Belagavi News :
ಭಾರತದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಹೋರಾಟದ ಕುರಿತು ವಿಶ್ವಸಂಸ್ಥೆ ಪ್ರತಿಕ್ರಿಯಿಸಿದೆ. NEET ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹಿಸಿ ಯುವಕರು ನಡೆಸಿದ ಪ್ರತಿಭಟನೆಗಳ ಬಗ್ಗೆ ವಿಶ್ವಸಂಸ್ಥೆ ಗಮನ ಹರಿಸಿದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರು, ಭಾರತದಲ್ಲಿ ನಡೆದ ಪ್ರತಿಭಟನೆಗಳ ಕುರಿತು ಅರಿವಿದೆ ಎಂದು ತಿಳಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಯಸುವವರಿಗೆ ಯಾವುದೇ ಕಿರುಕುಳ, ಬಂಧನ ಅಥವಾ ದಾಳಿಯ ಭೀತಿ ಇಲ್ಲದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವುದು ಮುಖ್ಯ ಎಂದು ಹೇಳಿದ್ದಾರೆ.
ಭಾರತದಲ್ಲಿ ಯುವಕರು ನಡೆಸಿದ ಪ್ರತಿಭಟನೆಗಳ ಕುರಿತು ವಿಶ್ವಸಂಸ್ಥೆಯ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಸಿದ ಡುಜಾರಿಕ್, ವಿಶ್ವದ ಎಲ್ಲೆಡೆ ಇರುವಂತೆ ಪ್ರತಿಭಟನಾಕಾರರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸುವುದು ಮುಖ್ಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
NEET ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು ಹಾಗೂ ಶಿಕ್ಷಣ ನಕ್ಷತ್ರದ ಸುಧಾರಣೆಗೆ ಆಗ್ರಹಿಸಿ ದೇಶದ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸಿದ್ದರು. ಈ ಹೋರಾಟ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿದೆ.
NEET protest update - ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ವಿದ್ಯಾರ್ಥಿಗಳ ಹೋರಾಟ ಅಂತ್ಯ? :
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ವಿರುದ್ಧ ತಿಂಗಳ ಕಾಲ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಇದೀಗ ಅಂತ್ಯಗೊಂಡಿದೆ ಎಂದು ಪ್ರತಿಭಟನಾಕಾರರು ಘೋಷಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬಳಿಕ ಹೋರಾಟಕ್ಕೆ ತೆರೆ ಬಿದ್ದಿದೆ ಎಂದು ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಹೇಳಿಕೆಯೊಂದರ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ರೂಪಗೊಂಡ ಕಾಕ್ರೋಚ್ ಜನತಾ ಪಕ್ಷ ನೇತೃತ್ವದಲ್ಲಿ ಆರಂಭವಾದ ಈ ಆಂದೋಲನ, ಕೆಲವೇ ದಿನಗಳಲ್ಲಿ ದೊಡ್ಡ ಮಟ್ಟದ ವಿದ್ಯಾರ್ಥಿ ಚಳುವಳಿಯಾಗಿ ರೂಪಗೊಂಡಿತು ಎಂದು ಹೇಳಲಾಗಿದೆ.
ಜುಲೈ 20 ರಂದು ದೆಹಲಿಯ ಜಂತರ್ ಮಂತರ್ ನಿಂದ ಸಂಸತ್ ಭವನದವರೆಗೆ ನಡೆದ ಪ್ರತಿಭಟನ ಮೆರವಣಿಗೆಯ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ದೇಶದಾದ್ಯಂತ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿತ್ತು.
ಪ್ರತಿಭಟನಾಕಾರರ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, NEET ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಹಾಗೂ ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದರು. ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟದ ಅಂತ್ಯಗೊಂಡಿದೆ ಎಂದು ಪ್ರತಿಭಟನಾ ಸಂಘಟನೆ ತಿಳಿಸಿದೆ.
ಆತ್ಮಹತ್ಯೆ ಮಾಡಿಕೊಂಡ NEET ಆಕಾಂಕ್ಷಿಗಳ ಕುಟುಂಬಗಳಿಗೆ ಪರಿಹಾರ, ಪ್ರತಿಭಟನೆ ವೇಳೆ ದಾಖಲಾದ ಪ್ರಕರಣಗಳ ಹಿಂಪಡೆಯುಕೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಒಪ್ಪಂದಕ್ಕೆ ಬಂದಿರುವುದಾಗಿ ತಿಳಿಸಲಾಗಿದೆ. ಈ ಬೆಳವಣಿಗೆಯನ್ನು ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಇದನ್ನು ಪ್ರಜಾಪ್ರಭುತ್ವದ ಗೆಲುವು ಎಂದು ಬಣ್ಣಿಸಿವೆ.