<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಧಾರಾಕಾರ ಮಳೆಯಿಂದ ಇಳಕಲ್ ಜಲಾವೃತ : ವಾಹನ ಸವಾರರು, ಸಾರ್ವಜನಿಕರು ಪರದಾಟ

ಧಾರಾಕಾರ ಮಳೆಯಿಂದ ಇಳಕಲ್ ಜಲಾವೃತ : ವಾಹನ ಸವಾರರು, ಸಾರ್ವಜನಿಕರು ಪರದಾಟ
Summary: The roads in Ilakal have been flooded due to heavy rain, causing disruption to vehicular traffic. People's lives are disrupted due to the heavy rains, and scenes of the rain are going viral.

Belagavi News:

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕೇವಲ ಕೆಲವೇ ಸಮಯ ಭಾರಿ ಮಳೆಗೆ ಪ್ರಮುಖ ರಸ್ತೆಗಳ ಮೇಲೆ ಮಳೆ ನೀರು ಹರಿದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ದ್ವಿಚಕ್ರವಾಹನ ಸವಾರರು ಹಾಗೂ ಪಾದಚಾರಿಗಳು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಪರದಾಡಿದರು.

ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತ ಪರಿಣಾಮ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಚರಂಡಿಗಳ ಸಮರ್ಪಕ ನಿರ್ವಹಣೆಗೆ ಆಗ್ರಹಿಸಿದ್ದಾರೆ. ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಇಳಕಲ್ ನಲ್ಲಿ ಸುರಿದ ಭಾರಿ ಮಳೆಯ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವರುಣನ ಅಬ್ಬರದ ಬಗ್ಗೆ ಸಾರ್ವಜನಿಕರು ವ್ಯಾಪಕವಾಗಿ ಚರ್ಚಿಸುತ್ತಿದ್ದಾರೆ.

ಇಳಕಲ್ ನಲ್ಲಿ ವರುಣನ ಅಬ್ಬರ - 6 - 7 ಗಂಟೆಗಳ ಮಳೆಗೆ ರಸ್ತೆಗಳು ಜಲಾವೃತ, ಜನ ಜೀವನ ಅಸ್ತವ್ಯಸ್ತ :

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ ಆರರಿಂದ ಏಳು ಗಂಟೆಗಳ ಕಾಲ ಸುರಿದ ಬಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ಹಲವು ಕಡೆ ಸುಮಾರು ಎರಡು ಅಡಿ ಎಷ್ಟು ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತು.

ಮಳೆ ನೀರು ರಸ್ತೆಗಳಲ್ಲಿ ತುಂಬಿಕೊಂಡಿದ್ದರಿಂದ ಕಾರು, ಬೈಕು ಹಾಗೂ ಇತರೆ ವಾಹನ ಸವಾರರು ಪರದಾಡಬೇಕಾಯಿತು. ಕೆಲ ವಾಹನಗಳು ನೀರಿನಲ್ಲಿ ಸಿಲುಕಿದರೆ, ಪಾದಚಾರಿಗಳು ಕೂಡ ಸುರಕ್ಷಿತವಾಗಿ ಸಂಚರಿಸಲು ಹರಸಾಹಸ ಪಟ್ಟರು.

ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಸುತ್ತಮುತ್ತ ನಿಂತಿದ್ದು, ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆ ಕೊರತೆಯಿಂದ ಮಳೆ ನೀರು ಬೇಗನೆ ಹರಿದು ಹೋಗದೆ ರಸ್ತೆಗಳಲ್ಲಿ ನಿಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಿರಂತರ ಮಳೆಯಿಂದ ನಗರದ ಹಲವು ಪ್ರದೇಶಗಳಲ್ಲಿ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ವ್ಯಾಪಾರ ವಹಿವಾಟು ಮತ್ತು ದೈನಂದಿನ ಸಂಚಾರಕ್ಕೂ ತೊಂದರೆಯಾಗಿದೆ. ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ನಗರದ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ರಸ್ತೆಗಳ ಮೇಲೆ ನೀರು ತುಂಬಿ ನಿಂತ ಪರಿಣಾಮ ಕಾರ್ ಬೈಕೋ ಹಾಗೂ ಇತರೆ ವಾಹನಗಳು ಸಂಚರಿಸಲು ಸಾಧ್ಯವಾಗದೆ ಸವಾರರು ಪರದಾಡುವಂತಾಯಿತು.

ಇದೇ ವೇಳೆ ಹಲವು ವಸತಿ ಪ್ರದೇಶಗಳಲ್ಲೂ ಮಳೆ ನೀರು ಮನೆಗಳ ಬಾಗಿಲಿನವರೆಗೆ ನುಗ್ಗಿ ನಿಂತಿದ್ದು, ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ಮಳೆ ನೀರು ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಿತ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online