belagavi news :
ಬೆಂಗಳೂರು ಜೂ 5: ಕರ್ನಾಟಕ ರಾಜಕೀಯದ ಪ್ರಭಾವಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣ ದಲ್ಲಿ ಒಬ್ಬರೇ ನಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಸದಾ ಬೆಂಬಲಿಗರು, ಶಾಸಕರು ಹಾಗೂ ಅಭಿಮಾನಿಗಳ ಸುತ್ತಲೂ ಕಾಣಿಸಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರು ಈ ಬಾರಿ ಒಂಟಿಯಾಗಿ ಕಾಣಿಸಿಕೊಂಡಿರುವುದು ನೆಟ್ಟಿಗರಲ್ಲಿ ಕುತೂಹಲಕ್ಕೆ ಕಾರಣವಾಗಿದೆ . ಈ ದೃಶ್ಯವನ್ನು ಅನೇಕರು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದು, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ವಿಡಿಯೋ ಹೊರಬಂದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದನ್ನು ಸಾಮಾನ್ಯ ಕ್ಷಣವೆಂದು ಹೇಳುತ್ತಿದ್ದರೆ ಇನ್ನೂ ಕೆಲವರು ರಾಜಕೀಯ ಅರ್ಥವನ್ನು ಹುಡುಕುತ್ತಿದ್ದಾರೆ.
ವಿಧಾನಸೌಧದ ಕಾರಿಡಾರ್ ಹಾಗೂ ಹೊರಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆಲೋಚನೆಯಲ್ಲಿ ಮುಳುಗಿ, ಕೈಗಳನ್ನು ಹಿಂದೆ ಕಟ್ಟಿಕೊಂಡು ಒಬ್ಬರೇ ನಡೆದುಕೊಂಡು ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಥವಾ ಅಧಿಕಾರದಲ್ಲಿದ್ದಾಗ ಅವರ ಸುತ್ತಲೂ ನೂರಾರು ಬೆಂಬಲಿಗರು, ಶಾಸಕರು ಮತ್ತು ಕಾರ್ಯಕರ್ತರು ಇರುತ್ತಿದ್ದರು. ಆದರೆ ಇತ್ತೀಚಿನ ರಾಜಕೀಯ ಬದಲಾವಣೆಗಳ ನಂತರ ಅವರು ಒಬ್ಬರೇ ನಡೆಯುತ್ತಿರುವ ದೃಶ್ಯ ಈಗ ಚರ್ಚೆಗೆ ಕಾರಣವಾಗಿದೆ.
ನೆಟ್ಟಿಗರು ಈ ವಿಡಿಯೋ ಕುರಿತು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, "ಅಧಿಕಾರ ಹೋದ ಮೇಲೆ ರಾಜಕಾರಣಿಗಳು ಒಂಟಿಯಾಗುವುದು ಸಹಜ" ಎಂದು ಕೆಲವರು ವಿಶ್ಲೇಷಿಸುತ್ತಿದ್ದಾರೆ. ಮತ್ತೊಂದು ಕಡೆ ಇದನ್ನು ಸಾಮಾನ್ಯ ಕ್ಷಣವೆಂದು ಕೂಡ ಕೆಲವರು ಹೇಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಎಕ್ಸ್ (ಟ್ವಿಟರ್), ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂಟಿ ಮೆಡಗಿನ ವಿಡಿಯೋ ಭಾರಿ ಪ್ರಮಾಣದಲ್ಲಿ ಶೇರ್ ಆಗುತ್ತಿದ್ದು, ಇದರ ಬಗ್ಗೆ ಪರ-ವಿರೋಧ ಚರ್ಚೆಗಳು ಗರಿಗೆದರಿವೆ.
ವಿರೋಧ ವಲಯದವರು "ಅಧಿಕಾರ ಕಳೆದುಕೊಂಡ ನಂತರ ನಾಯಕ ಒಂಟಿಯಾಗಿದ್ದಾರೆ" ಎಂದು ಟೀಕೆ ಮಾಡುತ್ತಿದ್ದಾರೆ, ಮತ್ತೊಂದೆಡೆ ಅವರ ಬೆಂಬಲಿಗರು " ಅವರು ಒಬ್ಬಂಟಿಯಾಗಿಲ್ಲ, ಕೋಟ್ಯಾಂತರ ಜನರ ಬೆಂಬಲ ಅವರ ಹಿಂದೆ ಇದೆ. ಅವರು ಸದಾ ಜನರ ನಾಯಕ" ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
ಈ ವಿಡಿಯೋ ಈಗ ರಾಜಕೀಯ ವಲಯದಲ್ಲಿಯೂ ಸಾಮಾಜಿಕ ಜಾಲತಾಣಗಳಲ್ಲಿಯೂ ಬಾರಿ ಚರ್ಚೆಗೆ ಕಾರಣವಾಗಿದ್ದು ವಿಭಿನ್ನ ವ್ಯಾಖ್ಯಾನಗಳು ಹೊರ ಬರುತ್ತಿವೆ.
Also Read:
ರಾಜ್ಯಸಭೆ ಚುನಾವಣಾ ಕಣಕ್ಕೆ ಮಲ್ಲಿಕಾರ್ಜುನ್ ಖರ್ಗೆ: ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ