Belagavi News:
ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ. ನಿಗದಿತ ಸಮಯಕ್ಕಿಂತ ಮೊದಲೇ ನಿರ್ವಹಣಾ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರವನ್ನು ಎಂದಿನಂತೆ ಆರಂಭಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸಹಿತಗೊಳಿಸಲಾಗುವುದು ಎಂದು ಬಿಎಂಆರ್‌ಪಿಎಲ್ ಮೇ 29ರಂದು ಪ್ರಕಟಣೆ ಹೊರಡಿಸಿತು.
ಆದರೆ ಕಾಮಗಾರಿ ನಿರೀಕ್ಷೆಗಿಂತ ವೇಗವಾಗಿ ಪೂರ್ಣಗೊಂಡಿದ್ದು, ಯಾವುದೇ ಸಂಚಾರ ಅಗತ್ಯವಿಲ್ಲದೆ ಇಂದು ಬೆಳಗ್ಗೆ ಏಳು ಗಂಟೆಯಿಂದಲೇ ನಿರ್ಣಯ ಮಾರ್ಗದ ಎಲ್ಲಾ ಮೆಟ್ರೋ ಸೇವೆಗಳು ಸಂಪೂರ್ಣವಾಗಿ ಲಭ್ಯವಿವೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಎಂದಿನಂತೆ ಸದುಪಯೋಗಪಡಿಸಿಕೊಳ್ಳಬಹುದು ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ನಿರ್ವಹಣಾ ಕಾಮಗಾರಿಗಳ ಕಾರಣದಿಂದ ಕೆಲ ನಿಲ್ದಾಣಗಳ ನಡುವೆ ಸಂಚಾರ ವೇದಿಯ ಉಂಟಾಗುವ ಸಾಧ್ಯತೆಯ ಬಗ್ಗೆ ಈ ಹಿಂದೆ ಮಾಹಿತಿ ನೀಡಲಾಗಿತ್ತು. ಇದೀಗ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ ಪ್ರಯಾಣಿಸಬಹುದಾಗಿದೆ.
ಬೆಂಗಳೂರು ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಿದ್ದು, ಸೇವೆಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭಗೊಂಡಿರುವುದು ಪ್ರಯಾಣಿಕರಿಗೆ ದೊಡ್ಡ ನಿರಾಳತೆ ತಂದಿದೆ.
ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಹತ್ವದ ಮಾಹಿತಿ ನೀಡಿದೆ. ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ಮೇ 31ರ ಮೆಟ್ರೋ ರೈಲು ಸಂಚಾರದ ವೇಳೆಯಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ಬಿಎಂಆರ್‌ಪಿಎಲ್ ಪ್ರಕಟಣೆ ಪ್ರಕಾರ, ಕಾಮಗಾರಿಗಳನ್ನು ಸುರಕ್ಷಿತವಾಗಿ ಹಾಗೂ ಸುಗಮವಾಗಿ ನಿರ್ವಹಿಸುವ ಉದ್ದೇಶದಿಂದ ದೀಪಾಂಜಲಿ ನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸಂಚಾರವನ್ನು ಮೇ 31 ರಂದು ಬೆಳಿಗ್ಗೆ 7:00 ಯಿಂದ 9:00 ವರೆಗೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.
ಈ ಅವಧಿಯಲ್ಲಿ ಮೇಲ್ಕಂಡ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಲಭ್ಯವಿರುವುದಿಲ್ಲ ಆದ್ದರಿಂದ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮುಂಚಿತವಾಗಿಯೇ ರೂಪಿಸಿಕೊಳ್ಳುವಂತೆ ಮನವಿ ಮಾಡಿದೆ.
ನೇರಳೆ ಮಾರ್ಗವು ಬೆಂಗಳೂರಿನ ಅತ್ಯಂತ ಜನನಿಬಿಡ ಮೆಟ್ರೋ ಮಾರ್ಗಗಳಲ್ಲಿ ಒಂದಾಗಿದ್ದು, ಪ್ರತಿದಿನ ಸಾವಿರಾರು ಪ್ರಯಾಣಿಕರು ಈ ಸೇವೆಯನ್ನು ಬಳಸುತ್ತಾರೆ. ಹೀಗಾಗಿ ತಾತ್ಕಾಲಿಕ ಸಂಚಾರ ವ್ಯಥೆಯದ ಬಗ್ಗೆ ಮುಂಚಿತ ಮಾಹಿತಿ ನೀಡಿರುವ ಬಿಎಮ್ಆರ್‌ಪಿಎಲ್ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಬಳಸುವಂತೆ ಸೂಚಿಸಿದೆ. ನಿರ್ವಹಣಾ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಮೆಟ್ರೋ ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿದೆ ಎಂದು ಸಂಸ್ಥೆ ತಿಳಿದಿದೆ.
29ರಂದು ಬಿಎಂಆರ್‌ಪಿಎಲ್ ಹೊರಡಿಸಿದ್ದ ಪ್ರಕಟಣೆಯಲ್ಲಿ ಅತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ತುರ್ತು ನಿರ್ವಹಣಾ ಕಾಮಗಾರಿಗಳ ಕಾರಣದಿಂದ ದೀಪಾಂಜಲಿ ನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಗಳ ನಡುವೆ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿತು.
ಇದೇ ವೇಳೆ ೯ ಗಂಟೆಯ ನಂತರ ಇಡೀ ನಿರ್ಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಮೆಟ್ರೋ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ನಿರ್ವಹಣಾ ಕಾಮಗಾರಿಗಳು ನಿರೀಕ್ಷೆಗಿಂತ ವೇಗವಾಗಿ ಮತ್ತು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನಿಗದಿತ ವೇಳೆಗೆ ಕಾಯದೆ ಬೆಳಗ್ಗೆ ಏಳು ಗಂಟೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಪೂರ್ಣವಾಗಿ ಆರಂಭಿಸಲಾಗಿದೆ.
ಈ ಬೆಳವಣಿಗೆಯಿಂದ ಭಾನುವಾರದ ಬೆಳಿಗ್ಗೆ ಪ್ರಯಾಣಿಸಲು ಯೋಜಿಸಿದ್ದ ಸಾವಿರಾರು ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗಿದ್ದು, ಯಾವುದೇ ಸಂಚಾರ ವ್ಯಥೆಯವಿಲ್ಲದೆ ಸೇವೆಗಳು ಲಭ್ಯವಾಗಿವೆ. ಪ್ರಯಾಣಿಕರು ನೇರಳೆ ಮಾರ್ಗದ ಮೆಟ್ರೋ ಸೇವೆಯನ್ನು ಎಂದಿನಂತೆ ಬಳಸಬಹುದು ಎಂದು ಬಿಎಂಆರ್‌ಪಿಎಲ್ ತಿಳಿಸಿದೆ.
ಭಾನುವಾರದ ರಜೆ ದಿನವೇ ನೆರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತೆಯ ಉಂಟಾಗಲಿದೆ ಎಂಬ ಬಿ ಎಂ ಆರ್ ಸಿ ಎಲ್ ಪ್ರಕಟಣೆ ಪ್ರಯಾಣಿಕರಲ್ಲಿ ನಿರಾಳತೆ ಮೂಡಿಸಿದೆ. ವಾರಾಂತ್ಯದಲ್ಲಿ ಕುಟುಂಬ ಸ್ನೇಹಿತರು ಹಾಗೂ ವಿವಿಧ ಕಾರ್ಯಕ್ರಮಗಳಿಗೆ ತೆರಳಲು ಮೆಟ್ರೋ ಅವಲಂಬಿಸಿದ್ದ ಸಾವಿರಾರು ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿತರಾಗಿದ್ದರು.
ಆದರೆ ನಿರ್ವಹಣಾ ಕಾಮಗಾರಿಗಳು ನಿಗದಿತ ಸಮಯಕ್ಕಿಂತ ಮೊದಲೇ ಯಶಸ್ವಿ ಪೂರ್ಣಗೊಂಡಿರುವುದರಿಂದ ಬಿ ಎಂ ಆರ್ ಸಿ ಎಲ್ ಘೋಷಿಸಿರುವುದು ಪ್ರಯಾಣಿಕರಿಗೆ ದೊಡ್ಡ ನಿರಾಳತೆಯನ್ನು ತಂದಿದೆ. ಬೆಳಗ್ಗೆ 9:00ಯವರೆಗೆ ಕಾಯಬೇಕಿದ್ದ ಮೆಟ್ರೋ ಸೇವೆಗಳು ಬೆಳಿಗ್ಗೆ ಏಳು ಗಂಟೆಯಿಂದಲೇ ಪುನರ್ ಆರಂಭಗೊಂಡಿರುವುದರಿಂದ ವಾರಾಂತ್ಯದ ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೆ ತಮ್ಮ ಪ್ರಯಾಣವನ್ನು ಮುಂದುವರಿಸಲು ಸಾಧ್ಯವಾಗಿದೆ.
BMRCL ನ ಈ ತ್ವರಿತ ಕ್ರಮ ಮತ್ತು ಕಾಮಗಾರಿಯ ಶೀಘ್ರ ಪೂರ್ಣಗೊಳಿಸುವಿಕೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾನುವಾರದ ಸಂಚಾರ ಯೋಜನೆಗಳು ಅಡ್ಡಿಯಾಗದಿರುವುದು ಹಲವರಿಗೆ ಸಂತಸ ತಂದಿದೆ.
Also Read:
IPL 2026: ಕಿಂಗ್ ಕೊಹ್ಲಿ ದಾಖಲೆ ಸಮಬಲ ಮಾಡಿದ ಸಾಯಿ ಸುದರ್ಶನ್, ಐಪಿಎಲ್ ನಲ್ಲಿ ಹೊಸ ಇತಿಹಾಸ