<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ದಾವಣಗೆರೆಯಲ್ಲಿ ಅಕ್ರಮ ಧಾನ್ಯ ಸಾಗಾಟ ಬಯಲು ; 200 ಕ್ವಿಂಟಲ್ ಪಡಿತರ ಅಕ್ಕಿ ಮತ್ತು ರಾಗಿ ವಶಕ್ಕೆ

ದಾವಣಗೆರೆಯಲ್ಲಿ ಅಕ್ರಮ ಧಾನ್ಯ ಸಾಗಾಟ ಬಯಲು ; 200 ಕ್ವಿಂಟಲ್ ಪಡಿತರ ಅಕ್ಕಿ ಮತ್ತು ರಾಗಿ ವಶಕ್ಕೆ
Summary: Authorities have seized 200 quintals of ration rice and millet that were being smuggled in Davangere. Here is the complete information on the illegal grain smuggling case.

Belagavi News :

ಬಡವರಿಗೆ ವಿತರಿಸಬೇಕಿದ್ದ ಪಡಿತರ ಧಾನ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕ್ವಿಂಟಲ್ ಪಡಿತರಹಕ್ಕಿ ಮತ್ತು ರಾಗಿಯನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ರಾಗಿ ಸಾಧಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಧಾನ್ಯಗಳ ಜೊತೆಗೆ ಸಾಗಾಣೆಗೆ ಬಳಸಲಾಗುತ್ತಿದ್ದ ಲಾರಿಯನ್ನೂ ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ ನಗರದ ಶಾಮನೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ವಿದ್ಯಾನಗರ ಠಾಣೆಯ ಪಿಎಸ್ಐ ಸಚಿನ್ ಬಿರಾದರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಅಕ್ರಮ ಪಡಿತರ ಧಾನ್ಯ ಸಾಗಾಣೆ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಡವರಿಗೆ ಮೀಸಲಾದ ಪಡಿತರ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಾಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣ ಇದೀಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆಯಲ್ಲಿ ಅಕ್ರಮ ಪಡಿತರ ಧಾನ್ಯ ಸಾಗಾಣಿ ಪ್ರಕರಣ - 200 ಕ್ವಿಂಟಾಲ್ ಅಕ್ಕಿ & ರಾಗಿ ವಶ, ಚಾಲಕ ಬಂಧನ :

ಅಕ್ರಮ ಪಡಿತರ ಅಕ್ಕಿ ಮತ್ತು ರಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಹರಿಹರ ದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಲಾರಿಯನ್ನು ಪರಿಶೀಲಿಸಿದಾಗ ಅದರಲ್ಲಿ ಸುಮಾರು 200 ಕ್ವಿಂಟಾಲ್ ಅಕ್ಕಿ ಮತ್ತು ರಾಗಿ ಪತ್ತೆಯಾಗಿದೆ. ಅಕ್ರಮವಾಗಿ ಅಕ್ಕಿ ಮತ್ತು ರಾಗಿಯನ್ನು ಸಂಗ್ರಹಿಸಿ ಲಾರಿ ಮೂಲಕ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲಾರಿಯೊಂದಿಗೆ ಚಾಲಕ ಜಬಿವುಲ್ಲಾ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಧಾನ್ಯ ಹಾಗೂ ಲಾರಿಯನ್ನು ವಿದ್ಯಾನಗರ ಪಾಲಿಸಲು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಪಡಿತರ ಧಾನ್ಯ ಸಾಗಾಣೆಯ ಹಿಂದಿರುವವರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಡವರಿಗೆ ಮೀಸಲಾದ ಪಡಿತರ ಧಾನ್ಯ ದುರುಪಯೋಗದ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.

ಗಂಗಾವತಿಯಲ್ಲಿ ಭರ್ಜರಿ ಕಾರ್ಯಾಚರಣೆ - 35.8 ಟನ್ ಪಡಿತರ ಅಕ್ಕಿ ಜಪ್ತಿ , ಅಕ್ರಮ ಸಾಗಾಣಿ ವಿರುದ್ಧ ಪ್ರಕರಣ :

ಗಂಗಾವತಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವರ್ಷಕ್ಕೆ ಪಡೆದಿದ್ದಾರೆ. ಸುಮಾರು 35.8 ಟನ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಬಡವರಿಗೆ ವಿತರಿಸಲು ರಾಜ್ಯ ಸರ್ಕಾರದ ನಾಗರಿಕ ಸರಬರಾಜು ಇಲಾಖೆಯ ಮೂಲಕ ನೀಡಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7ರ ಉಲ್ಲಂಘನೆ ಆರೋಪ ದಡಿ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಅಕ್ರಮ ಪಡಿತರ ಸಾಗಾಣೆ ಕುರಿತು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಹಾರ ಇಲಾಖೆಯ ನಿರೀಕ್ಷಕ ಶೇಖರಪ್ಪ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು.

ಕೊಪ್ಪಳದ ಕೂಕನಪಳ್ಳಿಯಿಂದ ಮಾನ್ವಿಯ ರೈಸ್ ಮಿಲ್ ಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ವಿವಿಧ ಸಂಘಟನೆಗಳ ಪ್ರಮುಖರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಲ್ಲಿದ್ದ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.

ವಾಹನದಲ್ಲಿದ್ದ ಸರಕು ದಾಖಲೆಗಳು ಮತ್ತು ಚಾಲಕ ನೀಡಿದ ಬಿಲ್ ಗಳನ್ನು ಪರಿಶೀಲಿಸಿದಾಗ ವ್ಯತ್ಯಾಸ ಕಂಡು ಬಂದಿದ್ದು, ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳು ಧಾನ್ಯವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online