<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಸಿದ್ದರಾಮಯ್ಯ ರಾಜೀನಾಮೆ ಮಾತು ಸತ್ಯವೇ ? ಕೆ ಎನ್ ರಾಜಣ್ಣ ಸ್ಪಷ್ಟನೆ

ಸಿದ್ದರಾಮಯ್ಯ ರಾಜೀನಾಮೆ ಮಾತು ಸತ್ಯವೇ ? ಕೆ ಎನ್ ರಾಜಣ್ಣ ಸ್ಪಷ್ಟನೆ
Summary: Minister KN Rajanna has made a significant statement that CM Siddaramaiah is ready to resign. This statement has caused a new stir in Karnataka politics.

Belagavi news:

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನ ನಿರ್ಧಾರಕ್ಕೆ ಬದ್ಧರಾಗಿದ್ದಾರೆ ಎಂದು ಮಾಜಿ ಸಚಿವರಾದಂತಹ ಕೆಎನ್ ರಾಜಣ್ಣ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲವನ್ನು ಹೆಚ್ಚಿಸಿದೆ.

ಮಾಜಿ ಸಚಿವ ರಾಜಣ್ಣ ಅವರ ಪ್ರಕಾರ, ಪಕ್ಷದ ಹೈಕಮಾಂಡ್ ಏನೆ ನಿರ್ಧಾರ ಕೈಗೊಂಡರು ಸಿದ್ದರಾಮಯ್ಯ ಅವರು ಅದನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಬಹುದೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜಕೀಯದಲ್ಲಿ ವಿವಿಧ ಊಹಾಪೋಹಗಳು ಹರಿದಾಡುತ್ತಿರುವ ನಡುವೆ, ಈ ಹೇಳಿಕೆ ಹೊಸ ತಿರುಗು ನೀಡಿದೆ. ಸಿದ್ದರಾಮಯ್ಯ ಅವರ ಮುಂದಿನ ನಡೆ ಏನಾಗಿರಬಹುದು? ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಬಹುದು? ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿವೆ.

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಮುಂದುವರಿಸುವುದಕ್ಕೂ ಅಗತ್ಯವಿದ್ದರೆ ಪದತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಹೇಳಿದ್ದಾರೆ. ಈ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದ್ದು, ಹೈಕಮಾಂಡ್ ನ ಮುಂದಿನ ನಿರ್ಧಾರಕ್ಕೆ ಎಲ್ಲರ ಕಣ್ಣು ನೆಟ್ಟಿದೆ.

Sponsored

ಬೆಂಗಳೂರಿನಲ್ಲಿ ಮಾತನಾಡಿದ ರಾಜಣ್ಣ ಅವರು, ರಾಜ್ಯದಲ್ಲಿ ಉಂಟಾಗಿರುವ ಗೊಂದಲವನ್ನು ಹೈಕಮಾಂಡ್ ಶಿಗರದಲ್ಲಿ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಗೊಂದಲ ಮುಂದುವರೆಯುವುದರಿಂದ ರಾಜ್ಯದ ಆಡಳಿತಕ್ಕೆ ಹಾನಿಯಾಗಬಹುದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರು ಸಿದ್ದರಾಮಯ್ಯ ಅವರು ಅದಕ್ಕೆ ಬದ್ಧರಾಗಿದ್ದು, ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದರು.

ಅಧಿಕಾರ ಶಾಶ್ವತವಲ್ಲ. ಕಳೆದುಕೊಂಡವರು ಮತ್ತೆ ಪಡೆಯುತ್ತಾರೆ. ಹೀಗಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಮನೋಭಾವ ಸಿಎಂ ಅವರಿಗೆ ಇದೆ ಎಂದು ರಾಜಣ್ಣ ಹೇಳಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಮುಂದುವರೆಯಬೇಕು ಎಂಬ ಅಭಿಪ್ರಾಯವನ್ನು ನಾವು ಹೈಕಮಾಂಡ್ಗೆ ತಿಳಿಸಿದ್ದೇವೆ ಎಂದು ಹೇಳಿದರು.

ತದನಂತರ ದಲಿತ ಸಿಎಂ ವಿಚಾರಕ್ಕೆ ನಾನು ಇನ್ನೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಹೇಳಿದರು. ಅಹಿಂದ ವರ್ಗ ಸಂಪೂರ್ಣ ಸಮಾಧಾನದಲ್ಲಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ಸದ್ಯದ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ಶೈಲಿ 2013 - 18 ಅವಧಿಗೆ ಹೋಲಿಸಿದರೆ 2023-28 ಅವಧಿಯಲ್ಲಿ ಸಾಕಷ್ಟು ವ್ಯತ್ಯಾಸವಿದೆ ಎಂದು ರಾಜಣ್ಣ ಅಭಿಪ್ರಾಯ ಪಟ್ಟರು. ಮುಂದಿನ ಚುನಾವಣೆಗೂ ಮುನ್ನ ಇನ್ನೂ ಎರಡು ವರ್ಷ ಬಾಕಿ ಇರುವ ಹಿನ್ನೆಲೆ, ರಾಜಕೀಯದಲ್ಲಿ ಇನ್ನೂ ಅನೇಕ ಬದಲಾವಣೆಗಳು ಸಂಭವಿಸಬಹುದು. ಈಗಲೇ ಮುಂದಿನ ರಾಜಕೀಯ ದಿಕ್ಕನ್ನು ನಿಖರವಾಗಿ ಹೇಳುವುದು ಕಷ್ಟ ಎಂದು ಅವರು ಹೇಳಿದರು.

Sponsored

ಇದಲ್ಲದೆ, ಹಾಲಿ ಸಚಿವ ಸೋಲು ಕುರಿತು ಮಾತನಾಡಿದ ಅವರು, ರಾಜಕೀಯದಲ್ಲಿ ಸೋಲು ಗೆಲುವು ಸಹಜ ಎಂದರು. ಹಿಂದಿನ ಎಸ್ಎಂ ಕೃಷ್ಣ ಅವರ ಆಡಳಿತ ಕಾಲದಲ್ಲಿ ಕೂಡ ಅನೇಕ ಸಚಿವರು ಸೋತ ಉದಾಹರಣೆಗಳನ್ನು ಉಲ್ಲೇಖಿಸಿದರು. ಸ್ವತಃ ಕೃಷ್ಣ ಅವರು ಕ್ಷೇತ್ರ ಬದಲಾವಣೆ ಮಾಡಿದ್ದನ್ನು ನೆನಪಿಸಿದರು.

ರಾಜಕೀಯ ದಿಕ್ಕು ಯಾವತ್ತಿಗೆ ತಿರುಗುತ್ತಿರುತ್ತದೆ ಎಂಬುದನ್ನು ನಿರ್ಧರಿಸಲು ಇನ್ನೂ ಕಾಲ ಪಕ್ವವಾಗಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಸಾಧ್ಯವಿದ್ದು, ಎಲ್ಲವೂ ಪರಿಸ್ಥಿತಿಗೆ ಅನುಗುಣವಾಗಿ ರೂಪಗೊಳ್ಳಲಿದೆ ಎಂದು ರಾಜಣ್ಣ ಹೇಳಿದ್ದಾರೆ.

Also Read:

ಮಂಗಳವಾರದ ದಿನ ಭವಿಷ್ಯ ಮತ್ತು ಪಂಚಾಂಗ: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆದಿದೆ!

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online