<?= $pageTitle ?>
Logo
ಮುಖಪುಟ ಓದುವುದು ಕೇಳು
Education

ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷೆಯಲ್ಲಿ ಅಕ್ರಮ: ಕೋಲಾರದಲ್ಲಿ ಅಕ್ರಮ ಬಯಲು

ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷೆಯಲ್ಲಿ ಅಕ್ರಮ: ಕೋಲಾರದಲ್ಲಿ ಅಕ್ರಮ ಬಯಲು
Summary: A serious examination irregularity that took place at the regional examination centre of Karnataka State Open University (KSOU) in Kolar has come to light. There have been allegations that students were being allowed to cheat by taking money, raising questions about the role of invigilators. The video related to this incident has gone viral on social media and has led to heated debate in the education sector.

belahgavi news :

ಕೋಲಾರ, ಮೇ 26: ಕೋಲಾರದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಬಾರಿ ಅಕ್ರಮವೊಂದು ಬಯಲಿಗೆ ಬಂದಿದೆ.

ಕೋಲಾರದ ಟಮಕಾ ಬಳಿಯಿರುವ ಮುಕ್ತ ವಿವಿಯ ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ ಬಿಎ, ಬಿಕಾಂ, ಬಿಎಸ್ಸಿ ಮತ್ತು ಬಿಬಿಎ ಸೇರಿದಂತೆ ವಿವಿಧ ಪದವಿ ಪರೀಕ್ಷೆಗಳು ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲು ಮಾಡಲು ಅವಕಾಶ ನೀಡಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಇನ್ವಿಜಿಲೇಟರ್ ಗಳೇ ಈ ಅಕ್ರಮಕ್ಕೆ ಸಹಕರಿಸಿರುವುದಾಗಿ ಆರೋಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮಾಸ್ ಕಾಪಿಗೆ ಅವಕಾಶ ನೀಡಲಾಗುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು , ಶಿಕ್ಷಣ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಇಲ್ಲಿನ ಪರೀಕ್ಷಾ ಮೇಲ್ವಿಚಾರಕರು (ಇನ್ವಿಜಿಲೇಟರ್ ಗಳು) ಭಾರಿ ವಸೂಲಿಗೆ ಇಳಿದಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಹಾಗೂ ಪುಸ್ತಕಗಳನ್ನು ಕೊಂಡೊಯ್ಯಲು ಅನುಮತಿ ನೀಡಲು ಸಲುವಾಗಿ ಪ್ರತಿ ಪೇಪರ್ ಗೆ ₹1,000 ರಿಂದ ₹1,500 ವರೆಗೆ ದರ ನಿಗದಿ ಮಾಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಆರೋಪಗಳು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಮೇಲೆಯೇ ಪ್ರಶ್ನೆ ಎತ್ತುವಂತಾಗಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಣ ನೀಡಿದ ವಿದ್ಯಾರ್ಥಿಗಳಿಗೆ ಯಾವುದೇ ಭಯವಿಲ್ಲದೆ ಮಾಸ್ ಕಾಪಿ ಮಾಡಲು ಇನ್ವಿಜಿಲೇಟರ್ ಗಳೇ ನೇರವಾಗಿ ಸಹಕರಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಸದ್ಯ ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಂದ ಇನ್ವಿಜಿಲೇಟರ್ ಗಳಾದ ವಿನೋದ್ ಸಿಂಗ್, ರಾಜೇಂದ್ರ, ಪುನೀತ್ ಮತ್ತು ನಂದಿನಿ ಎಂಬವರು ರಾಜಾರೋಷವಾಗಿ ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ಘಟನೆ ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

Also Read:

IPL ಕ್ವಾಲಿಫೈಯರ್ ೧:ಆರ್ಸಿಬಿ ವರ್ಸಸ್ ಜಿಟಿ ನಡುವೆ ಹೋರಾಟ ತೀವ್ರ ಧರ್ಮಶಾಲಾ ಪಿಚ್ ನಲ್ಲಿ ರೋಚಕ ಫೈಟ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online