಧುಮೇಹ ಇರುವವರಿಗೆ ಪ್ರಯೋಜನಕಾರಿಯಾಗಿದೆ. ಇದರ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದು ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ತಜ್ಞರು ಈ ತರಕಾರಿ ಮಧುಮೇಹ ರೋಗಿಗಳಿಗೆ ಅಮೃತವಿದ್ದಂತೆ ಎಂದು ಹೇಳುತ್ತಾರೆ.
ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಅದಕ್ಕಾಗಿಯೇ ಇದು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿರುತ್ತದೆ. ಅದರಲ್ಲಿಯೂ ಪ್ರತಿ ಋತುವಿಗೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು ಲಭ್ಯವಿರುತ್ತದೆ. ಅವು ಪೋಷಕಾಂಶಗಳಿಂದ ಸಮೃದ್ಧವಾಗಿರುವುದಲ್ಲದೆ ಆರೋಗ್ಯಕ್ಕೂ ಒಳ್ಳೆಯದು. ಆದರೆ ಇಂದಿನ ನಮ್ಮ ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆ, ಅನುಚಿತ ಆಹಾರ ಪದ್ಧತಿ, ಅನಾರೋಗ್ಯಕರ ಅಭ್ಯಾಸಗಳಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಮಧುಮೇಹವೂ ಅಂತಹ ಸಮಸ್ಯೆಗಳಲ್ಲಿ ಒಂದಾಗಿದೆ. ಇದನ್ನು ಸಮಯಕ್ಕೆ ನಿಯಂತ್ರಿಸದಿದ್ದರೆ, ಅದು ಹೃದಯ, ಮೂತ್ರಪಿಂಡಗಳು ಮತ್ತು ಶ್ವಾಸಕೋಶಗಳಂತಹ ಪ್ರಮುಖ ಅಂಗಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದರೆ ಇದಕ್ಕೆ ಕೇವಲ ಒಂದು ತರಕಾರಿ ಸೇವನೆ ಮಾಡುವುದರಿಂದ ಪರಿಹಾರ ಕಂಡುಕೊಳ್ಳಬಹುದು. ಹೌದು. ತೊಂಡೆಕಾಯಿಯನ್ನು (Ivy Gourd) ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಗೆ ರಾಮಬಾಣ:
ಇದಲ್ಲದೆ, ತೊಂಡೆಕಾಯಿ ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಉತ್ತಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು, ತೊಂಡೆಕಾಯಿಯನ್ನು ವಾರದಲ್ಲಿ ಒಂದು ಬಾರಿಯಾದರೂ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ಸೇವಿಸಬೇಕು. ಅಷ್ಟೇ ಅಲ್ಲ, ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆ ಇರುವವರು ಇದನ್ನು ಕಡ್ಡಾಯವಾಗಿ ಸೇವಿಸಬೇಕು. ಏಕೆಂದರೆ ಇದು ಜೀರ್ಣಾಂಗ ವ್ಯವಸ್ಥೆ ಆರೋಗ್ಯವಾಗಿರಲು ಸಹಕರಿಸುತ್ತದೆ. ಇದರ ಜೊತೆಗೆ ಚರ್ಮ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ಇದು ಪರಿಣಾಮಕಾರಿಯಾಗಿದೆ.
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:
ತೊಂಡೆಕಾಯಿಯಲ್ಲಿ ಸಾಕಷ್ಟು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿದ್ದು ಅನೇಕ ಗಂಭೀರ ಕಾಯಿಲೆಗಳಿಂದ ಮುಕ್ತಿ ಪಡೆಯಲು ಸಹಕಾರಿಯಾಗಿದೆ. ಮಾತ್ರವಲ್ಲ, ಈ ತರಕಾರಿಯಲ್ಲಿ ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ಗಳು ಬಹಳ ಕಡಿಮೆ ಇದ್ದು ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಜೊತೆಗೆ ಫೈಬರ್ನ ಉತ್ತಮ ಮೂಲವಾಗಿದೆ. ಇನ್ನು, ತೊಂಡೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ಇನ್ನಷ್ಟು ಓದಿರಿ :
ರಮೇಶ ಜಾರಕಿಹೊಳಿ: ಯತ್ನಾಳ್ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ, ವಿಜಯೇಂದ್ರ ಬಹಳಷ್ಟು ಕೆಳಗಿಳಿದಿದ್ದಾರೆ