<?= $pageTitle ?>
Logo
ಮುಖಪುಟ ಓದುವುದು ಕೇಳು
Sports

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ : ಕನ್ನಡಿಗರಿಗೆ ಸ್ಥಾನ

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ : ಕನ್ನಡಿಗರಿಗೆ ಸ್ಥಾನ
Summary: ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ, ಆದ್ದರಿಂದ ಕೆಎಲ್ ರಾಹುಲ್ ನಾಯಕತ್ವ ವಹಿಸಿಕೊಂಡಿದ್ದರು. ಈ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತು. ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ಭಾರತ ತಂಡ ಪ್ರಕಟಗೊಂಡಿದೆ.
BELAGAVI NEWS :

ನ್ಯೂಜಿಲೆಂಡ್​ ವಿರುದ್ಧದ ಏಕದಿನ ಸರಣಿಗಾಗಿ ಪ್ರಕಟಗೊಂಡಿರುವ 15 ಸದಸ್ಯರ ತಂಡದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ. ವಿಕೆಟ್​ ಕೀಪರ್​ ಆಗಿ ಕೆಎಲ್​ ರಾಹುಲ್​ ಮತ್ತು ವೇಗದ ಬೌಲರ್​ ಆಗಿ ಪ್ರಸಿದ್ಧ್​ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ರಾಹುಲ್​ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಕಿವೀಸ್​ ವಿರುದ್ಧದ ಪಂದ್ಯದಲ್ಲೂ ಅವರೇ ವಿಕೆಟ್​ ಕೀಪರ್​ ಆಗಿ ಮುಂದುವರೆಯುವ ಸಾಧ್ಯತೆಗಳಿವೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಂದು ಆರಂಭವಾಗಲಿದೆ.

ಮೊದಲ ಪಂದ್ಯ ವಡೋದರಾದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಜನವರಿ 14 ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ಜನವರಿ 18 ರಂದು ಇಂದೋರ್​ನಲ್ಲಿ ನಡೆಯಲಿದೆ. ನಂತರ ಉಭಯ ತಂಡಗಳು ಜ.21 ರಿಂದ ಜ.30ರ ವರೆಗೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿವೆ.

ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿ.ಕೀ), ಇಶಾನ್​ ಕಿಶನ್​, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅಕ್ಷರ್​ ಪಟೇಲ್​. ರಿಂಕು ಸಿಂಗ್​. ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್ ಮತ್ತು ಯಶಸ್ವಿ ಜೈಸ್ವಾಲ್. ಜ.11 ರಿಂದ ಪ್ರಾರಂಭವಾಗಲಿರುವ ನ್ಯೂಜಿಲೆಂಡ್​ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಇಂದು ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ.

ರೋಹಿತ್​ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಸಹ ತಂಡದಲ್ಲಿದ್ದಾರೆ. ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್​ ಅಯ್ಯರ್​ ಸಹ ವಾಪಾಸ್​ ಆಗಿದ್ದಾರೆ. ಅಲ್ಲದೆ​ ಉಪನಾಯಕನಾಗಿ ನೇಮಕಗೊಂಡಿದ್ದಾರೆ. ಇನ್ನು ಶುಭಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ, ಆದ್ದರಿಂದ ಕೆಎಲ್ ರಾಹುಲ್ ನಾಯಕತ್ವ ವಹಿಸಿಕೊಂಡಿದ್ದರು. ಈ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಗಿಲ್​ ಫಿಟ್​ ಆಗಿದ್ದ ತಂಡಕ್ಕೆ ವಾಪಸ್​ ಆಗಿದ್ದಾರೆ. ಮತ್ತೊಂದೆಡೆ ಉಪನಾಯಕನಾಗಿ ಆಯ್ಕೆ ಆಗಿರುವ ಅಯ್ಯರ್​ ಫಿಟ್ ಎಂದು ಸಾಭಿತಾದರೆ ಮಾತ್ರ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಸಿರಾಜ್​ ಸಹ ತಂಡಕ್ಕೆ ಮರಳಿದ್ದಾರೆ.

ಇನ್ನಷ್ಟು ಓದಿರಿ:
ನಾಳೆಯಿಂದ ಬೆಂಗಳೂರು ಓಪನ್‌ ಟೆನ್ನಿಸ್ ಆರಂಭ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online