Belagavi News:
ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಜ್ಜಾಗಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ವಿಮಾನ ಹಾಗೂ ಪ್ರಯಾಣಿಕರ ಸಾಮಗ್ರಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.
ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು. ಪ್ರಯಾಣಿಕರಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕ ಉಂಟಾಯಿತು. ಇಂಡಿಗೋ ವಿಮಾನಕ್ಕೆ ಬಂದ ಬಾಂಬ್ ಬೆದರಿಕೆ ಸಂದೇಶದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು. ಬೆದರಿಕೆ ನೀಡಿದ ವ್ಯಕ್ತಿಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸಜ್ಜಾಗಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಯಿತು. ಬೆಂಗಳೂರಿನಿಂದ ಅಹ್ಮದಾಬಾದ್ ಗೆ ತೆರಳಬೇಕಿದ್ದ 6E-6423 ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದ್ದು. ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು.
ಮಾಹಿತಿಯ ಪ್ರಕಾರ, ವಿಮಾನದ ಸಿಬ್ಬಂದಿ ಬಳಸುವ ಲ್ಯಾವೆಟರಿಯಲ್ಲಿ "dont go Bomb hi please" ಎಂದು ಬರೆದಿದ್ದ ಪತ್ರ ಪತ್ತೆಯಾಗಿದೆ. ಬಾಂಬ್ ಸಂದೇಶ ಕಂಡು ಬಂದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಿ, ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಯಿತು.
ಭದ್ರತಾ ಸಿಬ್ಬಂದಿ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ನಡೆದ ಪರಿಶೀಲನೆಯಲ್ಲಿ ಯಾವುದೇ ಸ್ಪೋಟಕ ವಸ್ತು ಪತ್ತೆಯಾಗಿಲ್ಲ. ಇದರೊಂದಿಗೆ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು. ನಂತರ ವಿಮಾನ ಕಾರ್ಯಚರಣೆಗಳನ್ನು ಮುಂದುವರಿಸಲು ಅನುಮತಿ ನೀಡಲಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಕೆಲಕಾಲ ಭದ್ರತಾ ಕಟ್ಟೆಚ್ಚರ ವಹಿಸಲಾಗಿದ್ದು. ಇಂಡಿಗೋ ಸಂಸ್ಥೆ ನೀಡಿದ ದೂರಿನ ಆಧಾರದ ಮೇಲೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆದರಿಕೆ ಪತ್ರ ಬರೆದ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಇಂತಹ ಹುಸಿ ಬಾಂಬ್ ಬೆದರಿಕೆಗಳು ಭದ್ರತಾ ವ್ಯವಸ್ಥೆಗೆ ಸವಾಲಾಗುವುದರ ಜೊತೆಗೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸುತ್ತವೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.